PRABHAVAA.COM

ಬರ: ವಿಬಿಜಿ ರಾಮ್ ಜಿ ಉದ್ಯೋಗ 50 ದಿನ ಹೆಚ್ಚಿಸಿ ಕೇಂದ್ರಕ್ಕೆ ಈಶ್ವರ ಖಂಡ್ರೆ ಪತ್ರ

Bengaluru Urban:

Font size:

ರಾಜ್ಯದಿಂದ 1167 ಕೋಟಿ, ಕೇಂದ್ರದಿಂದ 1751 ಕೋಟಿ ರೂ. ಬಿಡುಗಡೆ:ಈಶ್ವರ ಖಂಡ್ರೆ

2.83 ಕೋಟಿ ಮಾನವ ದಿನ ಸೃಜನೆ, 803 ಕೋಟಿ ರೂ. ವೇತನ ಪಾವತಿ:ಈಶ್ವರ ಖಂಡ್ರೆ

ಬರ-ಗ್ರಾಮೀಣ ಬಡವರಿಗೆ 175 ದಿನ ಉದ್ಯೋಗ ನೀಡಲು ಕೇಂದ್ರಕ್ಕೆ ಈಶ್ವರ ಖಂಡ್ರೆ ಮನವಿ

ಬೆಂಗಳೂರು, ನ.26: ರಾಜ್ಯದಲ್ಲಿ ಈ ಬಾರಿ 226 ತಾಲೂಕುಗಳು ಬರ ಪೀಡಿತವಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಅಕುಶಲ ಬಡ ಕಾರ್ಮಿಕರಿಗೆ ವಿಬಿಜಿ ರಾಮ್ ಜಿ ಅಡಿಯಲ್ಲಿ 175 ದಿನ ಉದ್ಯೋಗ ನೀಡಲು ಅನುವಾಗುವಂತೆ ಕೆಲಸದ ಮಿತಿಯನ್ನು 50 ದಿನ ಹೆಚ್ಚಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚವ್ಹಾಣ್ ಅವರಿಗೆ ಪತ್ರ ಬರೆದಿರುವ ಈಶ್ವರ ಖಂಡ್ರೆ, ರಾಜ್ಯದಲ್ಲಿ ಉಂಟಾಗಿರುವ ಮಳೆಯ ಕೊರತೆಯನ್ನು ಅಂಕಿ ಅಂಶಗಳ ಸಹಿತ ವಿವರಿಸಿ, ಜನ ಗುಳೆ ಹೋಗದಂತೆ ತಪ್ಪಿಸಲು ಭೂ ರಹಿತ ಕೂಲಿ ಕಾರ್ಮಿಕರಿಗೆ, ದುರ್ಬಲರಿಗೆ, ಗ್ರಾಮೀಣ ಬಡಜನರಿಗೆ ಹೆಚ್ಚಿನ ಉದ್ಯೋಗ ನೀಡುವ ಅಗತ್ಯವನ್ನು ಪ್ರತಿಪಾದಿಸಿದ್ದಾರೆ.

ರಾಜ್ಯದಲ್ಲಿ ಈ ವರ್ಷ ತೀವ್ರ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳು ಬಾಧಿತವಾಗಿದ್ದು, ಸ್ಥಳೀಯ ಬಡ ಹಾಗೂ ಅಕುಶಲ ಕಾರ್ಮಿಕರಿಗೆ ಉದ್ಯೋಗ ದೊರಕದಂತಾಗಿ ನಗರಗಳಿಗೆ ಗುಳೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ವಿಬಿಜಿ ರಾಮ್ ಜಿ ಅಡಿಯಲ್ಲಿ ಉದ್ಯೋಗ ಕಲ್ಪಿಸಿ ಗುಳೆ ಹೋಗುವುದನ್ನು ತಡೆಯಲಾಗುತ್ತಿದೆ ಎಂದೂ ತಿಳಿಸಿದ್ದಾರೆ.

ಬರದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಗ್ರಾಮೀಣ ಜನರು ವಿಬಿಜಿ ರಾಮ್ ಜಿ ಉದ್ಯೋಗಕ್ಕೆ ಬೇಡಿಕೆಯಿದ್ದು, ಕಳೆದ ವರ್ಷಕ್ಕಿಂತ ಈ ಸಾಲಿನಲ್ಲಿ ಶೇ. 30.33ರಷ್ಟು ಹೆಚ್ಚುವರಿ ಮಾನವ ದಿನ ಸೃಜಿಸಲಾಗಿದೆ. ಹೀಗಾಗಿ ಹಾಲಿ ಇರುವ 125 ದಿನಗಳ ಕೆಲಸದ ಮಿತಿಗೆ 50 ಹೆಚ್ಚುವರಿ ದಿನ ಸೇರಿಸಿ 175 ದಿನ ಉದ್ಯೋಗ ನೀಡಲು ಅವಕಾಶ ನೀಡುವಂತೆ ಕೇಂದ್ರ ಸಚಿವರಿಗೆ ಬರೆದಿರುವ ಪತ್ರದಲ್ಲಿ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಈಗಾಗಲೇ 60:40ರ ಅನುಪಾತದಲ್ಲಿ ವಿಬಿಜಿ ರಾಮ್ ಜಿಯನ್ನು ರಾಜ್ಯಾದ್ಯಂತ ಅನುಷ್ಠಾನ ಮಾಡಿದೆ ಎಂದು ತಿಳಿಸಿರುವ ಸಚಿವರು, ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಬಡಜನರಿಗೆ, ಭೂ ರಹಿತ ಕೂಲಿ ಕಾರ್ಮಿಕರ ಸುಗಮ ಜೀವನೋಪಾಯಕ್ಕಾಗಿ 50 ದಿನ ಹೆಚ್ಚುವರಿ ಉದ್ಯೋಗವನ್ನು ನೀಡಲು ಅನುಮತಿಸುವಂತೆ ಕೋರಿದ್ದಾರೆ.

