PRABHAVAA.COM

ಕರ್ನಾಟಕವನ್ನು ಭಾರತದ ಕ್ವಾಂಟಮ್ ರಾಜಧಾನಿಯನ್ನಾಗಿ ರೂಪಿಸುವ ಗುರಿ;

Bengaluru Urban:

Font size:

ಕರ್ನಾಟಕವನ್ನು ಭಾರತದ ಕ್ವಾಂಟಮ್ ರಾಜಧಾನಿಯನ್ನಾಗಿ ರೂಪಿಸುವ ಗುರಿ; ಕ್ವಾಂಟಮ್ ಸಿಟಿಗೆ ಅಮೆರಿಕ ಕಂಪನಿಗಳಿಗೆ ಆಹ್ವಾನ: ಡಾ. ಅಜಯ್ ಧರ್ಮಸಿಂಗ್

- ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದಲ್ಲಿ ಅಮೆರಿಕದ ಕಂಪನಿಗಳು, ವಿಶ್ವವಿದ್ಯಾಲಯಗಳು ಹಾಗೂ ಸಂಶೋಧನಾ ಸಂಸ್ಥೆಗಳ ಸಹಭಾಗಿತ್ವಕ್ಕೆ ಕರೆ
- ಸಂಶೋಧನೆ, ಸ್ಟಾರ್ಟ್‌ಅಪ್, ಕೈಗಾರಿಕೆ, ಹೂಡಿಕೆ ಮತ್ತು ಜಾಗತಿಕ ಸಹಭಾಗಿತ್ವಕ್ಕೆ ಕ್ವಾಂಟಮ್ ಸಿಟಿ ಸಾಮಾನ್ಯ ವೇದಿಕೆ

ಬೆಂಗಳೂರು, ನವೆಂಬರ್ 18: ಕರ್ನಾಟಕವನ್ನು ಭಾರತದ ಕ್ವಾಂಟಮ್ ರಾಜಧಾನಿಯನ್ನಾಗಿ ರೂಪಿಸುವುದು ನಮ್ಮ ಗುರಿಯಾಗಿದ್ದು, ಬೆಂಗಳೂರಿನ ಪ್ರಸ್ತಾವಿತ ಕ್ವಾಂಟಮ್ ಸಿಟಿ ಯೋಜನೆಯಲ್ಲಿ ಅಮೆರಿಕದ ಪ್ರಮುಖ ತಂತ್ರಜ್ಞಾನ ಕಂಪನಿಗಳು, ವಿಶ್ವವಿದ್ಯಾಲಯಗಳು ಹಾಗೂ ಸಂಶೋಧನಾ ಸಂಸ್ಥೆಗಳು ಸಹಭಾಗಿಯಾಗಬೇಕು ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರ್ಮಸಿಂಗ್ ಆಹ್ವಾನಿಸಿದರು.

ಬೆಂಗಳೂರು ಟೆಕ್ ಸಮ್ಮಿಟ್ 2026ರ ಅಂಗವಾಗಿ ನಡೆದ ಯುಎಸ್–ಇಂಡಿಯಾ ಕ್ವಾಂಟಮ್ ತಂತ್ರಜ್ಞಾನ ಸಹಕಾರ ಕುರಿತ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಸಂಶೋಧನೆ, ನಾವೀನ್ಯತೆ, ಹೂಡಿಕೆ ಮತ್ತು ತಂತ್ರಜ್ಞಾನ ಅಭಿವೃದ್ಧಿಗೆ ಜಾಗತಿಕ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಅಮೆರಿಕದ ಕಂಪನಿಗಳು ರಾಜ್ಯದೊಂದಿಗೆ ಕೈಜೋಡಿಸಬೇಕು ಎಂದರು.

“ನಮ್ಮ ಗುರಿ ಸ್ಪಷ್ಟವಾಗಿದೆ. ಕರ್ನಾಟಕವನ್ನು ಭಾರತದ ಕ್ವಾಂಟಮ್ ರಾಜಧಾನಿಯನ್ನಾಗಿ ಮತ್ತು ಬೆಂಗಳೂರನ್ನು ಜಾಗತಿಕ ಕ್ವಾಂಟಮ್ ತಂತ್ರಜ್ಞಾನ ಕೇಂದ್ರವನ್ನಾಗಿ ರೂಪಿಸಬೇಕು. ಕ್ವಾಂಟಮ್ ಸಿಟಿ ಹಾಗೂ ರಾಜ್ಯದ ವಿಶಾಲ ಕ್ವಾಂಟಮ್ ಪರಿಸರ ವ್ಯವಸ್ಥೆ ನಿರ್ಮಾಣದಲ್ಲಿ ಅಮೆರಿಕದ ಕಂಪನಿಗಳು, ವಿಶ್ವವಿದ್ಯಾಲಯಗಳು ಮತ್ತು ಸಂಶೋಧನಾ ಸಂಸ್ಥೆಗಳು ಪಾಲುದಾರರಾಗಬೇಕು,” ಎಂದು ಡಾ. ಅಜಯ್ ಧರ್ಮಸಿಂಗ್ ಹೇಳಿದರು.

