PRABHAVAA.COM

ಬರ ನಿರ್ವಹಣೆ; ರಾಜ್ಯ ಸರಕಾರ ಕಾಟಾಚಾರಕ್ಕೆ ಕೇಂದ್ರದ ಜತೆ ವ್ಯವಹರಿಸುತ್ತಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ತರಾಟೆ

Bengaluru Urban:

Font size:

ಗ್ಯಾರಂಟಿ ನಷ್ಟ ಭರ್ತಿ ಮಾಡಲು ಜನರನ್ನು ದೋಚಲಾಗುತ್ತಿದೆ ಎಂದು ಕಿಡಿ

ಬರ ನಿರ್ವಹಣೆ; ರಾಜ್ಯ ಸರಕಾರ ಕಾಟಾಚಾರಕ್ಕೆ ಕೇಂದ್ರದ ಜತೆ ವ್ಯವಹರಿಸುತ್ತಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ತರಾಟೆ

ಪ್ರಧಾನಿ, ಗೃಹ ಸಚಿವರನ್ನು ಭೇಟಿಯಾಗದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ

ಕೇಂದ್ರದ ಅನುದಾನಕ್ಕೆ ಕಾಯದೆ ಸಾಲಮನ್ನಾ ಮಾಡಿ ದಿಟ್ಟ ನಿರ್ಧಾರ ಮಾಡಿದ್ದೆ

ಗ್ಯಾರಂಟಿ ನಷ್ಟ ಭರ್ತಿ ಮಾಡಲು ಜನರನ್ನು ದೋಚಲಾಗುತ್ತಿದೆ ಎಂದು ಕಿಡಿ

ಪ್ರಿಯಾಂಕ್ ಖರ್ಗೆಗೆ ತಿರುಗೇಟು; ಈ ಹಳ್ಳಿ ಗುಗ್ಗುನೆ ಸಾಲಮನ್ನಾ ಮಾಡಿದ್ದು

ಬೆಂಗಳೂರು , ನ. 6 -

ರಾಜ್ಯದಲ್ಲಿ ಉಂಟಾಗಿರುವ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿರುವ ರಾಜ್ಯ ಕಾಂಗ್ರೆಸ್ ಸರಕಾರ; ಇದುವರೆಗೂ ಪ್ರಧಾನಿಯನ್ನಾಗಲಿ, ಗೃಹ ಸಚಿವರನ್ನಾಗಲಿ ಅಥವಾ ಸಂಬಂಧಿತ ಸಚಿವರನ್ನು ಭೇಟಿಯಾಗದೆ ಕೇಂದ್ರ ಸರಕಾರ ನೆರವು ನೀಡಬೇಕು ಎಂದು ಕಾಟಾಚಾರಕ್ಕೆ ಹೇಳುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು.

ಬೆಂಗಳೂರಿನ ವಿಜಯನಗರದಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ (BHEL) ಕಾರ್ಖಾನೆಯ ಆವರಣದಲ್ಲಿ 71ನೆ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು.

ಕೇಂದ್ರದ ಬಳಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯುವ ರಾಜ್ಯ ಸರ್ಕಾರದ ಆಲೋಚನೆಯನ್ನು ಕಟುವಾಗಿ ಟೀಕಿಸಿದ ಅವರು; ಸರ್ಕಾರವು ಕಳೆದ ಎರಡು ತಿಂಗಳಿಂದ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೇವಲ ಪತ್ರಗಳನ್ನು ಬರೆಯುವುದರಲ್ಲಿಯೇ ಕಾಲಹರಣ ಮಾಡುತ್ತಿದೆ. ₹3,000 ಕೋಟಿಯಿಂದ ಆರಂಭಿಸಿ ಈಗ ₹26,000 ಕೋಟಿ ಪರಿಹಾರ ಕೇಳುತ್ತಿದ್ದಾರೆ, ಆದರೆ, ಕನಿಷ್ಠ ಸೌಜನ್ಯಕ್ಕಾದರೂ ಮುಖ್ಯಮಂತ್ರಿಗಳಾಗಲಿ, ಕಂದಾಯ ಅಥವಾ ಕೃಷಿ ಸಚಿವರಾಗಲಿ ಒಮ್ಮೆಯಾದರೂ ನವದೆಹಲಿಗೆ ತೆರಳಿ ಪ್ರಧಾನಿ ಅಥವಾ ಗೃಹ ಸಚಿವರನ್ನು ಖುದ್ದಾಗಿ ಭೇಟಿ ಮಾಡಿಲ್ಲ. ಕೇಂದ್ರದ ಮನವೊಲಿಸುವ ಯಾವುದೇ ಪ್ರಾಮಾಣಿಕ ಪ್ರಯತ್ನ ಮಾಡದೆ ಈಗ ಸರ್ವಪಕ್ಷ ನಿಯೋಗದ ನಾಟಕವಾಡುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.

