PRABHAVAA.COM

ಬಸವನಾಡಿನಲ್ಲಿ ಕೈಗಾರಿಕಾ ಕ್ರಾಂತಿಯ ನವಯುಗದ ಆರಂಭ

Vijayapura:

Font size:

ಮುಳವಾಡದಲ್ಲಿ ₹1,600 ಕೋಟಿ ಹೂಡಿಕೆಯ ರಿಲಯನ್ಸ್ ಕ್ಯಾಂಪಾಕೋಲಾ ಘಟಕಕ್ಕೆ ಭೂಮಿಪೂಜೆ

ಭೂಮಿ ನೀಡಿದ ರೈತ ಕುಟುಂಬಗಳಿಗೆ ಉದ್ಯೋಗದಲ್ಲಿ ಆದ್ಯತೆ: ಎಂ.ಬಿ.ಪಾಟೀಲ

ವಿಜಯಪುರ: ಇಲ್ಲಿನ ಹೊರವಲಯದಲ್ಲಿರುವ ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ 109 ಎಕರೆ ವಿಸ್ತಾರದಲ್ಲಿ, 1,600 ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ನಿರ್ಮಾಣವಾಗಲಿರುವ ರಿಲಯನ್ಸ್ ಸಮೂಹದ ಕ್ಯಾಂಪಾ ಕೋಲಾ ತಂಪು ಪಾನೀಯ ತಯಾರಿಕಾ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಸೋಮವಾರ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, 'ಕ್ಯಾಂಪಾ ಕೋಲಾ ಘಟಕದ ಸ್ಥಾಪನೆಯೊಂದಿಗೆ ವಿಜಯಪುರ ಜಿಲ್ಲೆಯಲ್ಲಿ ಕೈಗಾರಿಕಾ ಬೆಳವಣಿಗೆಗೆ ಹೊಸ ವೇಗ ದೊರೆಯಲಿದೆ. ಮುಂದಿನ ದಿನಗಳಲ್ಲಿ ವಿಂಗ್ಸ್ ವಿಟೇರಾ, ಹಿಂದೂಸ್ಥಾನ್ ಕೋಕಾ-ಕೋಲಾ, ಹೈಟೆಕ್ ಫೈಬ್ಸ್, ಬ್ಯಾಟರಿ ಉತ್ಪಾದನಾ ಕ್ಷೇತ್ರದ ಸರ್ವರ್ ಟೆಕ್ ಪವರ್ ಸಿಸ್ಟಂ, ಮೆಟಾಗ್ರೂಪ್ ಹಾಗೂ ಏರೋಸ್ಪೇಸ್ ಮತ್ತು ರಕ್ಷಣಾ ವಲಯದಲ್ಲಿ ಹೆಸರು ಮಾಡಿರುವ ಟೋನ್ಬೋ ಇಮೇಜಿಂಗ್ ಸೇರಿದಂತೆ ಹಲವು ಕಂಪನಿಗಳೊಂದಿಗೆ ಹೂಡಿಕೆ ಸಂಬಂಧ ಮಾತುಕತೆ ನಡೆಸಲಾಗಿದೆ. ಹಲವು ಕಂಪನಿಗಳು ಈಗಾಗಲೇ ಹೂಡಿಕೆ ಒಪ್ಪಂದಗಳಿಗೂ ಸಹಿ ಹಾಕಿವೆ ಎಂದು ಹೇಳಿದರು.

'ನೆರೆಯ ಮಹಾರಾಷ್ಟ್ರದಲ್ಲಿ ಶರದ್ ಪವಾರ್ ಅವರು ತಮ್ಮ ಸ್ವಕ್ಷೇತ್ರ ಬಾರಾಮತಿಯಲ್ಲಿ ನೀರಾವರಿ ಸೌಕರ್ಯ, ಹೈನುಗಾರಿಕೆ ಉದ್ಯಮ ಮತ್ತು ಕೈಗಾರಿಕೆ ಈ ಮೂರನ್ನೂ ಸಮಾನವಾಗಿ ಬೆಳೆಸಿದ್ದಾರೆ. ಅವರಿಂದ ನಾವು ಪಾಠ ಕಲಿಯಬೇಕಿದೆ. ಮುಂಬರುವ ವರ್ಷಗಳಲ್ಲಿ ವಿಜಯಪುರ ಜಿಲ್ಲೆ ಕೂಡ ಬಾರಾಮತಿಯಂತೆಯೇ ಅಭಿವೃದ್ಧಿ ಹೊಂದಲಿದೆ. ಜಿಲ್ಲೆಯಲ್ಲಿ ಹೂಡಿಕೆ ಮಾಡುವ ಸಂಬಂಧ ಹತ್ತಾರು ದಿಗ್ಗಜ ಕಂಪನಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಒಟ್ಟಿನಲ್ಲಿ ಜಿಲ್ಲೆಗೆ ಬೃಹತ್ ಕೈಗಾರಿಕೆಗಳನ್ನು ತರಲಾಗುವುದು’ ಎಂದು ಪಾಟೀಲ ಅವರು ಹೇಳಿದ್ದಾರೆ.

