PRABHAVAA.COM

ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್

Hassan:

Font size:

ಇಂಧನ ಬೆಲೆ ಏರಿಕೆಯಾದ ಕಾರಣ ಗ್ಯಾರಂಟಿ ಯೋಜನೆಗಳು ಜಾರಿ

ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ

ಹಾಸನ, ನ. 08:

"ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿ ಯೋಜನೆಗಳಿಗೆ ಕುತ್ತು ಉಂಟಾಗಲಿದೆ. ಇದು ಜನರಿಗೆ ಅರ್ಥವಾಗಿದೆ. ಆದ ಕಾರಣಕ್ಕೆ ಜನರು ಅವರನ್ನು ಅಧಿಕಾರಕ್ಕೆ ಬರಲು ಅವಕಾಶ ಕೊಡುವುದಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಹಾಸನ ಜಿಲ್ಲೆಯ ಭುವನಹಳ್ಳಿ ಹೆಲಿಪ್ಯಾಡ್ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

ಗ್ಯಾರಂಟಿಗಳನ್ನು ಕೊಟ್ಟು ರಾಜ್ಯವನ್ನು ಹಾಳು ಮಾಡಲಾಗಿದೆ ಎನ್ನುವ ಕುಮಾರಸ್ವಾಮಿ ಹಾಗೂ ಬಿಜೆಪಿಯವರ ಟೀಕೆಗಳ ಬಗ್ಗೆ ತಿರುಗೇಟು ನೀಡಿದರು.

"ವಿಪಕ್ಷಗಳಿಗೆ ಟೀಕೆ ಮಾಡಲು ಬೇರೆ ವಿಚಾರಗಳು ಏನಿವೆ? ರಾಜ್ಯದ ಜನರಿಗೆ ನಮ್ಮ ಎಲ್ಲಾ ಗ್ಯಾರಂಟಿಗಳು ಯಶಸ್ವಿಯಾಗಿ ತಲುಪುತ್ತಿವೆ. ಇದನ್ನು ಸಹಿಸಲು ಅವರಿಗೆ ಆಗುತ್ತಿಲ್ಲ. ಜನತಾದಳ ಹಾಗೂ ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ವಿರೋಧಿಗಳು" ಎಂದರು.

ಇಂಧನ ಬೆಲೆ ಏರಿಕೆಯಾದ ಕಾರಣ ಗ್ಯಾರಂಟಿ ಜಾರಿಯಾಗಿದ್ದು

ಬೆಲೆ ಏರಿಕೆ ವಿರುದ್ದ ಟೀಕೆಗಳ ಕುರಿತು ಕೇಳಿದಾಗ, "ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದ್ದರಿಂದಲೇ ಐದು ಗ್ಯಾರಂಟಿಗಳನ್ನು ಜಾರಿಗೆ ತಂದು ಜನರಿಗೆ ನೆರವಾಗುತ್ತಿದ್ದೇವೆ. ರೈತರಿಗೆ ಇನ್ಪುಟ್ ಸಬ್ಸಿಡಿ ಮೊತ್ತವನ್ನು 2,500 ರಿಂದ 5,000 ರೂಪಾಯಿಗಳಿಗೆ ಹೆಚ್ಚಳ ಮಾಡಲಾಗಿದೆ. ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಸಬ್ಸಿಡಿ 30 ಸಾವಿರ ಕೋಟಿಗಳಿಗೆ ಏರಿಕೆಯಾಗಿದೆ. ಹಾಲಿನ ಬೆಲೆ ಏರಿಕೆಯಿಂದಾಗಿ ರೈತನಿಗೆ ಅನುಕೂಲವಾಗುತ್ತಿದೆ. ಇದರಿಂದ ಗ್ರಾಹಕರಿಗೆ ಹೆಚ್ಚಿನ ಹೊರೆಯಾಗುತ್ತಿಲ್ಲ. ಬೇರೆ ರಾಜ್ಯಗಳಿಗೆ ಹೋಲಿಸಿದಾಗ ನಮ್ಮ ರಾಜ್ಯದ ಹಾಲಿನ ಬೆಲೆ ಕಡಿಮೆ ಇದೆ. ಆದರೂ ಪ್ರತಿಪಕ್ಷಗಳು ಪ್ರತಿಭಟನೆ‌ ಮಾಡುತ್ತಿವೆ"ಎಂದರು.

ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ

"ಬಿಜೆಪಿಯವರಿಗೆ ಕೇಂದ್ರ ಸರ್ಕಾರದಿಂದ ಯಾವುದೇ ಅನುದಾನವನ್ನು ರಾಜ್ಯಕ್ಕೆ ಕೊಡಿಸಲು ಆಗಿಲ್ಲ. ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯನ್ನು ತಡೆಗಟ್ಟಲಿಲ್ಲ. ಕಬ್ಬು ಬೆಳೆಗಾರರ ಪರವಾಗಿ ತೀರ್ಮಾನ ಮಾಡುತ್ತಿಲ್ಲ. 10 ವರ್ಷಗಳಿಂದ ಸಕ್ಕರೆ ಬೆಲೆ ಹೆಚ್ಚಳ ಮಾಡಿಲ್ಲ. ರೈತರು ಕೇಳುವುದರಲ್ಲಿ ತಪ್ಪೇನಿಲ್ಲ. ಎಲ್ಲಾ ಬೆಲೆ ಹೆಚ್ಚಳವಾಗುತ್ತಿರುವಾಗ ಸಕ್ಕರೆ ಬೆಲೆಯನ್ನು ನಿಗದಿ ಮಾಡಬೇಕಾದ್ದು ಕೇಂದ್ರ ಸರ್ಕಾರದ ಜವಾಬ್ದಾರಿ. ಅದನ್ನು ಏಕೆ ಮಾಡುತ್ತಿಲ್ಲ. ಅವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ" ಎಂದರು.

ಹಾಲಿನ ಸೊಸೈಟಿಗಳು ಉಳಿಯಬೇಕು

ಹಾಸನ ಹಾಲು ಒಕ್ಕೂಟಕ್ಕೆ ಎಂಟುವರೆ ಕೋಟಿ ನಷ್ಟವಾಗುತ್ತಿದೆ ಎನ್ನುವ ಶಾಸಕ ಹೆಚ್ ಡಿ ರೇವಣ್ಣ ಹೇಳಿಕೆ ಬಗ್ಗೆ ಕೇಳಿದಾಗ "ಬೆಲೆ ಜಾಸ್ತಿಯಾದರೂ ನಷ್ಟವಾಗುತ್ತಿದೆ ಎಂದರೆ ಅವರು ಒಕ್ಕೂಟವನ್ನು ಹೇಗೆ ನಡೆಸುತ್ತಿರಬಹುದು? ಹೇಗೆ ನಷ್ಟವಾಗುತ್ತಿದೆ? ಎಂಬ ಬಗ್ಗೆ ಕೆಎಂಎಫ್ ಕಾರ್ಯದರ್ಶಿಗಳನ್ನು ಕರೆದು ವಿಚಾರಿಸುತ್ತೇನೆ. ಅವರ ಸಮಸ್ಯೆಗಳೇನು ಎಂದು ಕೇಳುತ್ತೇನೆ. ಹಾಲಿನ ಸೊಸೈಟಿಗಳು ಉಳಿಯಬೇಕು. ಈ ಸಮಸ್ಯೆ ಬಗ್ಗೆ ನಾನು ಹೊಸದಾಗಿ ಕೇಳುತ್ತಿದ್ದೇನೆ. ಅವರಷ್ಟು ನನಗೆ ಅನುಭವವಿಲ್ಲ" ಎಂದು ಹೇಳಿದರು.

ರಾಜ್ಯದ ವಿಚಾರವಾಗಿ ಪ್ರಧಾನಿಗಳೊಂದಿಗೆ ಚರ್ಚೆ

"ಮೆಟ್ರೋ ಗುಲಾಬಿ ಮಾರ್ಗದ ಉದ್ಘಾಟನೆಗಾಗಿ ಪ್ರಧಾನಮಂತ್ರಿಗಳು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ವೇಳೆ ಬರಗಾಲ ಸೇರಿದಂತೆ ರಾಜ್ಯಕ್ಕೆ ಸಂಬಂಧಿಸಿದ ಅನೇಕ ವಿಚಾರಗಳ ಬಗ್ಗೆ ಅವರ ಗಮನ ಸೆಳೆಯಲಿದ್ದೇನೆ" ಎಂದು ಹೇಳಿದರು.