ತಾವು ಮುಖ್ಯಮಂತ್ರಿಯಾಗಿದ್ದಾಗ ಇದೇ ರೀತಿಯ ಸಮಸ್ಯೆ ಎದುರಾಗಿತ್ತು, ರೈತರು ಸಂಕಷ್ಟದಲಿದ್ದರು. ಆದರೆ ಆಗ ಕೇಂದ್ರ ಸರ್ಕಾರದ ಅನುದಾನಕ್ಕೆ ಕಾಯದೆ, ರಾಜ್ಯದ ಜನತೆಯ ತೆರಿಗೆ ಹಣದಲ್ಲಿ ₹25,000 ಕೋಟಿ ರೈತರ ಸಾಲ ಮನ್ನಾ ಮಾಡಿದ್ದೆ ಎಂಬುದನ್ನು ಕೇಂದ್ರ ಸಚಿವರು ರಾಜ್ಯ ಸರಕಾರಕ್ಕೆ ನೆನಪು ಮಾಡಿಕೊಟ್ಟರು.

ಅಂದು ನಾನು ಖುದ್ದಾಗಿ ರಾಷ್ಟ್ರಪತಿಗಳನ್ನು ಭೇಟಿಯಾಗಿ ಋಣಮುಕ್ತ ಕಾಯ್ದೆಗೆ ಅಂಕಿತ ಪಡೆದು ತಂದಿದ್ದೆ ಹಾಗೂ ಈಗಿನ ಉಪ ಮುಖ್ಯಮಂತ್ರಿಗಳು ಅಂದಿನ ತಮ್ಮ ಸರ್ಕಾರದಲ್ಲೇ ಇದ್ದರು ಎಂಬುದನ್ನು ಕುಮಾರಸ್ವಾಮಿ ಅವರು ನೆನಪಿಸಿದರು.

ಉಚಿತ ಯೋಜನೆಗಳ ಹೆಸರಿನಲ್ಲಿ ಜನರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡಿ, ಈಗ ಬಸ್ ಟಿಕೆಟ್ ದರವನ್ನು ಶೇ.33ರಿಂದ 40ರಷ್ಟು ಹೆಚ್ಚಿಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಚಿವರು; ಹಾಲಿನ ದರವನ್ನು ₹8 ಏರಿಕೆ ಮಾಡುತ್ತಿರುವುದು ರೈತರಿಗೆ ನೇರವಾಗಿ ತಲುಪುವುದಾದರೆ ನನ್ನ ಸಂಪೂರ್ಣ ಸ್ವಾಗತವಿದೆ, ಆದರೆ, ವಿಪರೀತವಾಗಿ ಬೆಲೆ ಏರಿಕೆಯಿಂದ ಮಾರುಕಟ್ಟೆಯಲ್ಲಿ ನಂದಿನಿ ಹಾಲು ಮಾರಾಟವಾಗದೆ, ಭವಿಷ್ಯದಲ್ಲಿ ಖಾಸಗಿ ಡೇರಿಗಳು ಮಾರುಕಟ್ಟೆಯನ್ನು ಆಕ್ರಮಿಸಿಕೊಳ್ಳುವ ಅಪಾಯವಿದೆ ಎಂದು ಎಚ್ಚರಿಸಿದರು.

ಹಳ್ಳಿ ರೈತರ ಸಾಲಮನ್ನಾ ಮಾಡಿದ್ದೆ, ಅದಕ್ಕೆ ನಾನು ಅವಿವೇಕಿ!!:

ತಮ್ಮನ್ನು ಹಳ್ಳಿ ಗುಗ್ಗು, ಅವಿವೇಕಿ ಎಂದು ನಾಲಿಗೆ ಜಾರಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಹೌದು ನಾನು ಅವಿವೇಕಿ, ಅದಕ್ಕಾಗಿಯೇ 25,000 ಕೋಟಿ ಸಾಲಮನ್ನಾ ಮಾಡಿದೆ ಎಂದು ತಿರುಗೇಟು ನೀಡಿದರು.