ಮುಳವಾಡದಲ್ಲಿ ಕೈಗಾರಿಕೆಗಳಿಗೆಂದು 2009ರಲ್ಲೇ ಮೂರ್ನಾಲ್ಕು ಸಾವಿರ ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದರೆ ಇದುವರೆಗೂ ಇಲ್ಲಿಗೆ ಒಂದೇ ಒಂದು ಕೈಗಾರಿಕೆಯೂ ಬಂದಿರಲಿಲ್ಲ. ನಾನು ಕೈಗಾರಿಕಾ ಸಚಿವನಾದ ಮೇಲೆ ಕಳೆದ ಮೂರು ವರ್ಷಗಳಿಂದ ಇದನ್ನು ಸವಾಲಾಗಿ ಸ್ವೀಕರಿಸಿ, ಹೂಡಿಕೆದಾರರನ್ನು ವಿಜಯಪುರ ಜಿಲ್ಲೆಗೆ ಬರುವಂತೆ ಮಾಡಿದ ಪ್ರಯತ್ನ ಈಗ ಫಲ ಕೊಟ್ಟಿದೆ. ಕ್ಯಾಂಪಾಕೋಲಾ ಘಟಕದಿಂದ 2,000 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ. ಜತೆಗೆ ಪರೋಕ್ಷವಾಗಿ 3,000ಕ್ಕೂ ಹೆಚ್ಚು ಜನರಿಗೆ ಕೆಲಸ ಸಿಗಲಿದೆ ಎಂದು ಅವರು ಹೇಳಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಹಿಂದೆ ನೀರಿನ ಸೌಕರ್ಯವಿಲ್ಲ ಎನ್ನುವ ಕಾರಣಕ್ಕೆ ಕೈಗಾರಿಕೆಗಳು ಬರುತ್ತಿರಲಿಲ್ಲ. ಆದರೆ ಈಗ ಜಿಲ್ಲೆಯಲ್ಲಿ ಈ ಸೌಲಭ್ಯ ಚೆನ್ನಾಗಿದ್ದು, ಕೆರೆಕಟ್ಟೆಗಳಿಗೆಲ್ಲ ನೀರು ತುಂಬಿಸಲಾಗುತ್ತಿದೆ. ಇದರ ಜತೆಗೆ ಜಿಲ್ಲೆಯು ದಾಳಿಂಬೆ, ನಿಂಬೆ ಮತ್ತು ದ್ರಾಕ್ಷಿಯಂತಹ ತೋಟಗಾರಿಕೆ ಬೆಳೆಗಳ ತೊಟ್ಟಿಲಾಗಿದೆ. ರಿಲಯನ್ಸ್ ಕಂಪನಿಯು ಇದನ್ನು ಪರಿಗಣಿಸಿ, ಆಹಾರ ಸಂಸ್ಕರಣೆ ಮತ್ತು ತನ್ನ ವಿಸ್ತರಣೆಯನ್ನು ಆರಂಭಿಸಬೇಕು. ಕೈಗಾರಿಕೆಗಳಿಗೆ ಯಾವ ಬೆಳೆ ಬೇಕೋ ಅದನ್ನು ಬೆಳೆಯಲು ನಮ್ಮ ರೈತರು ಸಿದ್ಧರಿದ್ದಾರೆ. ಹೀಗಾಗಿ, ಕಚ್ಚಾವಸ್ತುವಿನ ಕೊರತೆಯ ಸಮಸ್ಯೆ ಎದುರಾಗುವುದಿಲ್ಲ ಎಂದು ಅವರು ಭರವಸೆ ನೀಡಿದ್ದಾರೆ.