ಹಾಸನಾಂಬ ಕಾರಿಡಾರ್ ಬಗ್ಗೆ ಸರ್ಕಾರದ ಮುಂದೆ ಪ್ರಸ್ತಾವನೆ ಇಲ್ಲ

ಹಾಸನಾಂಬ ದೇವಾಲಯದ ಅಭಿವೃದ್ಧಿಗೆ ಯಡಿಯೂರಪ್ಪ ಸರ್ಕಾರ ಬಿಟ್ಟರೆ ಬೇರೆ ಯಾವ ಸರ್ಕಾರವು ಅನುದಾನ ಘೋಷಣೆ ಮಾಡಿಲ್ಲ. ನಿಮ್ಮ ಸರ್ಕಾರ ಹಾಸನಾಂಬ ಕಾರಿಡಾರ್ ಗೆ ಅನುದಾನ ಬಿಡುಗಡೆ ಮಾಡಲಿದೆಯೇ ಎಂದು ಕೇಳಿದಾಗ "ಈ ಬಗ್ಗೆ ಜಿಲ್ಲಾ ಆಡಳಿತದ ಬಳಿ ಮಾತನಾಡುತ್ತೇನೆ. ನನ್ನವರೆಗೆ ಯಾವ ಪ್ರಸ್ತಾವನೆಯೂ ಬಂದಿಲ್ಲ. ಮಾಧ್ಯಮಗಳು ಮಾತ್ರ ಕೇಳುತ್ತಿದ್ದೀರಿ. ಕುಂದು ಕೊರತೆಗಳೇನು ಎಂದು ವಿಚಾರಿಸಿದ ನಂತರ ಮಾತನಾಡುತ್ತೇನೆ" ಎಂದರು.

"ಬೆಳಕಿನ ಹಬ್ಬ ದೀಪಾವಳಿ ಜನರ ಬದುಕಿನಲ್ಲಿ ಬೆಳಕು ತುಂಬಲಿ ಎಂದು ಸರ್ಕಾರದ ಪರವಾಗಿ ಪ್ರಾರ್ಥನೆ ಮಾಡುತ್ತಿದ್ದೇನೆ. ಬಹಳ ಸಂತೋಷದಿಂದ ಹಾಸನಾಂಬೆ ದರ್ಶನಕ್ಕೆ ಬಂದಿದ್ದೇನೆ. ಕಳೆದ ಬಾರಿ ಕೃಷ್ಣ ಬೈರೇಗೌಡರು ಬಹಳ ಶಿಸ್ತಿನಿಂದ ಹಾಸನಾಂಬ ದರ್ಶನವನ್ನು ಆಯೋಜಿಸಿದ್ದರು. ಈ ಬಾರಿಯೂ ಬಹಳ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ಮಾಧ್ಯಮಗಳು ತಿಳಿಸಿವೆ. ಬರಗಾಲ ಇದ್ದರೂ ಕೂಡ ಇಲ್ಲಿಗೆ ಭೇಟಿ ನೀಡಿ ತಾಯಿ ಆಶೀರ್ವಾದ ಪಡೆದಿದ್ದಾರೆ" ಎಂದು ತಿಳಿಸಿದರು.

Comments

Leave a Comment

Prev Post ಬಸ್‌ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ KSRTC ಸಾಂದರ್ಭಿಕ ಒಪ್ಪಂದದ ಬಸ್‌ ದರಗಳಲ್ಲೂ ಹೆಚ್ಚಳ; ನವೆಂಬರ್ 8 ರಿಂದ ಹೊಸ ದರ ಜಾರಿ
Next Post ‎ಕತಾರ್ ಕರ್ನಾಟಕ ಸಂಘದ 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮ ‘ಕರುನಾಡ ವೈಭವ-2026’

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News