ಕ್ವಾಂಟಮ್ ಸಿಟಿಯನ್ನು ಕೇವಲ ಮೂಲಸೌಕರ್ಯ ಯೋಜನೆಯಾಗಿ ನೋಡದೆ, ಸಂಶೋಧನಾ ಸಂಸ್ಥೆಗಳು, ಸ್ಟಾರ್ಟ್‌ಅಪ್‌ಗಳು, ಕೈಗಾರಿಕೆ, ಹೂಡಿಕೆದಾರರು, ಪ್ರತಿಭಾವಂತ ಮಾನವ ಸಂಪನ್ಮೂಲ ಹಾಗೂ ಜಾಗತಿಕ ತಂತ್ರಜ್ಞಾನ ಪಾಲುದಾರರನ್ನು ಒಂದೇ ವೇದಿಕೆಯಲ್ಲಿ ಸಂಪರ್ಕಿಸುವ ಸಮಗ್ರ ಪರಿಸರ ವ್ಯವಸ್ಥೆ ನಿರ್ಮಿಸುವುದು ಇದರ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.

ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದಲ್ಲಿ ಅಗತ್ಯವಿರುವ ಅತ್ಯಾಧುನಿಕ ಪ್ರಯೋಗಾಲಯಗಳು, ವಿಶೇಷ ಉಪಕರಣಗಳು, ಪರೀಕ್ಷಾ ಸೌಲಭ್ಯಗಳು ಹಾಗೂ ಇತರೆ ಮೂಲಸೌಕರ್ಯವನ್ನು ಎಲ್ಲರಿಗೂ ಒದಗಿಸುವ ನಿಟ್ಟಿನಲ್ಲಿ ಸ್ಟಾರ್ಟ್‌ಅಪ್‌ಗಳು ಮತ್ತು ಸಂಶೋಧಕರಿಗೆ ಆರಂಭಿಕ ವೆಚ್ಚದ ಹೊರೆಯನ್ನು ಕಡಿಮೆ ಮಾಡುವ ಉದ್ದೇಶವಿದೆ ಎಂದರು.

“ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದ ಮೂಲಸೌಕರ್ಯ ಬಹಳಷ್ಟು ಬಂಡವಾಳ ಬೇಡುತ್ತದೆ. ಪ್ರತಿಯೊಂದು ಸ್ಟಾರ್ಟ್‌ಅಪ್ ಕೂಡ ಪ್ರತ್ಯೇಕವಾಗಿ ಇಂತಹ ಸೌಲಭ್ಯಗಳನ್ನು ಹೊಂದಲು ಸಾಧ್ಯವಿಲ್ಲ. ಆದ್ದರಿಂದ ಸಂಶೋಧನೆಯಿಂದ prototypeಗೆ, prototypeನಿಂದ ವಾಣಿಜ್ಯೀಕರಣದ ಹಂತಕ್ಕೆ ಸಾಗಲು ಅಗತ್ಯವಾದ shared infrastructure ಒದಗಿಸುವುದು ನಮ್ಮ ಉದ್ದೇಶ,” ಎಂದು ಸಚಿವರು ಹೇಳಿದರು.

ಸಮಗ್ರ ಕ್ವಾಂಟಮ್ ತಂತ್ರಜ್ಞಾನ ನೀತಿ

ಕರ್ನಾಟಕ ಸರ್ಕಾರ ಸಮಗ್ರ ಕ್ವಾಂಟಮ್ ತಂತ್ರಜ್ಞಾನ ನೀತಿ ರೂಪಿಸುವ ಪ್ರಕ್ರಿಯೆಯಲ್ಲಿದ್ದು, ಸಂಶೋಧನೆ, ಶಿಕ್ಷಣ ಸಂಸ್ಥೆಗಳು, ಸ್ಟಾರ್ಟ್‌ಅಪ್‌ಗಳು, ಕೈಗಾರಿಕೆ, ಹೂಡಿಕೆ ಪ್ರೋತ್ಸಾಹ, ಜಾಗತಿಕ ಸಹಭಾಗಿತ್ವ, ಹಣಕಾಸು ವ್ಯವಸ್ಥೆ ಹಾಗೂ ನಿರ್ದಿಷ್ಟ ಅನುಷ್ಠಾನ ಗುರಿಗಳನ್ನು ಒಳಗೊಂಡ ನೀತಿಯನ್ನು ರೂಪಿಸಲಾಗುವುದು ಎಂದು ಡಾ. ಅಜಯ್ ಧರ್ಮಸಿಂಗ್ ತಿಳಿಸಿದರು.

