PRABHAVAA.COM

371(J) ಸಮಿತಿ ಸೇವಾ ವಿಚಾರಗಳಿಗೆ ಮಾತ್ರವಲ್ಲ, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೂ ಗಮನಹರಿಸಲಿ: ಡಾ. ಅಜಯ್ ಧರ್ಮಸಿಂಗ್

Bengaluru Urban:

Font size:

371(J) ಸಮಿತಿ ಸೇವಾ ವಿಚಾರಗಳಿಗೆ ಮಾತ್ರವಲ್ಲ, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೂ ಗಮನಹರಿಸಲಿ: ಡಾ. ಅಜಯ್ ಧರ್ಮಸಿಂಗ್

371(J) ಸಮಿತಿ ಸೇವಾ ವಿಷಯಗಳಿಗೆ ಮಾತ್ರ ಸೀಮಿತವಾಗಬಾರದು; ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಯನ್ನೂ ಪರಿಶೀಲಿಸಬೇಕು: ಡಾ. ಅಜಯ್ ಧರ್ಮಸಿಂಗ್

- ಕೇಂದ್ರದಿಂದಲೂ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ವಿಶೇಷ ಅನುದಾನ ನೀಡುವಂತೆ ಒತ್ತಾಯಿಸಲು ಸಚಿವರ ಪ್ರಸ್ತಾವ
- ಶಿಕ್ಷಕರು, ಆರೋಗ್ಯ ಕೇಂದ್ರಗಳು, ಸಿಬ್ಬಂದಿ ಹಾಗೂ ಅಭಿವೃದ್ಧಿ ಅನುದಾನ ಹಂಚಿಕೆಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ಸಮಾನ ಪಾಲು ನೀಡುವಂತೆ ವಿಷಯ ಮಂಡನೆ

ಬೆಂಗಳೂರು, ನವೆಂಬರ್ 6 : ಸಂವಿಧಾನದ ಅನುಚ್ಛೇದ 371(J) ಅನುಷ್ಠಾನಕ್ಕೆ ಸಂಬಂಧಿಸಿದ ಸಚಿವ ಸಂಪುಟ ಉಪಸಮಿತಿಯ ಕಾರ್ಯವ್ಯಾಪ್ತಿಯನ್ನು ಕೇವಲ ಸೇವಾ ಜೇಷ್ಠತೆ ಮತ್ತು ಖಾಲಿ ಹುದ್ದೆಗಳ ವಿಚಾರಗಳಿಗೆ ಸೀಮಿತಗೊಳಿಸದೆ, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ, ಸಿಬ್ಬಂದಿ ಹಂಚಿಕೆ, ಇಲಾಖಾವಾರು ಅನುದಾನ ಹಾಗೂ ಶಿಕ್ಷಣ–ಆರೋಗ್ಯ ಮೂಲಸೌಕರ್ಯದಲ್ಲಿನ ತಾರತಮ್ಯಗಳನ್ನೂ ಸಮಗ್ರವಾಗಿ ಪರಿಶೀಲಿಸಬೇಕು ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರ್ಮಸಿಂಗ್ ಸಭೆಯಲ್ಲಿ ವಿಷಯ ಮಂಡಿಸಿದರು.

ಇಂದು ವಿಕಾಸಸೌಧದಲ್ಲಿ ನಡೆದ 371(J) ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಭಾಗವಹಿಸಿದ ಅವರು, ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಮೂಲ ಆಶಯವೇ ಪ್ರದೇಶದ ಸಮಗ್ರ ಅಭಿವೃದ್ಧಿ ಮತ್ತು ಸಮಾನ ಅವಕಾಶ ಕಲ್ಪಿಸುವುದಾಗಿದೆ. ಹೀಗಾಗಿ 371(J) ಅನುಷ್ಠಾನವನ್ನು ಸೇವಾ ವಿಷಯಗಳಿಗೆ ಮಾತ್ರ ಸೀಮಿತಗೊಳಿಸಬಾರದು ಎಂದು ಪ್ರತಿಪಾದಿಸಿದರು.

ಜೇಷ್ಠತಾ ಪಟ್ಟಿಯ ನಿರ್ಣಯಗಳಿಗೆ ಕಾಲಮಿತಿಯಲ್ಲಿ ಅನುಷ್ಠಾನ

ಜೇಷ್ಠತಾ ಪಟ್ಟಿಗೆ ಸಂಬಂಧಿಸಿದಂತೆ 2023, 2024 ಮತ್ತು 2025ರಲ್ಲಿ ನಡೆದ ಸಭೆಗಳಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದ್ದರೂ, ಅವುಗಳ ಅನುಷ್ಠಾನದಲ್ಲಿ ವಿಳಂಬವಾಗಿರುವ ವಿಷಯವೂ ಸಭೆಯಲ್ಲಿ ಚರ್ಚೆಗೆ ಬಂದಿತು.