*2.83 ಕೋಟಿ ಮಾನವ ದಿನ ಸೃಜನೆ : *

ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನ್ರೇಗಾ) ಅಡಿಯಲ್ಲಿ ಕೇಂದ್ರ ಸರ್ಕಾರ ಪ್ರತಿಶತ 90ರಷ್ಟು ವೆಚ್ಚ ಭರಿಸುತ್ತಿತ್ತು. ರಾಜ್ಯ ಸರ್ಕಾರ ಕೇವಲ ಶೇ.10 ವೆಚ್ಚ ಭರಿಸುತ್ತಿತ್ತು. ಆದರೆ ವಿಬಿಜಿ ರಾಮ್ ಜಿ ಅಡಿ 60:40 ಅನುಪಾತ ಮಾಡಲಾಗಿದ್ದು, ರಾಜ್ಯಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುತ್ತಿದೆ. ಆದ್ದಾಗ್ಯೂ, ಗ್ರಾಮೀಣ ಬಡವರು, ದುರ್ಬಲರು, ವಂಚಿತರು, ಹಿಂದುಳಿದವರು, ಪರಿಶಿಷ್ಟ ಜಾತಿ, ಪಂಗಡದವರು, ಅಲ್ಪಸಂಖ್ಯಾತ ಭೂರಹಿತ ಕೂಲಿ ಕಾರ್ಮಿಕರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಯೋಜನೆ ಜಾರಿಗೆ ತಂದಿದ್ದು, ಕಳೆದ ಜುಲೈನಿಂದ ಇಲ್ಲಿಯವರೆಗೆ 2.83 ಕೋಟಿ ಮಾನವ ದಿನ ಸೃಜಿಸಿದೆ ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ.35ರಷ್ಟು ಹೆಚ್ಚಾಗಿದೆ.

ಈ ವರ್ಷ ಜುಲೈನಿಂದ ಮಾರ್ಜ್ 2027ರವರೆಗಿನ 9 ತಿಂಗಳ ಅವಧಿಗೆ ವಿಬಿಜಿ ರಾಮ್ ಜಿ ಅನುಷ್ಠಾನ ಕೇಂದ್ರ ಸರ್ಕಾರ 5657 ಕೋಟಿ ರೂ. ಭರಿಸುತ್ತಿದ್ದರೆ, ರಾಜ್ಯ ಸರ್ಕಾರ 3,771 ಕೋಟಿ ರೂ. ವೆಚ್ಚ ಮಾಡುತ್ತಿದೆ. ಪ್ರಸ್ತುತ ರಾಜ್ಯ ಸರ್ಕಾರ 1167 ಕೋಟಿ ರೂ. ಹಾಗೂ ಕೇಂದ್ರ ಸರ್ಕಾರ 1751 ಕೋಟಿ ಸೇರಿ ಒಟ್ಟು 2918 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಈ ಪೈಕಿ ಈವರೆಗೆ ಅಕುಶಲ ಕಾರ್ಮಿಕರಿಗೆ 803 ಕೋಟಿ ರೂ. ವೇತನ ಪಾವತಿ ಮಾಡಲಾಗಿದೆ.

2053 ಕೋಟಿ ರೂ.ಗಳನ್ನು ಈಗಾಗಲೇ ರಾಜ್ಯದ 5927 ಗ್ರಾಮ ಪಂಚಾಯತಿಗಳಿಗೆ ಹಾಗೂ ಅನುಷ್ಠಾನ ಇಲಾಖೆಗಳಿಗೆ 86 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.

Comments

Leave a Comment

Prev Post ನಿಮ್ಮ ಸಮಸ್ಯೆ ಬಗ್ಗೆ ಅರಿವಿದೆ, ಪರಿಹಾರ ನೀಡುತ್ತೇವೆ, ಪ್ರತಿಭಟನೆ ಕೈಬಿಡಿ: ಸಿಎಂ ಡಿ ಕೆ ಶಿವಕುಮಾರ್ ಆಶಾ ಕಾರ್ಯಕರ್ತೆಯರಿಗೆ ಸಿಎಂ ಮತ್ತೆ ಮನವಿ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News