ಕ್ವಾಂಟಮ್ ಕಂಪ್ಯೂಟಿಂಗ್, ಕ್ವಾಂಟಮ್ ಸಂವಹನ, ಕ್ವಾಂಟಮ್ ಸೆನ್ಸಿಂಗ್, ಸೈಬರ್ ಭದ್ರತೆ, ಹಾರ್ಡ್‌ವೇರ್ ಅಭಿವೃದ್ಧಿ, ಮಾನವ ಸಂಪನ್ಮೂಲ ಅಭಿವೃದ್ಧಿ ಹಾಗೂ ಸಂಶೋಧನೆಯ ವಾಣಿಜ್ಯೀಕರಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಭಾರತ–ಅಮೆರಿಕ ಸಹಭಾಗಿತ್ವಕ್ಕೆ ದೊಡ್ಡ ಅವಕಾಶಗಳಿವೆ ಎಂದು ಅವರು ಹೇಳಿದರು.

“ಮುಂದಿನ ಹಂತದ ಕ್ವಾಂಟಮ್ ತಂತ್ರಜ್ಞಾನವನ್ನು ಯಾವುದೇ ಒಂದು ದೇಶ ಅಥವಾ ಸಂಸ್ಥೆ ಪ್ರತ್ಯೇಕವಾಗಿ ನಿರ್ಮಿಸಲು ಸಾಧ್ಯವಿಲ್ಲ. ದೇಶಗಳು, ವಿಶ್ವವಿದ್ಯಾಲಯಗಳು, ಕೈಗಾರಿಕೆಗಳು ಮತ್ತು ಸ್ಟಾರ್ಟ್‌ಅಪ್‌ಗಳ ನಡುವೆ ಸಹಕಾರ ಅಗತ್ಯ. ಭಾರತೀಯ ಮತ್ತು ಅಮೆರಿಕದ ಸಂಶೋಧಕರು ಹಾಗೂ ಕಂಪನಿಗಳು ಒಟ್ಟಾಗಿ ತಂತ್ರಜ್ಞಾನ ಅಭಿವೃದ್ಧಿಪಡಿಸಿ, ಪರೀಕ್ಷಿಸಿ, ಜಾಗತಿಕ ಮಾರುಕಟ್ಟೆಗೆ ಉತ್ಪನ್ನಗಳನ್ನು ತರುವಂತಹ ವೇದಿಕೆಯಾಗಬೇಕು ಕ್ವಾಂಟಮ್ ಸಿಟಿ,” ಎಂದು ಅವರು ಹೇಳಿದರು.

ಬೆಂಗಳೂರಿನ ವಿಶ್ವಮಟ್ಟದ ಸಂಶೋಧನಾ ಸಂಸ್ಥೆಗಳು, ತಾಂತ್ರಿಕ ಪ್ರತಿಭೆ, ಸ್ಟಾರ್ಟ್‌ಅಪ್‌ಗಳು ಹಾಗೂ ತಂತ್ರಜ್ಞಾನ ಕಂಪನಿಗಳ ಬಲವನ್ನು ಬಳಸಿಕೊಂಡು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಬಲ್ಲ ಕ್ವಾಂಟಮ್ ಪರಿಸರ ವ್ಯವಸ್ಥೆ ನಿರ್ಮಿಸಲು ಕರ್ನಾಟಕ ಉತ್ತಮ ಸ್ಥಾನದಲ್ಲಿದೆ ಎಂದು ಸಚಿವರು ತಿಳಿಸಿದರು.

“ಸಂಶೋಧನೆಯಿಂದ ನಾವೀನ್ಯತೆಗೆ, ನಾವೀನ್ಯತೆಯಿಂದ ಉದ್ಯಮಕ್ಕೆ, ಉದ್ಯಮದಿಂದ ಜಾಗತಿಕ ಮಾರುಕಟ್ಟೆಗೆ ಸಾಗುವ ಸ್ಪಷ್ಟ ಮಾರ್ಗವನ್ನು ನಿರ್ಮಿಸುವುದು ನಮ್ಮ ಉದ್ದೇಶ. ಇದಕ್ಕಾಗಿ ವಿಶ್ವದ ಅತ್ಯುತ್ತಮ ಕಂಪನಿಗಳು ಮತ್ತು ಪ್ರತಿಭೆಗಳೊಂದಿಗೆ ಸಹಭಾಗಿತ್ವಕ್ಕೆ ಕರ್ನಾಟಕ ಸಿದ್ಧವಾಗಿದೆ,” ಎಂದು ಡಾ. ಅಜಯ್ ಧರ್ಮಸಿಂಗ್ ಹೇಳಿದರು.