ಈ ಹಿಂದಿನ ನಿರ್ಣಯಗಳನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಹಾಗೂ ಸಂಬಂಧಿಸಿದ ಇಲಾಖೆಗಳು ನಿಗದಿತ ಕಾಲಮಿತಿಯೊಳಗೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಸಭೆಯ ಅಧ್ಯಕ್ಷರು ಸೂಚಿಸಿದರು.

ಕೇಂದ್ರದಿಂದಲೂ ವಿಶೇಷ ಅನುದಾನಕ್ಕೆ ಒತ್ತಾಯ

ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಪ್ರತಿ ವರ್ಷ ₹5,000 ಕೋಟಿ ವಿಶೇಷ ಅನುದಾನ ಒದಗಿಸುತ್ತಿದ್ದು, ಇದೇ ಮಾದರಿಯಲ್ಲಿ ಕೇಂದ್ರ ಸರ್ಕಾರವೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತ್ಯೇಕ ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಲು ಸಮಿತಿಯು ನಿಲುವು ಕೈಗೊಳ್ಳುವಂತೆ ಡಾ. ಅಜಯ್ ಧರ್ಮಸಿಂಗ್ ವಿಷಯ ಮಂಡಿಸಿದರು.

“371(J) ಮೂಲಕ ವಿಶೇಷ ಸ್ಥಾನಮಾನ ದೊರೆತಿರುವ ಪ್ರದೇಶಕ್ಕೆ ರಾಜ್ಯ ಸರ್ಕಾರದ ಜೊತೆಗೆ ಕೇಂದ್ರ ಸರ್ಕಾರವೂ ಅಭಿವೃದ್ಧಿ ದೃಷ್ಟಿಯಿಂದ ವಿಶೇಷ ಆರ್ಥಿಕ ನೆರವು ನೀಡಬೇಕು. ಈ ಕುರಿತು ಕೇಂದ್ರದ ಮೇಲೆ ಒತ್ತಡ ತರಬೇಕಾಗಿದೆ,” ಎಂದು ಸಚಿವರು ಅಭಿಪ್ರಾಯಪಟ್ಟರು.

ಅನುದಾನ ಹಂಚಿಕೆಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ಸಮಾನ ಪಾಲು

ಬೆಂಗಳೂರು, ಮೈಸೂರು ಮತ್ತು ಬೆಳಗಾವಿ ವಿಭಾಗಗಳಿಗೆ ವಿವಿಧ ಇಲಾಖೆಗಳ ಮೂಲಕ ನೀಡಲಾಗುತ್ತಿರುವ ಅಭಿವೃದ್ಧಿ ಅನುದಾನದ ಅನುಪಾತದಲ್ಲಿಯೇ ಕಲ್ಯಾಣ ಕರ್ನಾಟಕ ವಿಭಾಗಕ್ಕೂ ಆಯಾ ಇಲಾಖಾವಾರು ಸಮಾನ ಅನುದಾನ ಹಂಚಿಕೆ ಆಗಬೇಕು ಎಂದು ಸಚಿವರು ಸಭೆಯ ಗಮನಕ್ಕೆ ತಂದರು.

ಉಳಿದ ವಿಭಾಗಗಳಿಗೆ ಆಯಾ ಇಲಾಖಾವಾರು ಪ್ರತಿ ವರ್ಷ ಒದಗಿಸುವಷ್ಟೇ ಅನುದಾನವನ್ನು ಕಲ್ಯಾಣ ಕರ್ನಾಟಕ ವಿಭಾಗಕ್ಕೂ ಒದಗಿಸಿ ತದನಂತರ ಹೆಚ್ಚುವರಿಯಾಗಿ ವಿಶೇಷ ಅನುದಾನ ಒದಗಿಸಿದಲ್ಲಿ ಮಾತ್ರ ಸಮಾನ ಅಭಿವೃದ್ಧಿ ಸಾಧಿಸಲು ಸಾಧ್ಯವಿದ್ದು ಎಲ್ಲಾ ಇಲಾಖಾ ಅಧಿಕಾರಿಗಳು ಈ ಕುರಿತು ಕ್ರಮವಹಿಸಲು ಸಮಿತಿ ನಿರ್ದೇಶನ ನೀಡಲು ಕೋರಿದರು.

