PRABHAVAA.COM

ಬೆಲೆ ಏರಿಕೆ ವಿರುದ್ಧ ನ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆ

Bengaluru Urban:

Font size:

ಬೆಲೆ ಏರಿಕೆ ವಿರುದ್ಧ ನ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ಹಾಲು, ಬಸ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಸಾಮಾನ್ಯದ ಹಬ್ಬದ ಖುಷಿಗೆ ಬರೆ ಎಳೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ.
ಧÀವಳಗಿರಿ ನಿವಾಸದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನಸಾಮ್ಯಾನರು, ಬಡವರು, ರೈತರು, ಯುವಕರು ಯಾರೂ ಸಂತೋಷದಿಂದ ಹಬ್ಬ ಆಚರಣೆ ಮಾಡದಂತೆ ಸರ್ಕಾರ ಮಾಡಿದೆ. ರಾಜ್ಯ ಸರ್ಕಾರಕ್ಕೆ ಜನರು ಹಿಡಿಶಾಪ ಹಾಕ್ತಾ ಇದ್ದಾರೆ. ಇದಕ್ಕೆಲ್ಲ ಕಾರಣ ಅವೈಜ್ಞಾನಿಕವಾಗಿ ದರ ಏರಿಕೆ. ಮೂರೂವರೆ ವರ್ಷದಲ್ಲಿ ಸರ್ಕಾರದ ಸಾಧನೆ ಇದೊಂದೆ ಎಂದು ಟೀಕಿಸಿದರು.
ತೈಲ ಉತ್ಪನ್ನಗಳ ಮೇಲಿನ ತೆರಿಗೆ ಎರಡರಿಂದ ಮೂರು ಪಟ್ಟು ಹೆಚ್ಚಿಸಿದರು. ಮದ್ಯ, ನೀರಿನ ತೆರಿಗೆ ಹೆಚ್ಚಳ ಮಾಡಿದರು. ಜಂಗಲ್ ಸಪಾರಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಎಕ್ಸರೆ, ಹೊರ ರೊಗಿ ತಪಾಸಣೆ ದರ ಜಾಸ್ತಿ ಮಾಡಿ ಜನರು ಬದುಕುವಂತೆಯೇ ಇಲ್ಲದಾಗಿದೆ ಎಂದು ದೂರಿದರು.
ಹಾಲಿನ ಮೇಲೆ 8 ರೂಪಾಯಿ ಮೊಸರಿನ ಮೇಲೆ 16 ರುಪಾಯಿ ದರ ಏರಿಕೆ ಮಾಡಲಾಗಿದೆ. ಬಸ್ ದರ 45 ರಿಂದ 50 ರೂಪಾಯಿ ಮಾಡಿದ್ದೇವೆ ಎಂದರು. ವಾಸ್ತವದಲ್ಲಿ ಹಾಲಿನ ಮೇಲೆ 8 ರಿಂದ 13 ರೂ ಏರಿಕೆ ಆಗಿದೆ. ತುಪ್ಪ 180 ಜಾಸ್ತಿ ಆಗಿದೆ. ಬಸ್ ದರ ಹಲವು ಕಡೆ ಶೇ 70 ದರ ಏರಿಕೆ ಆಗಿದೆ ಎಂದು ಮಾಹಿತಿ ನೀಡಿದರು.
ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಿದ್ದಾಗ ಹಾಲಿನ ಪೆÇ್ರೀತ್ಸಾಹ ಧನವನ್ನು ಗ್ರಾಹಕರಿಂದ ಕೊಡಿಸಿರಲಿಲ್ಲ. ಬದಲಿಗೆ ಸರ್ಕಾರದಿಂದಲೇ ಕೊಟ್ಟಿದ್ದರು. ಆದರೆ ಈಗ ಸರ್ಕಾರ ಗ್ರಾಹಕರಿಗೆ ಹೊರೆ ಮಾಡುತ್ತಿದೆ ಎಂದು ದೂರಿದರು.

