PRABHAVAA.COM

ಐಟಿ ರಾಜಧಾನಿಯಲ್ಲಿ ಸರ್ವರ್ ವೈಫಲ್ಯ: ಹೊರರಾಜ್ಯದ ಕಂಪನಿಗಳ ವಿರುದ್ಧ ಕನ್ನಡಿಗರ ಆಕ್ರೋಶ

Bengaluru Urban:

Font size:

ಐಟಿ ರಾಜಧಾನಿಯಲ್ಲಿ ಸರ್ವರ್ ವೈಫಲ್ಯ: ಹೊರರಾಜ್ಯದ ಕಂಪನಿಗಳ ವಿರುದ್ಧ ಕನ್ನಡಿಗರ ಆಕ್ರೋಶ

ಬೆಂಗಳೂರು, ನ.18: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಸರ್ವರ್ ವೈಫಲ್ಯಗಳಿಂದ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಈ ಸಮಸ್ಯೆಗೆ ಅಸಮರ್ಥ ಆಡಳಿತ ಮತ್ತು ಹೊರರಾಜ್ಯದ ಕಂಪನಿಗಳಿಗೆ ನೀಡಲಾದ ಗುತ್ತಿಗೆಗಳೇ ಕಾರಣವೆಂದು ಆರೋಪಿಸಿ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಹಾಗೂ ಕನ್ನಡ ಚಳವಳಿ ನಾಯಕ ಗುರುದೇವ್ ನಾರಾಯಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಜಗತ್ತಿನ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಕೇಂದ್ರವಾಗಿರುವ ಬೆಂಗಳೂರಿನಲ್ಲಿ ಸರ್ಕಾರಿ ಕಚೇರಿಗಳಲ್ಲಿ 'ಸರ್ವರ್ ಸಮಸ್ಯೆ' ದೈನಂದಿನ ಸಂಗತಿಯಾಗಿ ಪರಿಣಮಿಸಿರುವುದು ವಿಷಾದನೀಯ ಬೆಳವಣಿಗೆ ಎಂದು ಹೇಳಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹಾಗೂ ನೋಂದಣಿ ಇಲಾಖೆಗಳ ಕಚೇರಿಗಳಲ್ಲಿ ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಅಲೆದಾಡುವಂತಾಗಿದ್ದರೂ, ಸರ್ಕಾರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದ್ದಾರೆ.

ಬೆಂಗಳೂರಿನಲ್ಲಿ ಸಾವಿರಾರು ಪ್ರತಿಷ್ಠಿತ ಐಟಿ ಸಂಸ್ಥೆಗಳಿದ್ದರೂ ಜಿಬಿಎ ಯೋಜನಾ ವಿಭಾಗದ ತಾಂತ್ರಿಕ ನಿರ್ವಹಣೆಯನ್ನು ಪೂನಾದ ಕಂಪನಿಯೊಂದಕ್ಕೆ ಹಾಗೂ ತೆರಿಗೆ ಸಂಗ್ರಹಣೆಯಂತಹ ಪ್ರಮುಖ ಜವಾಬ್ದಾರಿಗಳನ್ನು ಹೈದರಾಬಾದ್ ಮೂಲದ ಸಂಸ್ಥೆಗೆ ವಹಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಆಡಳಿತದ ತಾಂತ್ರಿಕ ನಿಯಂತ್ರಣವನ್ನು ಹೊರರಾಜ್ಯದ ಸಂಸ್ಥೆಗಳ ಕೈಗೆ ಒಪ್ಪಿಸಿರುವುದು ಅಧಿಕಾರಿಗಳ ಅಸಮರ್ಥತೆಯೋ ಅಥವಾ ಲಾಬಿಯ ಪರಿಣಾಮವೋ ಎಂಬ ಅನುಮಾನ ಮೂಡಿದೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಇಲಾಖೆಗಳಲ್ಲಿನ ಸರ್ವರ್ ಸಮಸ್ಯೆಗಳಿಗೆ ಕೇಂದ್ರೀಕೃತ ತಾಂತ್ರಿಕ ವ್ಯವಸ್ಥೆಯೇ ಪ್ರಮುಖ ಕಾರಣವಾಗಿದ್ದು, ಕೂಡಲೇ ವ್ಯವಸ್ಥೆಯನ್ನು ವಿಕೇಂದ್ರೀಕರಣಗೊಳಿಸಿ ಸರ್ವರ್ ಮೇಲಿನ ಒತ್ತಡವನ್ನು ಕಡಿಮೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಸ್ಥಳೀಯ ಐಟಿ ಸಾಮರ್ಥ್ಯವನ್ನು ಕಡೆಗಣಿಸಿ ಹೊರರಾಜ್ಯದ ಕಂಪನಿಗಳಿಗೆ ಗುತ್ತಿಗೆ ನೀಡಿರುವುದು ಕನ್ನಡಿಗರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಅವರು ಟೀಕಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ತಾಂತ್ರಿಕ ದೋಷಗಳನ್ನು ಸರಿಪಡಿಸಬೇಕು, ಹೊರರಾಜ್ಯದ ಕಂಪನಿಗಳೊಂದಿಗಿನ ಗುತ್ತಿಗೆಗಳನ್ನು ಮರುಪರಿಶೀಲಿಸಿ ಬೆಂಗಳೂರಿನ ಸ್ಥಳೀಯ ಐಟಿ ಸಂಸ್ಥೆಗಳಿಗೆ ಆದ್ಯತೆ ನೀಡಬೇಕು ಹಾಗೂ ನಾಗರಿಕರಿಗೆ ತಡೆರಹಿತ ಸೇವೆ ಒದಗಿಸಲು ಆಡಳಿತದ ತಾಂತ್ರಿಕ ವ್ಯವಸ್ಥೆಯನ್ನು ವಿಕೇಂದ್ರೀಕರಣಗೊಳಿಸಬೇಕು ಎಂದು ಗುರುದೇವ್ ನಾರಾಯಣ್ ಒತ್ತಾಯಿಸಿದ್ದಾರೆ.

ಅಭಿವೃದ್ಧಿಯ ಬಗ್ಗೆ ಮಾತನಾಡುವ ಸರ್ಕಾರ ಮೊದಲು ಸರ್ಕಾರಿ ಇಲಾಖೆಗಳಲ್ಲಿನ ತಾಂತ್ರಿಕ ಮೂಲಸೌಕರ್ಯವನ್ನು ಸುಧಾರಿಸಬೇಕು. ಇಲ್ಲವಾದಲ್ಲಿ ಕನ್ನಡಿಗರ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Comments

Leave a Comment

Prev Post ಕರ್ನಾಟಕವನ್ನು ಭಾರತದ ಕ್ವಾಂಟಮ್ ರಾಜಧಾನಿಯನ್ನಾಗಿ ರೂಪಿಸುವ ಗುರಿ;
Next Post ರಾಜ್ಯ ಪೊಲೀಸ್ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಗಳ ಭಾರೀ ಮಟ್ಟದ ವರ್ಗಾವಣೆ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News