ರಿಲಯನ್ಸ್ ಕಂಪನಿಯು ಇಲ್ಲಿ ಮೊದಲು ಭೂಮಿಯನ್ನು ಕಳೆದುಕೊಂಡಿರುವ ಸಂತ್ರಸ್ತ ರೈತ ಕುಟುಂಬಗಳ ಸದಸ್ಯರಿಗೆ ಉದ್ಯೋಗ ಕೊಡಬೇಕು. ಬಳಿಕ, 25 ಕಿ.ಮೀ. ಸುತ್ತಮುತ್ತ ಇರುವ ಅರ್ಹರಿಗೆ ಮತ್ತು ನಂತರ ವಿಜಯಪುರ ಜಿಲ್ಲೆಯ ಪ್ರತಿಭಾವಂತರನ್ನು ಆಯ್ಕೆ ಮಾಡಿಕೊಂಡು, ಖಾಯಂ ಉದ್ಯೋಗಿಗಳಾಗಿ ನೇಮಿಸಿಕೊಳ್ಳಬೇಕು. ಸಿ ಮತ್ತು ಡಿ ವರ್ಗಗಳ ಹುದ್ದೆಗಳಲ್ಲಿ ನೂರಕ್ಕೆ ನೂರರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೇ ಕೊಡಬೇಕು. ಇದನ್ನು ಕಂಪನಿ ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಹೂಡಿಕೆದಾರರೆಲ್ಲರೂ ಬರೀ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಾಗವನ್ನೇ ಬಯಸುತ್ತಾರೆ. ಆದರೆ ರಾಜಧಾನಿಯಿಂದ ಹೊರಗಿರುವ ಪ್ರದೇಶಗಳಲ್ಲಿ ಕೈಗಾರಿಕೆಗಳು ಬೆಳೆಯುವುದು ಅಗತ್ಯವಾಗಿದೆ. ರಾಜ್ಯದಲ್ಲಿ ಕೈಗಾರಿಕೆಗಳನ್ನು ಬೆಳೆಸುವ ಬಗ್ಗೆ ಕೇಂದ್ರ ಸರಕಾರಕ್ಕೆ ಆಸಕ್ತಿ ಇಲ್ಲ. ಉದ್ಯಮಿಗಳು ಸಾಮಾನ್ಯವಾಗಿ ಮಹಾರಾಷ್ಟ್ರ, ತೆಲಂಗಾಣ, ತಮಿಳುನಾಡು, ಆಂಧ್ರಪ್ರದೇಶ, ಗುಜರಾತಿನಲ್ಲಿ ತಮಗೆ ಕೊಡಮಾಡಲು ಮುಂದೆ ಬಂದಿರುವ ಸೌಕರ್ಯಗಳ ಪಟ್ಟಿ ಹಿಡಿದುಕೊಂಡೇ ನಮ್ಮ ಬಳಿಗೆ ಬರುತ್ತಾರೆ. ಆದರೆ, ನಮ್ಮಲ್ಲಿ ಭೂಮಿಯ ಲಭ್ಯತೆ ಉಳಿದ ರಾಜ್ಯಗಳಷ್ಟು ಸುಲಭವಾಗಿಲ್ಲ. ಆದರೂ ನಾವು ಇದನ್ನೆಲ್ಲ ಬಗೆಹರಿಸಿ, ಉದ್ಯಮಿಗಳ ಆದ್ಯತೆಗಳಿಗೂ ಸ್ಪಂದಿಸುತ್ತಿದ್ದೇವೆ ಎಂದು ಪಾಟೀಲ ವಿವರಿಸಿದ್ದಾರೆ.

ಇಂದಿನ ಕಾರ್ಯಕ್ರಮದಲ್ಲಿ ಶಾಸಕರಾದ ಶಿವಾನಂದ ಪಾಟೀಲ, ವಿಠ್ಠಲ ಕಟಕದೊಂಡ, ಮಾಜಿ ಶಾಸಕರಾದ ರಾಜು ಆಲಗೂರ, ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ (RCPL) ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಕೇತನ್ ಮೋದಿ, ಉಪಾಧ್ಯಕ್ಷರಾದ ಅರ್ಪಣ್ ಬಸು, ಕೆಐಎಡಿಬಿ ಸಿಇಒ ಗೋವಿಂದರೆಡ್ಡಿ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು, ವಿಡಿಎ ಅಧ್ಯಕ್ಷರಾದ ಡಾ. ಗಂಗಾಧರ ಸಂಬಣ್ಣಿ, ಮುಖಂಡರಾದ ಅಬ್ದುಲ್ ಹಮೀದ್ ಮುಶ್ರೀಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಸೇರಿದಂತೆ ಹಲವು ಗಣ್ಯರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.

ರೈತರು ಹಾಗೂ ಸ್ಥಳೀಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು.

Comments

Leave a Comment

Prev Post ಕುಮಾರಕೃಪಾ ಅತಿಥಿಗೃಹದ ಇತಿಹಾಸ
Next Post ಇಂಡಿಗೋ ತಾಂತ್ರಿಕ ದೋಷ; ಪೈಲೆಟ್ ಸಮಯ ಪ್ರಜ್ಞೆ ಕಾಪಾಡಿತು‌ ಜೀವ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News