PRABHAVAA.COM

ಕಲ್ಯಾಣ ಕರ್ನಾಟಕದಲ್ಲಿ ಶಿರಪುರ ಮಾದರಿಯಲ್ಲಿ ₹200 ಕೋಟಿ ವೆಚ್ಚದ ಜಲ ಸಂರಕ್ಷಣಾ ಕಾಮಗಾರಿಗಳು: ಡಾ. ಅಜಯ್ ಧರ್ಮಸಿಂಗ್

Bengaluru Urban:

Font size:

- ಸರಣಿ ಚೆಕ್‌ಡ್ಯಾಂಗಳ ನಿರ್ಮಾಣ, ಹಳ್ಳಗಳ ಪುನಶ್ಚೇತನ ಹಾಗೂ ಕೆರೆಗಳ ಅಭಿವೃದ್ಧಿ

ಬೆಂಗಳೂರು ನವೆಂಬರ್ 27: ಕಲ್ಯಾಣ ಕರ್ನಾಟಕ ಭಾಗದಲ್ಲಿ ಲಭ್ಯವಿರುವ ಜಲಸಂಪನ್ಮೂಲವನ್ನು ಸಮರ್ಥವಾಗಿ ನಿರ್ವಹಿಸುವುದು, ಮಳೆನೀರನ್ನು ಸಂರಕ್ಷಿಸುವುದು ಹಾಗೂ ಅಂತರ್ಜಲ ಮಟ್ಟವನ್ನು ವೃದ್ಧಿಸುವ ಉದ್ದೇಶದಿಂದ ಶಿರಪುರ ಮಾದರಿಯಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಅನುದಾನದ ಅಡಿಯಲ್ಲಿ ₹200 ಕೋಟಿ ವೆಚ್ಚದ ಜಲ ಸಂರಕ್ಷಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರ್ಮಸಿಂಗ್ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಶಿರಪುರ ಮಾದರಿಯಲ್ಲಿ ಸರಣಿ ಚೆಕ್‌ಡ್ಯಾಂಗಳ ನಿರ್ಮಾಣ, ಹಳ್ಳ ಮತ್ತು ನಾಲೆಗಳ ಆಳ ಹಾಗೂ ಅಗಲ ಹೆಚ್ಚಿಸುವುದು, ಅಂತರ್ಜಲ ಮರುಪೂರಣ ಘಟಕಗಳ ನಿರ್ಮಾಣ ಮತ್ತು ಕೆರೆಗಳ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.

ಮಳೆನೀರು ವ್ಯರ್ಥವಾಗಿ ಹರಿದುಹೋಗುವುದನ್ನು ತಡೆದು, ಸ್ಥಳೀಯವಾಗಿಯೇ ಸಂಗ್ರಹಿಸಿ ಭೂಮಿಯಲ್ಲಿ ಇಂಗುವಂತೆ ಮಾಡುವುದು ಶಿರಪುರ ಮಾದರಿಯ ಪ್ರಮುಖ ಉದ್ದೇಶವಾಗಿದೆ. ಇದರಿಂದ ಅಂತರ್ಜಲ ಮಟ್ಟ ವೃದ್ಧಿಯಾಗುವುದರ ಜೊತೆಗೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಕೊಳವೆಬಾವಿಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಈ ಕಾಮಗಾರಿಗಳು ಸಹಕಾರಿಯಾಗಲಿವೆ.

ಜಿಲ್ಲಾವಾರು ಅನುದಾನ
ಕಲಬುರಗಿ ಜಿಲ್ಲೆಗೆ ₹49.20 ಕೋಟಿ, ರಾಯಚೂರು ಜಿಲ್ಲೆಗೆ ₹ 38.80 ಕೋಟಿ, ಬಳ್ಳಾರಿ ಜಿಲ್ಲೆಗೆ ₹35 ಕೋಟಿ, ಯಾದಗಿರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಿಗೆ ತಲಾ ₹21 ಕೋಟಿ ಮತ್ತು ಬೀದರ್ ಜಿಲ್ಲೆಗೆ ₹14 ಕೋಟಿ ಮೀಸಲಿಡಲಾಗಿದೆ. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ತಲಾ ₹100 ಕೋಟಿ ಅನುದಾನ ನೀಡಿದ್ದು, ಒಟ್ಟಾರೆಯಾಗಿ ₹200 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೈಗೊಳ್ಳಾಗುತ್ತಿರುವ ಕಾಮಗಾರಿಗಳನ್ನು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.

