PRABHAVAA.COM

ದುಬೈ ಕರ್ನಾಟಕ ರಾಜ್ಯೋತ್ಸವದಲ್ಲಿ ಕನ್ನಡದ ಕಂಪು

:

Font size:

ಅನಿವಾಸಿ ಕನ್ನಡಿಗರ ಕನ್ನಡಾಭಿಮಾನ ಶ್ಲಾಘನೀಯ: ಎನ್. ರವಿಕುಮಾರ್

ದುಬೈ ಕರ್ನಾಟಕ ರಾಜ್ಯೋತ್ಸವದಲ್ಲಿ ಕನ್ನಡದ ಕಂಪು

ಅನಿವಾಸಿ ಕನ್ನಡಿಗರ ಕನ್ನಡಾಭಿಮಾನ ಶ್ಲಾಘನೀಯ: ಎನ್. ರವಿಕುಮಾರ್

ದುಬೈ, ನವೆಂಬರ್ 23: ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್. ರವಿಕುಮಾರ್ ಅವರು ದುಬೈನಲ್ಲಿ ನಡೆದ ದುಬೈ ಕರ್ನಾಟಕ ರಾಜ್ಯೋತ್ಸವ-2026 ಕಾರ್ಯಕ್ರಮದಲ್ಲಿ ಭಾಗವಹಿಸಿ ಅನಿವಾಸಿ ಕನ್ನಡಿಗರ ಕನ್ನಡಾಭಿಮಾನವನ್ನು ಶ್ಲಾಘಿಸಿದರು.

ದುಬೈನ ಕರ್ನಾಟಕ ಸಂಘ ದುಬೈ ಹಾಗೂ ಕನ್ನಡಿಗರ ಕೂಟ ದುಬೈ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ವಿದೇಶದ ನೆಲದಲ್ಲಿದ್ದರೂ ಕನ್ನಡ ಭಾಷೆ, ನಾಡು-ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸಲು ಕನ್ನಡಿಗರು ತೋರುತ್ತಿರುವ ಬದ್ಧತೆ ಮತ್ತು ಸಂಘಟನಾತ್ಮಕ ಪ್ರಯತ್ನಗಳು ಪ್ರಶಂಸನೀಯವಾಗಿವೆ ಎಂದು ಹೇಳಿದರು.

ಕನ್ನಡಿಗರು ಜಗತ್ತಿನ ವಿವಿಧ ಭಾಗಗಳಲ್ಲಿ ನೆಲೆಸಿದ್ದರೂ ತಮ್ಮ ಭಾಷೆ ಮತ್ತು ಸಂಸ್ಕೃತಿಯೊಂದಿಗೆ ನಂಟು ಉಳಿಸಿಕೊಂಡಿರುವುದು ಹೆಮ್ಮೆಯ ಸಂಗತಿ ಎಂದು ಅವರು ಅಭಿಪ್ರಾಯಪಟ್ಟರು. ಇಂತಹ ಕಾರ್ಯಕ್ರಮಗಳು ಹೊಸ ತಲೆಮಾರಿಗೆ ಕನ್ನಡದ ಮಹತ್ವವನ್ನು ಪರಿಚಯಿಸುವುದರ ಜೊತೆಗೆ ಕನ್ನಡಿಗರ ನಡುವೆ ಒಗ್ಗಟ್ಟು ಮತ್ತು ಬಾಂಧವ್ಯವನ್ನು ಬಲಪಡಿಸುತ್ತವೆ ಎಂದರು.

ರಾಜ್ಯೋತ್ಸವದ ಸಂಭ್ರಮದಲ್ಲಿ ಅನಿವಾಸಿ ಕನ್ನಡಿಗರೊಂದಿಗೆ ಸಂತಸದ ಕ್ಷಣಗಳನ್ನು ಹಂಚಿಕೊಂಡ ಎನ್. ರವಿಕುಮಾರ್, ಕನ್ನಡ ಭಾಷೆ ಹಾಗೂ ಕನ್ನಡ ನಾಡು-ನುಡಿಯ ಬಗ್ಗೆ ಅಭಿಮಾನವನ್ನು ಮತ್ತಷ್ಟು ಎತ್ತಿಹಿಡಿಯುವ ಅಗತ್ಯವಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ದುಬೈ ಸೇರಿದಂತೆ ಯುಎಇಯ ವಿವಿಧ ಭಾಗಗಳಲ್ಲಿ ನೆಲೆಸಿರುವ ಕನ್ನಡಿಗರು ಭಾಗವಹಿಸಿ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು.

Comments

Leave a Comment

Prev Post ಜಂಗಲ್‌ ಲಾಡ್ಜಸ್‌ ಆಸ್ತಿಗಳ ನವೀಕರಣಕ್ಕೆ ಕ್ರಮ: ಸಚಿವ ಕೆ.ಜೆ. ಜಾರ್ಜ್
Next Post ಚ್.ಡಿ. ಕೋಟೆ ವ್ಯಾಪ್ತಿಯ ಪರಿಶಿಷ್ಟ ಪಂಗಡದ ಹಾಡಿಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ ಸಚಿವ ರಘುಮೂರ್ತಿ

‎ನಾಡಿನ ಜನರ ಹೃದಯದಲ್ಲಿ ಯಡಿಯೂರಪ್ಪರಿಗೆ ಶಾಶ್ವತ ಸ್ಥಾನ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಎಲೆಕೊಡಿಗೇಹಳ್ಳಿ ಶ್ರೀನಂದಿಬಸವೇಶ್ವರ ನೂತನ ದೇವಾಲಯದ ಮಂಡಲ ಪೂಜೆ

ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಕಾಯ್ದೆ ಜಾರಿಗೆ

ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಕಾಯ್ದೆ ಜಾರಿಗೆ

ಕೇರಳದಲ್ಲೊಂದು ಗೋಶಾಲೆ ಸಹಿತ ಮನೆ.

ಕೇರಳದಲ್ಲೊಂದು ಗೋಶಾಲೆ ಸಹಿತ ಮನೆ.

ಕಾಸರಗೋಡು: ದೇವರ ನಾಡಿನ ಸಂಪ್ರದಾಯದ ಭವ್ಯತೆ

ಕಾಸರಗೋಡು: ದೇವರ ನಾಡಿನ ಸಂಪ್ರದಾಯದ ಭವ್ಯತೆ

ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ-ನಟ ವಿಜಯ್ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ, ಭಾರೀ ಭದ್ರತೆ

ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ-ನಟ ವಿಜಯ್ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ, ಭಾರೀ ಭದ್ರತೆ

ಯಡಿಯೂರು ಕೆರೆಯ ಎದುರು ‘ಅ.ನ.ಕೃ. ಕನ್ವೆನ್ಷನ್ ಸೆಂಟರ್’ ಹಾಗೂ ‘ಡಾ|| ಪುನೀತ್ ರಾಜ್ ಕುಮಾರ್ ಸಭಾಂಗಣ’ ಭವ್ಯ ಲೋಕಾರ್ಪಣೆ

ಯಡಿಯೂರು ಕೆರೆಯ ಎದುರು ‘ಅ.ನ.ಕೃ. ಕನ್ವೆನ್ಷನ್ ಸೆಂಟರ್’ ಹಾಗೂ ‘ಡಾ|| ಪುನೀತ್ ರಾಜ್ ಕುಮಾರ್ ಸಭಾಂಗಣ’ ಭವ್ಯ ಲೋಕಾರ್ಪಣೆ

Read all News