ತಮ್ಮನ್ನು 'ಅವಿವೇಕಿ' ಎಂದ ವ್ಯಕ್ತಿಗೆ ಹೆಸರು ಹೇಳದೆಯೇ ಪ್ರತ್ಯುತ್ತರ ಕೊಟ್ಟ ಕೇಂದ್ರ ಸಚಿವರು; "ಹೌದು, ನಾನು ಅವಿವೇಕಿ ಆಗಿದ್ದರಿಂದಲೇ ರೈತರ ಕಷ್ಟಕ್ಕೆ ಸ್ಪಂದಿಸಿ 25,000 ಕೋಟಿ ಸಾಲವನ್ನು ಒಂದೇ ಕಂತಿನಲ್ಲಿ ಮನ್ನಾ ಮಾಡಿದೆ. ನಾನು ಇವರಂತೆ ವಿವೇಕಿ ಆಗಿದ್ದಿದ್ದರೆ, ಅದೇ 25,000 ಕೋಟಿ ಹಣವನ್ನು ರಸ್ತೆ ಮತ್ತು ಇತರ ಕಾಮಗಾರಿಗಳಿಗೆ ಸುರಿದು 30-40% ಕಮಿಷನ್ ಹೊಡೆಯುತ್ತಿದ್ದೆ" ಎಂದು ಮಾರ್ಮಿಕವಾಗಿ ಚಾಟಿ ಬೀಸಿದರು.

ಬುದ್ಧ, ಸಿದ್ಧಾರ್ಥನ ಹೆಸರಿನಲ್ಲಿ ಲೂಟಿ:

ತಾವು ರಾಜಕಾರಣದಲ್ಲಿ ಅಥವಾ ಮುಖ್ಯಮಂತ್ರಿಯಾಗಿದ್ದಾಗ ಯಾವುದೇ ರಿಯಲ್ ಎಸ್ಟೇಟ್ ದಂಧೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ತಮ್ಮ ಮೇಲಿನ ಆರೋಪಗಳನ್ನು ಸಾಬೀತುಪಡಿಸುವಂತೆ ಪ್ರಿಯಾಂಕ್ ಖರ್ಗೆಗೆ ಸವಾಲು ಹಾಕಿದರು.

ರಾಜಕಾರಣಕ್ಕೆ ಬರುವ ಮುನ್ನವೇ ಚಿತ್ರರಂಗದಲ್ಲಿದ್ದಾಗ ಬಿಡದಿ ಬಳಿ 45 ಎಕರೆ ಜಮೀನು ಖರೀದಿಸಿದ್ದೆ. ಆದರೆ ಇವರು ಸಿದ್ದಾರ್ಥ್ ಟ್ರಸ್ಟ್ ಹೆಸರಿನಲ್ಲಿ ಏರೋಸ್ಪೇಸ್ ಪಾರ್ಕ್ ಹಾಗೂ ಕಲಬುರಗಿಯಲ್ಲಿ ಸ್ಮಾರಕ ಮಾಡುತ್ತೇವೆ ಎಂದು ಸರ್ಕಾರಿ ಜಮೀನು ಕಬಳಿಸಿದ್ದಾರೆ, ಹೀಗಾಗಿ ನನ್ನ ಬಗ್ಗೆ ಮಾತನಾಡುವ ಮುನ್ನ ಅವರು ನೈತಿಕತೆ ಕಲಿಯಿರಿ ಎಂದು ತೀಕ್ಷ್ಣವಾಗಿ ಎಚ್ಚರಿಸಿದರು.

Comments

Leave a Comment

Prev Post 371(J) ಸಮಿತಿ ಸೇವಾ ವಿಚಾರಗಳಿಗೆ ಮಾತ್ರವಲ್ಲ, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೂ ಗಮನಹರಿಸಲಿ: ಡಾ. ಅಜಯ್ ಧರ್ಮಸಿಂಗ್
Next Post ಖಾದಿಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ರಾಯಭಾರಿಗಳ ನೇಮಕ: ಕಾಶಪ್ಪನವರ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News