PRABHAVAA.COM

ಡಿಸೆಂಬರ್ 1ರಿಂದ ಸರ್ಕಾರಿ ಸಿಬ್ಬಂದಿಗೆ ಕಟ್ಟುನಿಟ್ಟಿನ ಡಿಜಿಟಲ್ ನಿಯಮ

Bengaluru Urban:

Font size:

ಡಿಸೆಂಬರ್ 1ರಿಂದ ಸರ್ಕಾರಿ ಸಿಬ್ಬಂದಿಗೆ ಕಟ್ಟುನಿಟ್ಟಿನ ಡಿಜಿಟಲ್ ನಿಯಮ

ಡಿಸೆಂಬರ್ 1ರಿಂದ ಸರ್ಕಾರಿ ಸಿಬ್ಬಂದಿಗೆ ಕಟ್ಟುನಿಟ್ಟಿನ ಡಿಜಿಟಲ್ ನಿಯಮ

#KAAMS #KarnatakaGovernment #GovernmentEmployees #DigitalGovernance #MovementRegister #CashDeclarationRegister #eGovernance #KarnatakaAdmin #PublicAdministration #GovernmentRules #DigitalTransformation #CivilServices #KarnatakaNews #EmployeeCompliance #AdministrativeReforms

ಬೆಂಗಳೂರು, ನ.16 -ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ಡಿಜಿಟಲ್ ಆಡಳಿತವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಇನ್ನುಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಚಲನವಲನ ವಿವರಗಳು ಹಾಗೂ ನಗದು ಘೋಷಣಾ ದಾಖಲಾತಿಗಳನ್ನು ಕಡ್ಡಾಯವಾಗಿ KAAMS ಆಧಾರಿತ "ಕರ್ತವ್ಯ" ಮೊಬೈಲ್ ಅಪ್ಲಿಕೇಶನ್‌ನಲ್ಲಿಯೇ ದಾಖಲಿಸಬೇಕೆಂದು ಆದೇಶ ಹೊರಡಿಸಿದೆ. ಡಿಸೆಂಬರ್ 1ರಿಂದ ಜಾರಿಗೆ ಬರುವ ಈ ನಿಯಮ ಪಾಲಿಸದ ಅಧಿಕಾರಿಗಳು ಮತ್ತು ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

ಈ ಹೊಸ ವ್ಯವಸ್ಥೆಯು ಡಿಸೆಂಬರ್ 1, 2026ರಿಂದ ಜಾರಿಗೆ ಬರಲಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಆಡಳಿತಾತ್ಮಕ ಪಾರದರ್ಶಕತೆ ಮತ್ತು ಜವಾಬ್ದಾರಿತನವನ್ನು ಮತ್ತಷ್ಟು ಬಲಪಡಿಸುವ ಉದ್ದೇಶವನ್ನು ಹೊಂದಿದೆ.

ಈ ಕುರಿತು ಪ್ರಜಾಸೇವಾ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಸರ್ಕಾರಿ ನೌಕರರು ಕಚೇರಿಯಿಂದ ಅನ್ಯ ಕರ್ತವ್ಯಗಳ ನಿರ್ವಹಣೆಗೆ ಹೊರ ಹೋಗುವ ಸಂದರ್ಭಗಳಲ್ಲಿ ತಮ್ಮ ಚಲನವಲನದ ವಿವರಗಳನ್ನು ಕಡ್ಡಾಯವಾಗಿ ದಾಖಲಿಸಿ ಮೇಲಾಧಿಕಾರಿಗಳ ಅನುಮೋದನೆ ಪಡೆಯಬೇಕೆಂಬ ಹಿಂದಿನ ನಿಯಮಗಳನ್ನು ಮತ್ತೊಮ್ಮೆ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಕಚೇರಿ ಕಾರ್ಯಗಳಿಗೆ ಸಂಬಂಧಿಸಿ ಹೊರಗಡೆ ತೆರಳುವ ಅಧಿಕಾರಿ ಅಥವಾ ಸಿಬ್ಬಂದಿ ಗೈರುಹಾಜರಿ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗುವಂತೆ ಚಲನವಲನ ನೋಂದಣಿಯನ್ನು ಸರಿಯಾಗಿ ನಿರ್ವಹಿಸುವುದು ಅವಶ್ಯಕ ಎಂದು ಸರ್ಕಾರ ತಿಳಿಸಿದೆ.

ಅದೇ ರೀತಿ ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶನದ ಅನ್ವಯ, ಸರ್ಕಾರಿ ಇಲಾಖೆಗಳು, ಮಂಡಳಿಗಳು ಮತ್ತು ನಿಗಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರತಿಯೊಬ್ಬ ನೌಕರರು ತಾವು ಪ್ರತಿದಿನ ಕರ್ತವ್ಯಕ್ಕೆ ಹಾಜರಾಗುವ ವೇಳೆ ತಮ್ಮ ಬಳಿ ಇರುವ ನಗದು ಮೊತ್ತದ ವಿವರವನ್ನು ನಗದು ಘೋಷಣಾ ವಹಿಯಲ್ಲಿ ದಾಖಲಿಸುವ ನಿಯಮವೂ ಮುಂದುವರಿಯಲಿದೆ. ಈ ಕ್ರಮದ ಮೂಲಕ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ಹಾಗೂ ಭ್ರಷ್ಟಾಚಾರ ನಿಯಂತ್ರಣಕ್ಕೆ ಉತ್ತೇಜನ ನೀಡುವ ಉದ್ದೇಶ ಹೊಂದಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಸರ್ಕಾರದ ಗಮನಕ್ಕೆ ಬಂದಂತೆ ಅನೇಕ ಕಚೇರಿಗಳಲ್ಲಿ ಚಲನವಲನ ವಹಿ ಹಾಗೂ ನಗದು ಘೋಷಣಾ ವಹಿಗಳನ್ನು ಸಮರ್ಪಕವಾಗಿ ನಿರ್ವಹಿಸಲಾಗುತ್ತಿಲ್ಲ ಎಂಬ ವರದಿಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರ ಈಗಾಗಲೇ ಹಲವು ಸುತ್ತೋಲೆಗಳನ್ನು ಹೊರಡಿಸಿ ನಿಯಮಗಳ ಪಾಲನೆಗೆ ಸೂಚನೆ ನೀಡಿದ್ದರೂ, ಕೆಲವು ಕಡೆಗಳಲ್ಲಿ ನಿರ್ಲಕ್ಷ್ಯ ಕಂಡುಬಂದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದೇ ಕಾರಣಕ್ಕಾಗಿ ಈಗ ಈ ಎರಡೂ ಪ್ರಕ್ರಿಯೆಗಳನ್ನು ಡಿಜಿಟಲ್ ವೇದಿಕೆಗೆ ವರ್ಗಾಯಿಸಿ "ಕರ್ತವ್ಯ" ಅಪ್ಲಿಕೇಶನ್ ಮೂಲಕ ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ.

