ಮಧುಗಿರಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ವಿಶೇಷ ಸಭೆ
ತುಮಕೂರು ಏ. ೪.ಮಧುಗಿರಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ವಿಶೇಷ ಸಭೆ ನಡೆಯಿತು. ಈ ಸಭೆಯಲ್ಲಿ ಬೇಸಿಗೆಕಾಲದ ಸವಾಲುಗಳನ್ನು ಎದುರಿಸಲು ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳು ಶನಿವಾರ ಚರ್ಚೆನಡೆಸಿದರು.
ಮಧುಗಿರಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ವಿಶೇಷ ಸಭೆ ಸಭೆಯಲ್ಲಿ ಬೇಸಿಗೆಕಾಲದ ಸವಾಲುಗಳನ್ನು ಎದುರಿಸಲು ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳು ಅವರು ಚರ್ಚೆ ನಡೆಸಿದರು
ಸಭೆಯಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುಂಚಿತವಾಗಿ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಸೂಚಿಸಲಾಯಿತು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕೊಳವೆ ಬಾವಿಗಳ ಕಾರ್ಯಚಟುವಟಿಕೆಗಳ ಬಗ್ಗೆ ವಾಟರ್ ಮ್ಯಾನ್‌ಗಳ ಮೂಲಕ ಮಾಹಿತಿ ಪಡೆದು, ಯಾವುದೇ ತೊಂದರೆ ಇದ್ದರೆ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜಣ್ಣ ಸೂಚಿಸಿದರು.
ದನಕರುಗಳಿಗೆ ಬೇಸಿಗೆಕಾಲದಲ್ಲಿ ಮೇವಿನ ಕೊರತೆ ಎದುರಾಗದಂತೆ ಮುಂಚಿತವಾಗಿ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಇದರಿಂದ ಪಶುಸಂಗೋಪನೆಗೆ ತೊಂದರೆ ಉಂಟಾಗದಂತೆ ಎಚ್ಚರಿಕೆ ವಹಿಸುವಂತೆ ಅವರು ಇದೇ ಸಂದರ್ಭದಲ್ಲಿ ಸೂಚನೆ ನೀಡದರು.
ಜನಪ್ರಿಯ ಉಚಿತ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಡಿ ಬಾಕಿ ಉಳಿದಿರುವ ಗ್ರಾಮಗಳಲ್ಲಿ ಅರ್ಹ ಫಲಾನುಭವಿಗಳಿಗೆ ಸ್ಥಳ ಗುರುತಿಸಿ ಹಕ್ಕುಪತ್ರ ವಿತರಿಸಲು ಆದೇಶಿಸಲಾಯಿತು. ಈ ಮೂಲಕ ಬಡ ಕುಟುಂಬಗಳಿಗೆ ಭೂಮಿಯ ಹಕ್ಕು ದೊರಕುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಅವರು ಹೇಳಿದ್ದಾರೆ.
ರೈತರ ಜಮೀನಿನ ಸಾಗುವಳಿ ಪತ್ರ ವಿತರಣೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಅರ್ಜಿ ವಿಲೇವಾರಿಯ ಬಗ್ಗೆ ಸಲಹೆ ನೀಡಲಾಯಿತು. ಬಾಕಿ ಉಳಿದಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸೂಚಿಸಿದರು.
ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ ತರಗತಿಗಳು ಪ್ರಾರಂಭವಾಗುವ ಮುನ್ನ ಸಮವಸ್ತ್ರದ ಜೊತೆಗೆ ಶೂಗಳನ್ನು ವಿತರಿಸುವಂತೆ ಮಾಜಿ ಸಚಿವರಾದ ಹಾಗೂ ಶಾಸಕರಾದ ಕೆ ಎನ್ ರಾಜಣ್ಣ ನಿರ್ದೇಶನ ನೀಡಿದರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವತ್ತಇದೇ ಸಂದರ್ಭದಲ್ಲಿ ಗಮನ ಹರಿಸಲಾಯಿತು.
ಜಾತ್ರೆಗಳು ನಡೆಯುತ್ತಿರುವುದರಿಂದ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಯಿತು. ಸಾರ್ವಜನಿಕರ ಸುರಕ್ಷತೆಗಾಗಿ ಪೊಲೀಸ್ ಇಲಾಖೆಗೆ ವಿಶೇಷ ಸೂಚನೆ ನೀಡಲಾಯಿತು.
ಸಭೆಯಲ್ಲಿ ಬೇಸಿಗೆಕಾಲದ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಆಡಳಿತವು ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಸ್ಪಷ್ಟತೆ ನೀಡಲಾಯಿತು. ಜನಸಾಮಾನ್ಯರ ಹಿತಕ್ಕಾಗಿ ತುರ್ತು ನಿರ್ಧಾರಗಳನ್ನು ಕೈಗೊಳ್ಳುವ ಬದ್ಧತೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದರು.
ಈ ಸಭೆಯಲ್ಲಿ ಉಪವಿಭಾಗಾಧಿಕಾರಿ ಗೊಟೂರು ಶಿವಪ್ಪ, ಇ.ಓ ಲಕ್ಷಣ್, ತಹಸೀಲ್ದಾರ್ ಶ್ರೀನಿವಾಸ್, ಡಿ.ವೈ.ಎಸ್.ಪಿ ಮಂಜುನಾಥ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಅವರ ಸಕ್ರಿಯ ಭಾಗವಹಿಸುವಿಕೆಯಿಂದ ಸಭೆಯು ಪರಿಣಾಮಕಾರಿಯಾಗಿ ನಡೆಯಿತು.







Comments
Leave a Comment