PRABHAVAA.COM

ರೈತರು ಆತಂಕ ಪಡಬೇಕಿಲ್ಲ, ಬರಪರಿಹಾರ ತಲುಪಲಿದೆ: ಸಿಎಂ‌ ಡಿ ಕೆ‌ ಶಿವಕುಮಾರ್

Bengaluru Urban:

Font size:

ಎರಡು ಕಂತಿನಲ್ಲಿ 5000 ರೂ. ಖಚಿತ, ಈಗಾಗಲೇ ಮೊದಲ ಕಂತು 2500 ಬಿಡುಗಡೆ

ಕೇಂದ್ರ ಸರ್ಕಾರ ಕೊಡದೆ ಇದ್ದರೂ ನುಡಿದಂತೆ ನಾವು ಕೊಡುತ್ತೇವೆ

ತಾಂತ್ರಿಕ ಸಮಸ್ಯೆ ಇದ್ದರೆ ಸರಿಪಡಿಸುತ್ತೇವೆ

ಬೆಂಗಳೂರು, ನ.11:

'ರಾಜ್ಯದ ರೈತ ಬಾಂಧವರಿಗೆ ಬರ ಪರಿಹಾರದ ಕುರಿತು ಯಾವುದೇ ರೀತಿಯ ಗೊಂದಲ ಬೇಡ. ಪ್ರತಿಯೊಬ್ಬ ಅರ್ಹ ರೈತನಿಗೂ ನಮ್ಮ ಸರ್ಕಾರ ಎರಡು‌ ಕಂತಿನಲ್ಲಿ 5,000 ರೂ. ಬಿಡುಗಡೆ ಮಾಡುತ್ತದೆ. ಮೊದಲನೆ ಕಂತಿನ ಹಣ ಈಗಾಗಲೇ ಅನೇಕ ರೈತರನ್ನು ತಲುಪಿದೆ.‌ ಪ್ರತಿ ರೈತರಿಗೆ ಹಣ ತಲುಪಿಸಲು ಸೂತ್ರ ರಚಿಸಿದೆ‌' ಎಂದು ಸಿಎಂ‌ ಡಿ ಕೆ‌ ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

'ಪ್ರತಿ ರೈತರಿಗೂ ಒಂದು ನಿರ್ದಿಷ್ಟ ಮೊತ್ತವನ್ನು ನಿಗದಿಪಡಿಸಲಾಗಿದೆ. ​ಸರಿಯಾದ ಖಾತೆಗಳಿಗೆ ಹಣ ತಲುಪಿದೆ. ಆದರೆ ಹಣ ತಲುಪದ ರೈತರ ಖಾತೆಯಲ್ಲಿ ಇರುವ ಅಡತಡೆ ನಿವಾರಿಸಿ ಪಾವತಿಸಲಾಗುವುದು. ಹೀಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ‌' ಎಂದು ಸ್ಪಷ್ಟನೆ ನೀಡಿದರು.

ಕೇಂದ್ರ ಸರ್ಕಾರ ಕೊಡದೆ ಇದ್ದರೂ ನುಡಿದಂತೆ ನಾವು ಕೊಡುತ್ತೇವೆ

'​ಒಂದು ಪಕ್ಷ ರೈತರಿಗೆ ತಲುಪಬೇಕಾದ ಮೊತ್ತದಲ್ಲಿ ಹೆಚ್ಚು-ಕಮ್ಮಿಯಾಗಿದ್ದರೆ ಅದನ್ನು ಸರಿಪಡಿಸಲಾಗುವುದು.
​ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡದೇ ಇದ್ದರೂ ನಮ್ಮ ಸರ್ಕಾರ ರೈತರಿಗೆ ನುಡಿದಂತೆ ಎರಡು ಕಂತುಗಳಲ್ಲಿ 5 ಸಾವಿರ ರೂ. ಪರಿಹಾರ ಪಾವತಿ ಮಾಡುತ್ತದೆ' ಎಂದು ಭರವಸೆ ನೀಡಿದರು.

ತಾಂತ್ರಿಕ ಸಮಸ್ಯೆ ಇದ್ದರೆ ಸರಿಪಡಿಸುತ್ತೇವೆ

'​ಒಂದೇ ಬಟನ್ ಮೂಲಕ ಎಲ್ಲಾ ರೈತರ ಖಾತೆಗೂ ಹಣ ವರ್ಗಾವಣೆಯಾಗುತ್ತಿದೆ. ಆದರೆ ಕೆಲವು ಬ್ಯಾಂಕ್ ಖಾತೆಗಳು ಸರಿಯಯಾಗಿಲ್ಲ ಹಾಗೂ ಸಾಲದ ಬಾಬತ್ತಿಗೆ ಲಿಂಕ್ ಆಗಿದೆ. ಎಲ್ಲದರ ದಾಖಲೆಗಳನ್ನು ಪರಿಶೀಲಿಸಿ ಪರಿಹಾರ ಮೊತ್ತ ಶೀಘ್ರ ಪಾವತಿಸಲಾಗುವುದು' ಎಂದರು.

Comments

Leave a Comment

Prev Post ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೂ ಆದ್ಯತೆ: ಟಿ. ರಘುಮೂರ್ತಿ
Next Post ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಯಾವುದೇ ವಸ್ತುಗಳ ಬೆಲೆ ಏರಿಕೆಯಾಗಿಲ್ಲ ಎಂದು ಸಾಬೀತುಪಡಿಸಿದರೆ 1ಲಕ್ಷ ರೂ. ಬಹುಮಾನ: ಬಸವರಾಜ ಬೊಮ್ಮಾಯಿ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News