ಉತ್ತರ ಕರ್ನಾಟಕ ಕಲೆ ಸಂಸ್ಕೃತಿ ಉಳಿಸಿ ಬೆಳೆಸುವ ಉತ್ಸವ: ಶಿವಕುಮಾರ ಮೇಟಿ
ನವೆಂಬರ್ 29 ರಂದು ಅರಮನೆ ಮೈದಾನದಲ್ಲಿ ಉತ್ತರ ಕರ್ನಾಟಕ ಉತ್ಸವ
ಉತ್ತರ ಕರ್ನಾಟಕ ಕಲೆ ಸಂಸ್ಕೃತಿ ಉಳಿಸಿ ಬೆಳೆಸುವ ಉತ್ಸವ: ಶಿವಕುಮಾರ ಮೇಟಿ
ಬೆಂಗಳೂರು; ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ವತಿಯಿಂದ ನವೆಂಬರ್ 29 ರಂದು ಭಾನುವಾರ ಬೆಂಗಳೂರಿನ ಅರಮನೆ ಮೈದಾನದ ಶೀಶ್ ಮಹಲ್ ನಲ್ಲಿ ಉತ್ತರ ಕರ್ನಾಟಕದ ಸಂಸ್ಖತಿ ಪರಂಪರೆಯನ್ನು ಉಳಿಸಿ ಬೆಳೆಸುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಉತ್ಸವ ಆಯೋಜಿಸಲಾಗಿದೆ ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ್ ಆರ್. ಮೇಟಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಜನರು ಬೆಂಗಳೂರಿಗೆ ಉದ್ಯೋಗ ಹಾಗೂ ಕೂಲಿಗಾಗಿ ಬಂದು ವಿವಿಧ ಬಡಾವಣೆಗಳಲ್ಲಿ ವಾಸವಾಗಿದ್ದು, ಸುಮಾರು 25 ಲಕ್ಷಕ್ಕೂ ಹೆಚ್ಚು ಜನರು ಬೆಂಗಳೂರಿನಲ್ಲಿ ಉತ್ತರ ಕರ್ನಾಟದ ಭಾಗದವರು ಇದ್ದಾರೆ.
ಎಂಭತ್ತರ ದಶಕದಿಂದಲೂ ಬೆಂಗಳೂರಿನಲ್ಲಿರುವ ಕೇಂದ್ರ ಕೈಗಾರಿಕಾ ಸಂಸ್ಥೆಗಳಾದ ಬಿಇಎಲ್, ಬಿಇಎಂಎಲ್, ಬಿಎಚ್ ಇಎಲ್ ಸೇರಿದಂತೆ ಅನೇಕ ಕಾರ್ಖಾನೆಗಳಲ್ಲಿ ಉತ್ತರ ಕರ್ನಾಟಕ ಸಂಘಗಳನ್ನು ಕಟ್ಟಿಕೊಂಡು ರಾಜಧಾನಿ ಬೆಂಗಳೂರಿನ ರಾಜಾಜಿನಗರ, ವಿಜಯನಗರ, ಕೆಂಗೇರಿ, ದಾಸರಹಳ್ಳಿ, ಯಲಹಂಕ, ಮಹದೇವಪುರ ಸೇರಿದಂತೆ ಎಲ್ಲ ಪ್ರದೇಶಗಳಲ್ಲಿ ವಾಸವಾಗಿರುವ ಉತ್ತರ ಕರ್ನಾಟಕದ ಜನರು
ಉತ್ತರ ಕರ್ನಾಟಕ ಭಾಗದ ಸಂಸ್ಕೃತಿ ಮತ್ತು ಕಲೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಸುಮಾರು 25 ಕ್ಕೂ ಹೆಚ್ಚು ಸಂಘಗಳನ್ನು ಕಟ್ಟಿಕೊಂಡು, ಎಲ್ಲ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳು ಸೇರಿಕೊಂಡು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಕಟ್ಟಿಕೊಂಡಿದ್ದೇವೆ.