ಶಕ್ತಿ ಯೋಜನೆಯೇ ಕಾರಣ...
ಶಕ್ತಿ ಯೋಜನೆ ಜಾರಿಯಿಂದಾಗಿ ಸರ್ಕಾರ ಪದೇ ಪದೇ ಬಸ್ ದರ ಏರಿಕೆ ಮಾಡುತ್ತಿದೆ. ಸಾರಿಗೆ ನಿಗಮಗಳಿಗೆ ಹಣ ನೀಡದೆ ಬಾಕಿ ಇರುವುದರಿಂದ ಡಿಪೆÇೀಗಳಲ್ಲೇ ಬಸ್‍ಗಳು ನಿಲ್ಲುತ್ತಿವೆ. ಇದು ರಾಜ್ಯದ ಇತಿಹಾಸದಲ್ಲೇ ಮೊದಲು. ಗ್ರಾಮೀಣ ಪ್ರದೇಶಗಳಲ್ಲಿ ಶೇ 50 ರಷ್ಟು ಬಸ್ ಓಡಾಡ್ತ ಇಲ್ಲ. ಇದರಿಂದ ವಿದ್ಯಾರ್ಥಿಗಳ ತೊಂದರೆ ಆಗಿದೆ ಎಂದರು.
ಕಬ್ಬು ಬೆಳೆಗಾರರಿಗೆ ಹಣ ನೀಡಲು ಖಜಾನೆಯಲ್ಲಿ ಹಣ ಇಲ್ಲ ಎಂದು ಸಿಎಂ ಹೇಳಿದ್ದಾರೆ. ಆರ್ಥಿಕ ಪರಿಸ್ಥಿತಿಯನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಲು ಸರ್ಕಾರ ವಿಫಲವಾಗಿದೆ. ದರ ಏರಿಕೆ ಮೂಲಕ ಜನರ ಮೇಲೆ ಗದಾ ಪ್ರಹಾರವನ್ನು ಸರ್ಕಾರ ಮಾಡಿದೆ. ಸರ್ಕಾರಿ ಶಾಲೆಗಳನ್ನು ಖಾಸಗಿ ಕಂಪನಿಗಳು ದತ್ತು ಪಡೆಯಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರ ತನ್ನ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದೆ. ಇದರರ್ಥ ಶಿಕ್ಷಣಕ್ಕೆ ಹಣ ಕೊಡಲು ಇಲ್ಲ. ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಸಿಎಂ ಮಗಳೇ ಬಿಡಿಸಿ ಇಟ್ಟಿದ್ದಾರೆ. ಸಚಿವರು ಸಿಎಸ್‍ಆರ್ ಫಂಡ್ ಮೇಲೆ ಅವಲಂಬಿಸಿದ್ದಾರೆ. ಇಂತಹ ದುಸ್ಥಿತಿ ಎಂದೂ ಬಂದಿರಲಿಲ್ಲ ಎಂದು ವಿವರಿಸಿದರು.

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ....
ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಇದೆ. ಸರ್ಕಾರ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕು. ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಇದೇ 11 ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಬೆಳಗ್ಗೆ 11.00 ಗಂಟೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಬಿಜೆಪಿ ಶಾಸಕರು, ಸಂಸದರು, ಮಾಜಿ ಸಚಿವರು, ಎಲ್ಲಾ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ರಾಜ್ಯ ಸರ್ಕಾರಕ್ಕೆ ಜನರ ಪರವಾಗಿ ಎಚ್ಚರಿಕೆ ನೀಡಲಾಗುವುದು. ಜಿಲ್ಲಾ ಕೇಂದ್ರಗಳಲ್ಲಿ ಈಗಾಗಲೇ ಪಾದಯಾತ್ರೆ ನಡೆಯುತ್ತಿದೆ. ಬೆಲೆ ಏರಿಕೆ ವಿರುದ್ಧವೂ ಪಾದಯಾತ್ರೆ ನಡೆಯಲಿದೆ. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ತೈಲ ಬೆಲೆ ಏರಿಕೆಗೆ ಜಾಗತಿಕ ಮಟ್ಟದಲ್ಲಿ ಹಲವಾರು ಕಾರಣಗಳಿವೆ. ಕೇಂದ್ರ ಸರ್ಕಾರ ಹಲವು ಯೋಜನೆಗಳಿಗೆ ಹೂಡಿಕೆ ಮಾಡುತ್ತಿದೆ. ಆದರೆ ರಾಜ್ಯಸರ್ಕಾರ ಯಾವುದೇ ಬಂಡವಾಳ ಹೂಡಿಕೆ ಮಾಡುತ್ತಿಲ್ಲ. ಹೊಸ ಯೋಜನೆ ಸಹ ನೀಡಿಲ್ಲ. ಪೆಟ್ರೋಲ್ ಡೀಸೆಲ್ ಮೇಲಿನ ಸೆಸ್ ಸಹ ಜಾಸ್ತಿ ಮಾಡಿದ್ದಾರೆ. ಶಾಸಕರಿಗೆ ಅನುದಾನ ನೀಡಿಲ್ಲ. ಈ ಬಗ್ಗೆ ಸಿಎಂ ಗಮನ ಹರಿಸಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಎಥೆನಾಲ್ ಬ್ಲೆಂಡಿಂಗ್ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ. ತೈಲ ಕಂಪನಿಗಳು ಈಗಾಗಲೇ ಸ್ಪಷ್ಟೀಕರಣ ನೀಡಿವೆ. ಗುಣಮಟ್ಟ ಪರೀಕ್ಷೆ ಸರಿಯಾಗಿ ನಡೆದಿಲ್ಲ. ರಾಜ್ಯ ಸರ್ಕಾರ ಯಾವ ಮಾನದಂಡಗಳನ್ನು ಅನುಸರಿಸಿ ತೈಲ ಪರೀಕ್ಷೆ ಮಾಡಿದೆಯೋ ಗೊತ್ತಿಲ್ಲ. ಮತ್ತೊಮ್ಮೆ ಪರೀಕ್ಷೆ ಮಾಡಲು ನಾವು ತಯಾರು ಇದ್ದೇವೆ ಎಂದರು.

