PRABHAVAA.COM

ಹಿರಿಯೂರು ಉಪ ಚುನಾವಣೆ ಸಂಬಂಧ ಸಿಎಂ ಮತ್ತು ಸಚಿವರ ಸಮಾಲೋಚನೆ

Bengaluru Urban:

Font size:

ಡಿಕೆ ಶಿವಕುಮಾರ್‌ ಭೇಟಿ ಮಾಡಿ ಶುಭಾಶಯ ತಿಳಿಸಿದ ಸಚಿವ ರಘುಮೂರ್ತಿ

ಬೆಂಗಳೂರು, ನ.11: ಹಿರಿಯೂರು ಉಪ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್‌ ಸಿದ್ಧತೆ ಆರಂಭಿಸಿದೆ.

ಈ ಸಂಬಂಧ ಈಗಾಗಲೇ ಹಲವಾರು ನಾಯಕರ ಜೊತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸಮಾಲೋಚನೆ ನಡೆಸಿದ್ದಾರೆ.

ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅವರು ಬುಧವಾರ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿ ದೀಪಾವಳಿ ತಿಳಿಸಿ, ಸೋನಿಯಾ ಗಾಂಧಿ ಅವರ ಆತ್ಮಕಥೆಯನ್ನು ಕಾಣಿಕೆಯಾಗಿ ನೀಡಿ ಶುಭಾಶಯ ಕೋರಿದರು. ಕಾಂಗ್ರೆಸ್ ಮುಖಂಡ ಎನ್. ಚಂದ್ರಪ್ಪ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಉಭಯ ನಾಯಕರು ಹಿರಿಯೂರು ವಿಧಾನಸಭೆ ಚುನಾವಣೆ ಸಂಬಂಧ ಸಮಾಲೋಚನೆ ನಡೆಸಿದರು ಎಂದು ಹೇಳಲಾಗಿದೆ.

ಹಿರಿಯೂರು ವಿಧಾನಸಭೆ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ದಟ್ಟವಾಗಿರುವುದರಿಂದ ನಾವೆಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕಾಗಿದೆ ಎಂದು ಮುಖ್ಯಮಂತ್ರಿಗಳು ಸಲಹೆ-ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಚುನಾವಣೆಗೆ ಅತಿ ಶೀಘ್ರದಲ್ಲೇ ದಿನಾಂಕ ಪ್ರಕಟವಾಗುವ ನಿರೀಕ್ಷೆ ಇದೆ. ನಾವು ನಮ್ಮ ಸರ್ಕಾರದ ಯೋಜನೆಗಳು ಹಾಗೂ ಅನುಷ್ಠಾನಕ್ಕೆ ಬಂದಿರುವ ಯೋಜನೆಗಳನ್ನು ಜನರಿಗೆ ಪ್ರಚಾರ ಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಡಿಕೆ ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಲಾಗಿದೆ.

ಡಿ. ಸುಧಾಕರ್‌ ಅವರ ನಿಧನದಿಂದ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಅತಿ ಶೀಘ್ರದಲ್ಲಿ ಚುನಾವಣೆ ಆಯೋಗ ವೇಳಾಪಟ್ಟಿ ಪ್ರಕಟಿಸಲಿದೆ.

Comments

Leave a Comment

Prev Post ತೋಟದಪ್ಪ ಧರ್ಮಸಂಸ್ಥೆ ಉದ್ಯೋಗ ಕೌಶಲ ಕೇಂದ್ರಕ್ಕೆ ಸಿಎ ನಿವೇಶನ: ಸಚಿವ ಎಂ.ಬಿ.ಪಾಟೀಲ ಭರವಸೆ
Next Post ಬೆಂಗಳೂರು: 80 ಕ್ಕೂ ಹೆಚ್ಚು ನಿಗಮ-ಮಂಡಳಿಗಳಿಗೆ 428 ನೇಮಕಾತಿ; ಸರ್ಕಾರದಿಂದ ಬೃಹತ್ ಆದೇಶ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News