PRABHAVAA.COM

ಚ್.ಡಿ. ಕೋಟೆ ವ್ಯಾಪ್ತಿಯ ಪರಿಶಿಷ್ಟ ಪಂಗಡದ ಹಾಡಿಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ ಸಚಿವ ರಘುಮೂರ್ತಿ

Mysuru:

Font size:

ಬುಡಕಟ್ಟು ಸಮುದಾಯದ ಅಭಿವೃದ್ಧಿಗೆ ಆದ್ಯತೆ ನೀಡಲು ಸೂಚನೆ

ಸರಗೂರು, ಎಚ್.ಡಿ. ಕೋಟೆ ವ್ಯಾಪ್ತಿಯ ಪರಿಶಿಷ್ಟ ಪಂಗಡದ ಹಾಡಿಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ ಸಚಿವ ರಘುಮೂರ್ತಿ

ಬುಡಕಟ್ಟು ಸಮುದಾಯದ ಅಭಿವೃದ್ಧಿಗೆ ಆದ್ಯತೆ ನೀಡಲು ಸೂಚನೆ

ಮೈಸೂರು, ನ.24: ಬುಡಕಟ್ಟು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಗಮನ ನೀಡಬೇಕಾದ ಅಗತ್ಯವಿದೆ. ಆಶ್ರಮ ಶಾಲೆಗಳು ಮತ್ತು ವಸತಿ ನಿಲಯಗಳಲ್ಲಿ ಗುಣಮಟ್ಟದ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳಬೇಕು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘುಮೂರ್ತಿ ತಿಳಿಸಿದರು.

ಸರಗೂರು ಮತ್ತು ಎಚ್.ಡಿ. ಕೋಟೆ ತಾಲೂಕು ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಪಂಗಡದ ಬುಡಕಟ್ಟು ಜನಾಂಗದವರು ವಾಸಿಸುತ್ತಿರುವ ಹಾಡಿಗಳಿಗೆ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ / ಆಶ್ರಮ ಶಾಲೆಗಳಿಗೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಸ್ವೀಕರಿಸಿದ ನಂತರ ಮಾತನಾಡಿದರು.

ಹಾಡಿಗಳ ಭೇಟಿಯ ಸಂದರ್ಭದಲ್ಲಿ ನಿವಾಸಿಗಳೊಂದಿಗೆ ಸಂವಾದ ನಡೆಸಿದ ಸಚಿವರು, ಬುಡಕಟ್ಟು ಸಮುದಾಯದ ಹಿತರಕ್ಷಣೆ ಮತ್ತು ಸಮಗ್ರ ಅಭಿವೃದ್ಧಿ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದರು.

ಹಾಡಿ ಜನರ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವಂತೆ ಮತ್ತು ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಫಲ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆ, ಬೋರ್‌ವೆಲ್‌ ಹಾಳಾದಾಗ ತಕ್ಷಣದ ಪರಿಹಾರ ಕ್ರಮಗಳು, ಸಾಮೂಹಿಕ ಬೋರ್‌ವೆಲ್‌ಗಳ ಅಗತ್ಯ ಹಾಗೂ ಅರಣ್ಯ ಪ್ರದೇಶದೊಳಗಿನ ಬೋರ್‌ವೆಲ್‌ಗಳಿಗೆ ವಿದ್ಯುತ್/ಸೌರಶಕ್ತಿ ಸಂಪರ್ಕ ಕಲ್ಪಿಸಬೇಕು ಎಂದರು.

ಹಾಡಿಗಳಲ್ಲಿ ವಾಸಿಸುವ ಪರಿಶಿಷ್ಟ ಪಂಗಡದ ಜನರಿಗೆ ಸರ್ಕಾರದ ಸೌಲಭ್ಯಗಳು ಮತ್ತು ದಾಖಲೆಗಳು ಸುಲಭವಾಗಿ ತಲುಪಬೇಕು. ಅಧಿಕಾರಿಗಳು ನೆಪ ಹೇಳದೆ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಬೇಕು ಎಂದು ರಘುಮೂರ್ತಿ ಹೇಳಿದರು.

ಯೋಜನೆಗಳು ಜನರನ್ನು ತಲುಪಲು ವಿವಿಧ ಇಲಾಖೆಗಳ ನಡುವೆ ಸಮನ್ವಯದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಆಧಾರ್ ಕಾರ್ಡ್, ರೇಷನ್ ಕಾರ್ಡ್, ಹಕ್ಕುಪತ್ರ ಮತ್ತು ಪಹಣಿ ಸಮಸ್ಯೆಗಳನ್ನು ಬಗೆಹರಿಸಿ, ಹಾಡಿಗಳ ಒಳಗಿನ ಕುಗ್ರಾಮಗಳಿಗೂ ಸರ್ಕಾರದ ಸೌಲಭ್ಯಗಳು ತಲುಪುವಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ತಿಳಿಸಿದರು.

ಹಾಡಿಗಳಲ್ಲಿನ ರಸ್ತೆ, ಕುಡಿಯುವ ನೀರು, ವಸತಿ, ವಿದ್ಯುತ್ ಹಾಗೂ ಆರೋಗ್ಯ ಸೌಲಭ್ಯಗಳ ಸ್ಥಿತಿಗತಿ ಕುರಿತು ನಿವಾಸಿಗಳಿಂದ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ನಿರ್ದೇಶಕರು ಡಾ.ಅಶೋಕ್ ಡಿ.ಆರ್, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಶೋಕ್‌ ದುಡಗಂಟಿ, ಜಂಟಿ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಜಕುಮಾರ್, ಸಹಾಯಕ ನಿರ್ದೇಶಕರು ಶ್ರೀನಿವಾಸ್, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಭಾರತಿ ಸಿ. ಆರ್, ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Comments

Leave a Comment

Prev Post ದುಬೈ ಕರ್ನಾಟಕ ರಾಜ್ಯೋತ್ಸವದಲ್ಲಿ ಕನ್ನಡದ ಕಂಪು

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News