ರಾಜ್ಯ ಸರ್ಕಾರದ ಹಣೆ ಬರಹ ಏನೆಂದು ಜನರಿಗೆ ಗೊತ್ತಿದೆ. ಇವರು ಈಗಾಗಲೇ ವಿಧಾನ ಪರಿಷತ್ ನ ನಾಲ್ಕು ಕ್ಷೇತ್ರಗಳಲ್ಲಿ ಸೋಲು ಕಂಡಿದ್ದಾರೆ. ಪ್ರಿಯಾಂಕ್ ಖರ್ಗೆ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ತಮ್ಮ ಇಲಾಖೆಗಳಲ್ಲಿ ಏನು ಮಾಡಿದ್ದಾರೆ ಎಂಬುದನ್ನು ಜನರಿಗೆ ತಿಳಿಸಲಿ. ಕೇವಲ ಪೆÇೀಸ್ಟರ್ ಕ್ಯಾಂಪೇನ್ ಮಾಡಿಕೊಂಡು ಪ್ರಚಾರ ಮಾಡುತ್ತಿದ್ದಾರೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ಬರಗಾಲದಲ್ಲಿ ಬಲವಂತವಾಗಿ ಬ್ಯಾಂಕ್‍ಗಳು ಸಾಲ ವಸೂಲು ಮಾಡಲು ಹೋಗಬಾರದು. ಸಿಎಂ ಸರಿಯಾದ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಅಡ್ವಾಣಿಯವರಿಗೆ ಶುಭಾಶಯ
ಬಿಜೆಪಿಗೆ ದೇಶದಲ್ಲಿ ಭದ್ರ ಬುನಾದಿ ಹಾಕಿದ ಎಲ್.ಕೆ.ಅಡ್ವಾಣಿ ಅವರು ನೂರನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಶುಭಾಶಯಗಳು. ದೇವರು ಅವರಿಗೆ ಆರೋಗ್ಯ ನೀಡಲಿ ಎಂದರು.

Comments

Leave a Comment

Prev Post "ಕರುನಾಡಿನಿಂದ ಕತಾರ್‌ವರೆಗೆ ಕನ್ನಡದ ಕಂಪು: ಕನ್ನಡಿಗರ ಒಗ್ಗಟ್ಟಿಗೆ ಉಮಾಶ್ರೀ ಮೆಚ್ಚುಗೆ"
Next Post ಎಥೆನಾಲ್ ಗೊಂದಲಕ್ಕೆ ಕೇಂದ್ರ ಸರ್ಕಾರವೇ ಕಾರಣ: ತನಿಖೆಗೆ ಎಂ ಬಿ ಪಾಟೀಲ ಆಗ್ರಹ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News