ವಿವಿಧ ಇಲಾಖೆಗಳು ಕಲ್ಯಾಣ ಕರ್ನಾಟಕದಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಅನುದಾನವನ್ನು ಬಳಕೆಮಾಡಲು ಕಡ್ಡಾಯವಾಗಿ ಮಂಡಳಿಯ ಗಮನಕ್ಕೆ ತಂದು ಸಂಪುಟ ಸಭೆಯಲ್ಲಿ ಮಂಡಿಸಲು ಕ್ರಮವಹಿಸಲು ಸೂಕ್ತ ನಿರ್ದೇಶನ ನೀಡಲು ಸಭೆಯಲ್ಲಿ ಅಭಿಪ್ರಾಯ ಮಂಡಿಸಿದರು.

ಶಿಕ್ಷಕರು, ಆರೋಗ್ಯ ಕೇಂದ್ರಗಳು ಮತ್ತು ಸಿಬ್ಬಂದಿ ಹಂಚಿಕೆಯಲ್ಲಿ ಸಮಾನತೆ

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಸಂಬಂಧಿಸಿದಂತೆ, ರಾಜ್ಯದ ಬೆಂಗಳೂರು, ಮೈಸೂರು ಮತ್ತು ಬೆಳಗಾವಿ ವಿಭಾಗಗಳಿಗೆ ಯಾವ ಅನುಪಾತದಲ್ಲಿ ಶಿಕ್ಷಕರ ಹುದ್ದೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹಂಚಿಕೆ ಮಾಡಲಾಗುತ್ತಿದೆಯೋ, ಅದೇ ಅನುಪಾತದಲ್ಲಿ ಕಲ್ಯಾಣ ಕರ್ನಾಟಕ ವಿಭಾಗಕ್ಕೂ ಹಂಚಿಕೆ ಆಗಬೇಕು ಎಂದು ಡಾ. ಅಜಯ್ ಧರ್ಮಸಿಂಗ್ ಒತ್ತಾಯಿಸಿದರು.

ಇದೇ ತತ್ವವನ್ನು ಇತರ ಇಲಾಖೆಗಳ ಸಿಬ್ಬಂದಿ ಮತ್ತು ಹುದ್ದೆಗಳ ಹಂಚಿಕೆಯಲ್ಲಿ ಕೂಡ ಅನುಸರಿಸಿ, ಕಲ್ಯಾಣ ಕರ್ನಾಟಕಕ್ಕೆ ಸಮಾನ ಅವಕಾಶ ಕಲ್ಪಿಸುವಂತೆ ಅಗತ್ಯ ನಿರ್ದೇಶನ ನೀಡಲು ಸಮಿತಿಯಲ್ಲಿ ನಿರ್ಣಯ ಕೈಗೊಳ್ಳಬೇಕೆಂದು ಅವರು ವಿಷಯ ಮಂಡಿಸಿದರು.

“371(J)ಯ ಉದ್ದೇಶ ಕೇವಲ ಉದ್ಯೋಗ ಮೀಸಲಾತಿಗೆ ಸೀಮಿತವಲ್ಲ. ಕಲ್ಯಾಣ ಕರ್ನಾಟಕದ ಶಿಕ್ಷಣ, ಆರೋಗ್ಯ, ಆಡಳಿತ, ಮೂಲಸೌಕರ್ಯ ಮತ್ತು ಅಭಿವೃದ್ಧಿ ಅವಕಾಶಗಳಲ್ಲಿ ಇರುವ ಅಂತರವನ್ನು ಕಡಿಮೆ ಮಾಡಿ, ರಾಜ್ಯದ ಇತರೆ ಭಾಗಗಳ ಸಮಾನ ಮಟ್ಟಕ್ಕೆ ತರುವುದು ಅದರ ಮೂಲ ಆಶಯವಾಗಿದೆ. ಆ ಆಶಯವನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಬೇಕು,” ಎಂದು ಡಾ. ಅಜಯ್ ಧರ್ಮಸಿಂಗ್ ಹೇಳಿದರು.

ಸಭೆಯಲ್ಲಿ ಗೃಹ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಸಚಿವ ಸಂಪುಟ ಉಪಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Comments

Leave a Comment

Prev Post ಶೀಘ್ರದಲ್ಲೇ ಮುಖ್ಯಮಂತ್ರಿಗಳಿಂದ ನೂತನ ಜವಳಿ ನೀತಿ ಅನಾವರಣ: ಸಚಿವ ರುದ್ರಪ್ಪ ಲಮಾಣಿ
Next Post ಬರ ನಿರ್ವಹಣೆ; ರಾಜ್ಯ ಸರಕಾರ ಕಾಟಾಚಾರಕ್ಕೆ ಕೇಂದ್ರದ ಜತೆ ವ್ಯವಹರಿಸುತ್ತಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ತರಾಟೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News