ಈ ಹಿಂದೆ ರಾಜ್ಯ ಸರ್ಕಾರವು ಏಪ್ರಿಲ್ 15, 2026ರಿಂದ ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳು, ನಿಗಮಗಳು ಮತ್ತು ಮಂಡಳಿಗಳಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ KAAMS ಆಧಾರಿತ "ಕರ್ತವ್ಯ" ಅಪ್ಲಿಕೇಶನ್‌ನಲ್ಲಿ ಹಾಜರಾತಿ ದಾಖಲಿಸುವ ವ್ಯವಸ್ಥೆಯನ್ನು ಜಾರಿಗೆ ತಂದಿತ್ತು. ಇದೀಗ ಅದೇ ತಂತ್ರಾಂಶದಲ್ಲಿ ಚಲನವಲನ ವಹಿ ಮತ್ತು ನಗದು ಘೋಷಣಾ ವಹಿ ದಾಖಲಿಸುವ ಸೌಲಭ್ಯವನ್ನು ಸೇರಿಸಲಾಗಿದ್ದು, ಎಲ್ಲಾ ಸಿಬ್ಬಂದಿಯೂ ತಮ್ಮ ದಿನನಿತ್ಯದ ಮಾಹಿತಿಯನ್ನು ಅದರಲ್ಲಿ ದಾಖಲಿಸಬೇಕಾಗಿದೆ.

ಸರ್ಕಾರದ ಹೊಸ ಆದೇಶದ ಪ್ರಕಾರ, ಡಿಸೆಂಬರ್ 1ರಿಂದ ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಚಲನವಲನ ಹಾಗೂ ನಗದು ಘೋಷಣಾ ವಿವರಗಳನ್ನು ಕಾಗದದ ದಾಖಲೆಗಳ ಬದಲಿಗೆ ನೇರವಾಗಿ "ಕರ್ತವ್ಯ" ಅಪ್ಲಿಕೇಶನ್‌ನಲ್ಲಿಯೇ ನಮೂದಿಸಬೇಕು. ಈ ಮಾಹಿತಿಯ ಪರಿಶೀಲನೆ ಮತ್ತು ಮೇಲ್ವಿಚಾರಣೆಯ ಹೊಣೆಗಾರಿಕೆಯನ್ನು ಆಯಾ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ವಹಿಸಲಾಗಿದೆ.

ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯ ದಾಖಲಾತಿಗಳನ್ನು ಸರಿಯಾಗಿ ನಿರ್ವಹಿಸುತ್ತಿರುವುದನ್ನು ಇಲಾಖಾ ಮುಖ್ಯಸ್ಥರು ಹಾಗೂ ಸಂಬಂಧಪಟ್ಟ ಮೇಲಾಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಬೇಕೆಂದು ಸರ್ಕಾರ ಸೂಚಿಸಿದೆ. ಯಾವುದೇ ಅಧಿಕಾರಿ ಅಥವಾ ನೌಕರರು ಈ ಆದೇಶವನ್ನು ಪಾಲಿಸದೇ ತಂತ್ರಾಂಶದಲ್ಲಿ ಅಗತ್ಯ ನಮೂದುಗಳನ್ನು ಮಾಡದಿದ್ದಲ್ಲಿ, ಅವರ ವಿರುದ್ಧ ಸಕ್ಷಮ ಪ್ರಾಧಿಕಾರದ ಮೂಲಕ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ರಾಜ್ಯದ ಆಡಳಿತ ವ್ಯವಸ್ಥೆಯನ್ನು ಸಂಪೂರ್ಣ ಡಿಜಿಟಲ್ ರೂಪಕ್ಕೆ ಪರಿವರ್ತಿಸುವ ಹಾಗೂ ಸರ್ಕಾರಿ ಸೇವೆಯ ಪಾರದರ್ಶಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮ ಮಹತ್ವದ ಹೆಜ್ಜೆಯಾಗಿದೆ .

Comments

Leave a Comment

Prev Post ಹಿರಿಯೂರು ಗೊಂದಲ ಇಲ್ಲ; ಒಮ್ಮತ ಅಭ್ಯರ್ಥಿಯನ್ನೇ ಕಣಕ್ಕಿಳಿಸುತ್ತೇವೆ ಎಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Next Post ಪರಂಪರೆ ಉಳಿಸಿಕೊಂಡು ಗಂಗಾ (ಕುಮಾರಕೃಪ)ಕ್ಕೆ ಮರು ವಿನ್ಯಾಸ: ಸಿಎಂ ಡಿ ಕೆ ಶಿವಕುಮಾರ್

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News