*ನವೋದಯ ಹಬ್ಬ ಗುರು ಶ್ರೇಷ್ಠ ಪ್ರಶಸ್ತಿ ಪ್ರಧಾನ ಸಮಾರಂಭ 2026ಕ್ಕೆ ಅದ್ದೂರಿ ಚಾಲನೆ
*ನವೋದಯ ಹಬ್ಬ ಗುರು ಶ್ರೇಷ್ಠ ಪ್ರಶಸ್ತಿ ಪ್ರಧಾನ ಸಮಾರಂಭ 2026ಕ್ಕೆ ಅದ್ದೂರಿ ಚಾಲನೆ*
ಬೆಂಗಳೂರು: ನಗರದ ಶಿಕ್ಷಕರ ಸದನದಲ್ಲಿ ನವೋದಯ ಹಳೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಮಾವೇಶದ ಅಂಗವಾಗಿ ನವೋದಯ ಹಬ್ಬ 2026ರ 11ನೇ ವಾರ್ಷಿಕೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಗುರುಶ್ರೇಷ್ಠ, ನವೋದಯ ಚೇತನ, ನವೋದಯ ಭೂಷಣ ಹಾಗೂ ನವೋದಯ ಮಿತ್ರ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ನವೋದಯ ಶಾಲೆಯ ಹಳೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ನವೋದಯ ಹಬ್ಬದ ಅಂಗವಾಗಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು, ರಕ್ತದಾನ ಶಿಬಿರ ಸೇರಿದಂತೆ ಹಲವು ಸಮಾಜಮುಖಿ ಹಾಗೂ ಸೇವಾ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಹಳೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಒಂದೇ ವೇದಿಕೆಯಲ್ಲಿ ಸೇರಿ ಶಾಲಾ ದಿನಗಳ ಸವಿ ನೆನಪುಗಳನ್ನು ಮೆಲುಕು ಹಾಕಿ ಸಂಭ್ರಮಿಸಿದರು.
ನವೋದಯ ಸೋಮೇಶ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಚಲನಚಿತ್ರ ನಟ, ನಿರ್ಮಾಪಕ ಹಾಗೂ ಹಿರಿಯ ಪತ್ರಕರ್ತ ಗಂಡಸಿ ಸದಾನಂದ ಸ್ವಾಮಿ, ಹರ್ಬ್ ಬ್ರೈಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ಪ್ರದೀಪ್ ಅಂಗಡಿ, ಇನ್ಸೈಟ್ಸ್ ಐಎಎಸ್ ಸಂಸ್ಥಾಪಕ ವಿನಯ್ ಕುಮಾರ್ ಜಿ.ಬಿ., ಫ್ಲಿಪ್‌ಕಾರ್ಟ್ ನಿರ್ದೇಶಕ ಮಹೇಶ್ ಎನ್.ಸಿ., ಖ್ಯಾತ ಸಂಗೀತ ನಿರ್ದೇಶಕ ಕೃಪಾಕರ್,ನಟ, ನಾಗಭೂಷಣ್, ನವೋದಯ ವಿದ್ಯಾರ್ಥಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಿಎ ಸಂದೀಪ್ ಎಸ್. ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಹನೀಫ್ ಹುರೇರ ಅವರು ಅಚ್ಚುಕಟ್ಟಾಗಿ ನಿರ್ವಹಿಸಿದರು. ಈ ಸಂದರ್ಭದಲ್ಲಿ ಹಲವು ಗಣ್ಯರು, ಶಿಕ್ಷಕರು, ನವೋದಯ ಹಳೆಯ ವಿದ್ಯಾರ್ಥಿಗಳು ಹಾಗೂ ಅಭಿಮಾನಿಗಳು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಒಟ್ಟಾರೆ, ನವೋದಯ ಹಬ್ಬ 2026 ಸ್ನೇಹ, ಸೌಹಾರ್ದತೆ, ಸಾಧನೆ, ಗುರು ಗೌರವ ಹಾಗೂ ಸಮಾಜಸೇವೆಯ ಸಂದೇಶ ಸಾರುವ ಮೂಲಕ ಅತ್ಯಂತ ಯಶಸ್ವಿಯಾಗಿ ನೆರವೇರಿತು.







Comments
Leave a Comment