Comments

Leave a Comment

Prev Post ವರ್ಷಾಂತ್ಯದೊಳಗೆ 8 ಲಕ್ಷ ಗ್ರಾಮೀಣ ಆಸ್ತಿಗೆ ಇ-ಸ್ವತ್ತು: ಈಶ್ವರ ಖಂಡ್ರೆ
Next Post ಐಟಿ ರಾಜಧಾನಿಯಲ್ಲಿ ಸರ್ವರ್ ವೈಫಲ್ಯ: ಹೊರರಾಜ್ಯದ ಕಂಪನಿಗಳ ವಿರುದ್ಧ ಕನ್ನಡಿಗರ ಆಕ್ರೋಶ

ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟಕ್ಕೆ ₹10.61 ಕೋಟಿ ಲಾಭ.

ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟಕ್ಕೆ ₹10.61 ಕೋಟಿ ಲಾಭ.

ಬಾಗ್ಮನೆ ಸಾಧನೆ ದೇಶವೇ ಹೆಮ್ಮೆಪಡುವಂತದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ಬಾಗ್ಮನೆ ಸಾಧನೆ ದೇಶವೇ ಹೆಮ್ಮೆಪಡುವಂತದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

₹6,000 ಕೋಟಿ ಹೂಡಿಕೆಗೆ ಆ್ಯಕ್ಸಿಸ್‌ಕೇಡ್ಸ್‌ ಏರೊಸ್ಪೇಸ್‌ ಒಲವು: ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ

* ಮೂರು ವರ್ಷಗಳಲ್ಲಿ ವೈಮಾಂತರಿಕ್ಷ, ರಕ್ಷಣೆ, ಎಂಆರ್‌ಒ, ತಯಾರಿಕಾ ಕ್ಲಸ್ಟರ್‌ ಅಭಿವೃದ್ಧಿ * 20 ಸಾವಿರ ಪ್ರತ್ಯಕ್ಷ ಹಾಗೂ 54 ಸಾವಿರ ಪರೋಕ್ಷ ಉದ್ಯೋಗ ಅವಕಾಶಗಳು ಸೃಷ್ಟಿ

ಎಂ.ಸಿ.ಸಿ.ಬ್ಯಾಂಕ್ ಕಾರ್ಯವ್ಯಾಪ್ತಿ ರಾಜ್ಯಕ್ಕೆ ವಿಸ್ತರಣೆ: ಅಧ್ಯಕ್ಷ ಅನಿಲ್ ಲೋಬೋ

ಎಂಸಿಸಿ ಬ್ಯಾಂಕ್: ದೇರಳಕಟ್ಟೆ ಮತ್ತು ಕಟಪಾಡಿಯಲ್ಲಿ ಹೊಸ ಶಾಖೆಗಳ ಉದ್ಘಾಟನೆ, 1,535 ಕೋಟಿ ರೂ. ವ್ಯವಹಾರ ಮೈಲಿಗಲ್ಲು

ಬ್ಯಾಂಕ್ ನೀಡುವ ಸಾಲದಿಂದ ಗ್ರಾಹಕರು ಆದಾಯ ಹೆಚ್ಚಿಸಿಕೊಳ್ಳಬೇಕು: ಬಸವರಾಜ ಬೊಮ್ಮಾಯಿ

ಬ್ಯಾಂಕ್ ನೀಡುವ ಸಾಲದಿಂದ ಗ್ರಾಹಕರು ಆದಾಯ ಹೆಚ್ಚಿಸಿಕೊಳ್ಳಬೇಕು: ಬಸವರಾಜ ಬೊಮ್ಮಾಯಿ

ಹೂಡಿಕೆ ಆಕರ್ಷಣೆಗೆ ಕೋಲ್ಕತ್ತಾದಲ್ಲಿ ರೋಡ್ ಶೋ ನಡೆಸಿದ ಸಚಿವ ಎಂ.ಬಿ.ಪಾಟೀಲ

ಹೂಡಿಕೆ ಆಕರ್ಷಣೆಗೆ ಕೋಲ್ಕತ್ತಾದಲ್ಲಿ ರೋಡ್ ಶೋ ನಡೆಸಿದ ಸಚಿವ ಎಂ.ಬಿ.ಪಾಟೀಲ

Read all News