ಉತ್ತರ ಕರ್ನಾಟಕ ಭಾಗದ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ಹಬ್ಬಗಳಾದ ರೊಟ್ಟಿ ಪಂಚಮಿ, ರಂಗ ಪಂಚಮಿ, ಬನ್ನಿ ಬಂಗಾರ, ಸಂಕ್ರಾತಿ, ಹೋಳಿ ಸೇರಿದಂತೆ ಹಬ್ಬಗಳನ್ನು ಹಾಗೂ ಉತ್ತರ ಕರ್ನಾಟಕ ಉತ್ಸವವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಆಚರಿಸುತ್ತ ರಾಜಧಾನಿಯಲ್ಲಿ ಆ ಭಾಗದ ಸಂಸ್ಕೃತಿ ಹಾಗೂ ಸಂಪ್ರದಾಯ ಪರಿಚಯಿಸುವ ಮೂಲಕ ಮುಂದಿನ ಪೀಳಿಗೆಗೆ ಜೀವಂತವಾಗಿಡುವ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಪ್ರಸ್ತುತ ಉತ್ತರ ಕರ್ನಾಟಕ ಉತ್ಸವ 2026 ಕಾರ್ಯಕ್ರಮವನ್ನು ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂಬರ್ 7, ಶೀಶ್ ಮಹಲ್ ನಲ್ಲಿ ನವೆಂಬರ್ 29 ರಂದು ಭಾನುವಾರ ಉತ್ತರ ಕರ್ನಾಟಕ ಉತ್ಸವ ಆಯೋಜಿಸಲಾಗಿದೆ. ಇದೊಂದು ಉತ್ತರ ಕರ್ನಾಟಕ ಭಾಗದ ಸಂಸ್ಕೃತಿಯನ್ನು ಬಿಂಬಿಸುವ ಉತ್ಸವವಾಗಿದ್ದು ಈ ಉತ್ಸವಕ್ಕೆ ಉತ್ತರ ಕರ್ನಾಟಕ ಭಾಗದಿಂದ ಮೂಲ ಜಾನಪದ ಸಾಂಸ್ಕೃತಿಕ ಕಲಾ ತಂಡಗಳನ್ನು ಕರೆಯಿಸಿ ಇಲ್ಲಿ ಸಾವಿರಾರು ಜನರ ಎದುರು ಪ್ರದರ್ಶನ ಮಾಡಿಸಲಾಗುತ್ತದೆ. ಕಾರ್ಯಕ್ರಮದ ಉದ್ಘಾಟಕರಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ. ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ್ ಆರ್. ಮೇಟಿ, ಮಹಾಸಂಸ್ಥೆಯ ಗೌರವ ಅಧ್ಯಕ್ಷರಾದ
ಶಂಕರ್ ಬಿದರಿಯವರ ಘನ ಉಪಸ್ಥಿತಿ ಇರಲಿದೆ.
ಮುಖ್ಯ ಅತಿಥಿಗಳಾಗಿ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ, ಸಚಿವರಾದ ಲಕ್ಷ್ಮಣ ಸವದಿ, ಶಿವರಾಜ್ ತಂಗಡಗಿ, ಎಸ್. ಎಸ್ ಮಲ್ಲಿಕಾರ್ಜುನ್ , ಡಾ. ಅಜಯ್ ಸಿಂಗ್, ವಿಜಯಾನಂದ ಕಾಶಪ್ಪನವರ್, ಸಂಸದರಾದ ಗೋವಿಂದ ಕಾರಜೋಳ, ಪಿ.ಸಿ. ಮೋಹನ್,
ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ. ಅಶೋಕ ಪಟ್ಟಣ, ಎನ್.ಎಚ್. ಕೋನರೆಡ್ಡಿ ಆಗಮಿಸಲಿದ್ದಾರೆ.
ಸಂಜೆ ಸಮಾರೋಪ ಕಾರ್ಯಕ್ರಮವನ್ನು ಕೇಂದ್ರ ಕೈಗಾರಿಕೆ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಅಧ್ಯಕ್ಷರಾದ ಬಿ. ಕೆ. ಹರಿಪ್ರಸಾದ, ಬಿಜೆಪಿ, ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ
ಅತಿಥಿಗಳಾಗಿ ಶಾಸಕರಾದ ಎಚ್. ಕೆ. ಪಾಟೀಲ್, ಶರಣಬಸಪ್ಪ ದರ್ಶನಾಪುರ, ಎಸ್. ಆರ್. ವಿಶ್ವನಾಥ, ಕೆ. ಗೋಪಾಲಯ್ಯ ಶಾಸಕರು, ಎಸ್. ಸುರೇಶಕುಮಾರ್, ಅಪ್ಪಾಜಿ ನಾಡಗೌಡ, ಪ್ರಸಾದ್ ಅಬ್ಬಯ್ಯ, ಬಾಬಾಸಾಹೇಬ್ ಪಾಟೀಲ್, ಎಸ್.ಮುನಿರಾಜು, ಸಂಸದ ಪಿ.ಸಿ ಮೋಹನ್ ಹಾಗೂ ನಿಗಮ ಮಂಡಳಿ ಅಧ್ಯಕ್ಷರು, ಅಧಿಕಾರಿಗಳು, ಉದ್ಯಮಿಗಳು ಭಾಗವಹಿಸಲಿದ್ದಾರೆ. ಎಂದು ಹೇಳಿದರು.
ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ ಮಾತನಾಡಿ, ಉತ್ತರ ಕರ್ನಾಟಕದಿಂದ ಬಂದು ಬೆಂಗಳೂರಿನಲ್ಲಿ ನಮ್ಮ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸ ಮಾಡಿರುವ ಸಾಧಕರನ್ನು ಸನ್ಮಾನಿಸಲಾಗುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಉತ್ತರ ಕರ್ನಾಟಕ ಭಾಗದ ಜಾನಪದ ಕಲೆಗಳಾದ ಜಗ್ಗಲಗಿ, ಮುಳ್ಳು ಹೆಜ್ಜೆ ಮೇಳ, ಕರಡಿ ಮಜಲು, ಮಲ್ಲಕಂಬ, ಡೊಳ್ಳು ಕುಣಿತ, ಗೊಂದಲಿಗರ ಪದ, ಜಾನಪದ ಹಾಡು ನಡೆಯಲಿವೆ. ವಿಶೇಷವಾಗಿ ಉತ್ತರ ಕರ್ನಾಟಕದ ಪ್ರಸಿದ್ದ ಇಳಕಲ್ ಸೀರೆಯ ಫ್ಯಾಷನ್ ಶೋ ನಡೆಯಲಿದೆ. ಅಲ್ಲದೇ ಕಲ್ಯಾಣ ಕ್ರಾಂತಿ ನಾಟಕ ಪ್ರದರ್ಶನವಾಗಲಿದೆ ಎಂದು ಹೇಳಿದರು
ಹಿರಿಯ ಉಪಾಧ್ಯಕ್ಷ ಬಸವರಾಜ ಬೀಳೂರು ಮಾತನಾಡಿ, ಉತ್ಸವದಲ್ಲಿ ಉತ್ತರ ಕರ್ನಾಟಕ ಭಾಗದ ತಿಂಡಿ ತಿನಿಸುಗಳು, ಇಳಕಲ್ ಸೀರೆ ಸೇರಿದಂತೆ ಉಡುಗಡೆ ತೊಡುಗೆಯ ಮಾರಾಟಕ್ಕೆ ಸ್ಟಾಲ್ ಹಾಕಲಾಗಿದೆ. ಅಲ್ಲದೆ ಉತ್ತರ ಕರ್ನಾಟಕ ಭಾಗದ ಆಹಾರ ಪದಾರ್ಥಗಳ ಪ್ರದರ್ಶನ ಏರ್ಪಡಿಸಲಾಗಿದೆ. ಉತ್ಸವದ ಅಂಗವಾಗಿ ರಂಗೋಲಿ ಆನ್ ಲೈನ್ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಉತ್ತರ ಕರ್ನಾಟಕ ಶೈಲಿಯಲ್ಲಿ ಉಡುಪು ಹಾಕಿಕೊಂಡು ಬರುವವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಈ ಮಹತ್ವದ ಉತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಉತ್ತರ ಕರ್ನಾಟಕ ಭಾಗದ ಕಲೆ, ಸಂಸ್ಕೃತಿ ಸಂಪ್ರದಾಯ ಜೀವಂತ ಉಳಿಸುವುದರ ಜೊತೆಗೆ ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯಕ್ರಮ ಯಶಸ್ವಿಗೊಳಿಸಲು ವಿನಂತಿಸಿಕೊಳ್ಳುತ್ತೇವೆ ಎಂದರು
ಪತ್ರಿಕಾಗೋಷ್ಠಿಯಲ್ಲಿ ಮಹಾಸಂಸ್ಥೆಯ ಕಾರ್ಯದರ್ಶಿ ಬಸಯ್ಯ ನಂದಿಕೋಲ್, ಸಂಘಟನಾ ಸಹ ಕಾರ್ಯದರ್ಶಿ ಶಾಂತೇಶ ಮಠ ಸೇರಿದಂತೆ ಹಲವು ಪದಾಧಿಕಾರಿಗಳು ಹಾಜರಿದ್ದರು.
ಶಂಕರ ಪಾಗೋಜಿ. ಪ್ರಧಾನ ಕಾರ್ಯದರ್ಶಿ
ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ






Comments
Leave a Comment