PRABHAVAA.COM

₹1 ಕೋಟಿ ವರೆಗೆ PSI, ₹1 ಕೋಟಿಗೂ ಹೆಚ್ಚು ಮೊತ್ತದ ವಂಚನೆ ಪ್ರಕರಣಗಳಿಗೆ PI ಅಥವಾ ಹಿರಿಯ ಅಧಿಕಾರಿ ತನಿಖೆ: ಡಿಜಿಪಿ ಸಲೀಂ ಸುತ್ತೋಲೆ

Bengaluru Urban:

Font size:

₹1 ಕೋಟಿ ವರೆಗೆ PSI, ₹1 ಕೋಟಿಗೂ ಹೆಚ್ಚು ಮೊತ್ತದ ವಂಚನೆ ಪ್ರಕರಣಗಳಿಗೆ PI ಅಥವಾ ಹಿರಿಯ ಅಧಿಕಾರಿ ತನಿಖೆ: ಡಿಜಿಪಿ ಸಲೀಂ ಸುತ್ತೋಲೆ

₹1 ಕೋಟಿ ವರೆಗೆ PSI, ₹1 ಕೋಟಿಗೂ ಹೆಚ್ಚು ಮೊತ್ತದ ವಂಚನೆ ಪ್ರಕರಣಗಳಿಗೆ PI ಅಥವಾ ಹಿರಿಯ ಅಧಿಕಾರಿ ತನಿಖೆ: ಡಿಜಿಪಿ ಸಲೀಂ ಸುತ್ತೋಲೆ

#KarnatakaPolice #DGP #FraudCases #EconomicOffences #FinancialFraud #PoliceInvestigation #PSI #PoliceInspector #LawAndOrder #CriminalInvestigation #BNSS #CyberCrime #FraudInvestigation #PoliceDepartment #KarnatakaNews

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋಟಿ ಕೋಟಿ ರೂಪಾಯಿಗಳ ವಂಚನೆ ಮತ್ತು ಆರ್ಥಿಕ ಅಪರಾಧ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ಮಹತ್ವದ ಸ್ಪಷ್ಟೀಕರಣ ಹೊರಬಿದ್ದಿದೆ. ಇಂತಹ ಪ್ರಕರಣಗಳನ್ನು ಯಾವ ಹಂತದ ಪೊಲೀಸ್ ಅಧಿಕಾರಿ ತನಿಖೆ ನಡೆಸಬೇಕು ಎಂಬ ಗೊಂದಲಕ್ಕೆ ತೆರೆ ಎಳೆದಿರುವ ಕರ್ನಾಟಕ ಪೊಲೀಸ್ ಇಲಾಖೆ, ಪ್ರಕರಣದ ಹಣಕಾಸಿನ ಮೊತ್ತದ ಆಧಾರದ ಮೇಲೆ ತನಿಖಾಧಿಕಾರಿಗಳ ಅಧಿಕಾರ ವ್ಯಾಪ್ತಿಯನ್ನು ನಿಗದಿಪಡಿಸಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ₹1 ಕೋಟಿ ವರೆಗೆ PSI ಹಾಗೂ ಅದಕ್ಕಿಂತ ಹೆಚ್ಚಿನ ಮೊತ್ತದ ವಂಚನೆ ಪ್ರಕರಣಗಳಿಗೆ PI ಅಥವಾ ಹಿರಿಯ ಅಧಿಕಾರಿಗಳೇ ತನಿಖೆ ನಡೆಸಬೇಕೆಂದು ಡಿಜಿಪಿ ಡಾ. ಎಂ.ಎ. ಸಲೀಂ ಆದೇಶಿಸಿದ್ದಾರೆ.

ರಾಜ್ಯದಲ್ಲಿ ವಂಚನೆ, ದುರುಪಯೋಗ ಹಾಗೂ ಆರ್ಥಿಕ ಅಪರಾಧ ಪ್ರಕರಣಗಳ ತನಿಖೆ ನಡೆಸುವ ಅಧಿಕಾರಿಗಳ ಹಂತವನ್ನು ಸ್ಪಷ್ಟಪಡಿಸಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರಾದ ಡಾ. ಎಂ.ಎ. ಸಲೀಂ ಅವರು ಕೊರಿಜೆಂಡಮ್ ಹೊರಡಿಸಿದ್ದಾರೆ.

ಪೊಲೀಸ್ ಮುಖ್ಯ ಕಚೇರಿಯ ಸ್ಥಾಯಿ ಆದೇಶ ಸಂಖ್ಯೆ 1006 (ಪರಿಷ್ಕೃತ) ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 30ರ ಅನ್ವಯ ಈ ಆದೇಶ ಹೊರಡಿಸಲಾಗಿದ್ದು, ಹಣಕಾಸಿನ ನ್ಯಾಯವ್ಯಾಪ್ತಿಯನ್ನು ಮಾತ್ರ ನಿರ್ಧರಿಸಿದ್ದ ಹಿಂದಿನ ಆದೇಶದಲ್ಲಿ ತನಿಖಾಧಿಕಾರಿಯ ಹುದ್ದೆಯ ಬಗ್ಗೆ ಸ್ಪಷ್ಟತೆ ಇರಲಿಲ್ಲ ಎಂದು ತಿಳಿಸಲಾಗಿದೆ.

ಹೊಸ ಸ್ಪಷ್ಟೀಕರಣದಂತೆ, ₹1 ಕೋಟಿ ರೂಪಾಯಿಗಳವರೆಗಿನ ವಂಚನೆ, ದುರುಪಯೋಗ ಮತ್ತು ಇತರ ಆರ್ಥಿಕ ಅಪರಾಧ ಪ್ರಕರಣಗಳ ತನಿಖೆಯನ್ನು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ಹುದ್ದೆಯ ಅಧಿಕಾರಿಗಳು ನಡೆಸಬಹುದಾಗಿದೆ. ₹1 ಕೋಟಿಗೂ ಅಧಿಕ ಮೊತ್ತದ ವಂಚನೆ ಪ್ರಕರಣಗಳ ತನಿಖೆಯನ್ನು ಪೊಲೀಸ್ ಇನ್ಸ್‌ಪೆಕ್ಟರ್ (PI) ಅಥವಾ ಅದಕ್ಕಿಂತ ಮೇಲಿನ ಹುದ್ದೆಯ ಅಧಿಕಾರಿಗಳು ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಮಾರ್ಗಸೂಚಿಗಳನ್ನು ರಾಜ್ಯದ ಎಲ್ಲಾ ಪೊಲೀಸ್ ಘಟಕಗಳ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಈ ಸಂಬಂಧದ ಆದೇಶವನ್ನು ಎಲ್ಲಾ ಘಟಕಗಳ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ವಿವಿಧ ಕಚೇರಿಗಳಿಗೆ ರವಾನಿಸಲಾಗಿದೆ.

Comments

Leave a Comment

Prev Post ಮಹಿಳಾ ಸಚಿವರ ಆಯ್ಕೆ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News