*“ಶಿರಪುರ ಮಾದರಿಯಲ್ಲಿ ಹಳ್ಳ ಮತ್ತು ನಾಲೆಗಳಿಗೆ ಅಡ್ಡಲಾಗಿ ಸರಣಿ ಚೆಕ್‌ಡ್ಯಾಂಗಳನ್ನು ನಿರ್ಮಿಸುವುದರಿಂದ ಮಳೆನೀರು ವ್ಯರ್ಥವಾಗಿ ಹರಿದುಹೋಗುವುದನ್ನು ತಡೆದು, ಅಂತರ್ಜಲ ಮರುಪೂರಣಕ್ಕೆ ಹೆಚ್ಚಿನ ಅವಕಾಶ ಕಲ್ಪಿಸಬಹುದು. ಆಯಾ ಪ್ರದೇಶದ ಭೌಗೋಳಿಕ ಪರಿಸ್ಥಿತಿ, ಮಳೆಯ ಪ್ರಮಾಣ ಹಾಗೂ ನೀರಿನ ಲಭ್ಯತೆಯನ್ನು ಪರಿಗಣಿಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಜಲಸಂರಕ್ಷಣೆಯಲ್ಲಿ ಸುಸ್ಥಿರ ಫಲಿತಾಂಶ ಸಾಧಿಸುವುದು ಇಲಾಖೆಯ ಉದ್ದೇಶವಾಗಿದೆ,” ಎಂದು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ರಾಜೇಶ್ ಅಮ್ಮಿನಭಾವಿ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಜಲ ಸಂರಕ್ಷಣಾ ಮೂಲಸೌಕರ್ಯವನ್ನು ಬಲಪಡಿಸುವ ಮೂಲಕ ಕೃಷಿ ಅಭಿವೃದ್ಧಿ, ಅಂತರ್ಜಲ ವೃದ್ಧಿ ಹಾಗೂ ಗ್ರಾಮೀಣ ಪ್ರದೇಶಗಳ ದೀರ್ಘಕಾಲೀನ ಜಲ ಭದ್ರತೆಗೆ ವಿಶೇಷ ಆದ್ಯತೆ ನೀಡಲಾಗಿದೆ.
---
(ಬಾಕ್ಸ್)
“ಕಲ್ಯಾಣ ಕರ್ನಾಟಕದಲ್ಲಿ ಬೀಳುವ ಮಳೆಯ ಪ್ರತಿಯೊಂದು ಹನಿಯನ್ನೂ ಸಮರ್ಥವಾಗಿ ಬಳಸಿಕೊಳ್ಳಬೇಕು. ಕೇವಲ ನೀರನ್ನು ಸಂಗ್ರಹಿಸುವುದಷ್ಟೇ ನಮ್ಮ ಗುರಿಯಲ್ಲ; ಅಂತರ್ಜಲವನ್ನು ಪುನಶ್ಚೇತನಗೊಳಿಸಿ ರೈತರಿಗೆ ದೀರ್ಘಕಾಲೀನ ಜಲ ಭದ್ರತೆಯನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ.”

– ಡಾ. ಅಜಯ್ ಧರ್ಮಸಿಂಗ್ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು.

Comments

Leave a Comment

Prev Post ಚುಂಚನಗಿರಿ ಮಠದ ಶಿಕ್ಷಣ, ಆರೋಗ್ಯ ಸೇವೆ ಉತ್ತಮ ಸಮಾಜ ನಿರ್ಮಾಣಕ್ಕೆ ಅಡಿಪಾಯ: ಸಿಎಂ ಡಿ ಕೆ ಶಿವಕುಮಾರ್
Next Post ಸಮಾಜದಿಂದ ಪಡೆದ ಸಂಪತ್ತನ್ನು ಸಮಾಜದ ಕಲ್ಯಾಣಕ್ಕೆ ಮರಳಿಸುವುದೇ ನೈಜ ಸಿಎಸ್‌ಆರ್: ರಾಜ್ಯಪಾಲರಾದ ಡಾ. ಸುಧಾ ಯಾದವ್

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News