ಸಚಿವಾಲಯದ ಜಂಟಿ ಮತ್ತು ಉಪ ಕಾರ್ಯದರ್ಶಿಗಳಿಗೆ ಸ್ಥಳನಿಯುಕ್ತಿ

Bengaluru Urban:

Font size:

ಸಚಿವಾಲಯದ ಜಂಟಿ ಮತ್ತು ಉಪ ಕಾರ್ಯದರ್ಶಿಗಳಿಗೆ ಸ್ಥಳನಿಯುಕ್ತಿ

ಬೆಂಗಳೂರು, ಏ. 10- ಕರ್ನಾಟಕ ಸರ್ಕಾರವು ಆಡಳಿತಾತ್ಮಕ ಹಿತದೃಷ್ಟಿಯಿಂದ ಸಚಿವಾಲಯದ ಸೇವೆಗೆ ಸೇರಿದ ಜಂಟಿ ಮತ್ತು ಉಪ ಕಾರ್ಯದರ್ಶಿ ವೃಂದದ ಅಧಿಕಾರಿಗಳ ಚಲನವಲನ ಹಾಗೂ ಸ್ಥಳನಿಯುಕ್ತಿಗೆ ಸಂಬಂಧಿಸಿದ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮಾನ್ಯವಾಗಲಿದೆ.

1. ಶ್ರೀ ನಾಗರಾಜ ಆರ್. – ಪ್ರಸ್ತುತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ. ಇವರನ್ನು ಕಾರ್ಮಿಕ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
2. ಶ್ರೀಮತಿ ಪುಷ್ಪ ಎನ್. – ಪ್ರವಾಸೋದ್ಯಮ ಇಲಾಖೆಯ ಜಂಟಿ ಕಾರ್ಯದರ್ಶಿ. ಇವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ಚಲನವಲನಗೊಳಿಸಲಾಗಿದೆ.
3. ಶ್ರೀಮತಿ ರಾಜ್ಯಶ್ರೀ ವಿ.ಟಿ. – ಕಾರ್ಮಿಕ ಇಲಾಖೆಯ ಉಪ ಕಾರ್ಯದರ್ಶಿ. ಇವರನ್ನು ಉನ್ನತ ಶಿಕ್ಷಣ ಇಲಾಖೆಯ (ವಿಶ್ವವಿದ್ಯಾಲಯಗಳು ಮತ್ತು ಸಮನ್ವಯ) ಉಪ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
4. ಶ್ರೀ ಶಶಿಧರ ಜಿ.– ಪ್ರಸ್ತುತ ಸ್ಥಳ ನಿರೀಕ್ಷಣೆಯಲ್ಲಿರುವ ಉಪ ಕಾರ್ಯದರ್ಶಿ. ಇವರನ್ನು ಪ್ರವಾಸೋದ್ಯಮ ಇಲಾಖೆಯ ಉಪ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
5. ಶ್ರೀಮತಿ ಅಕ್ಕಮಹಾದೇವಿ ವಿ. – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿ. ಇವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿಯಾಗಿ ಚಲನವಲನಗೊಳಿಸಲಾಗಿದೆ.
6. ಶ್ರೀ ಪುಟ್ಟರಾಮು ಆರ್. – ಪ್ರಸ್ತುತ ಸ್ಥಳ ನಿರೀಕ್ಷಣೆಯಲ್ಲಿರುವ ಉಪ ಕಾರ್ಯದರ್ಶಿ. ಇವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
7. ಶ್ರೀ ಮುರಳೀಧರ ಎಸ್. ತಳಿಕೇರಿ – ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಉಪ ಕಾರ್ಯದರ್ಶಿ (ಪ್ರಸ್ತುತ ಸ್ಥಳ ನಿರೀಕ್ಷಣೆಯಲ್ಲಿ). ಇವರನ್ನು ಸಮನ್ವಯ ಕೋಶದ ಉಪ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

Comments

Krishnappa M

April 10, 2026, 6:56 p.m.

👍

Leave a Comment

Prev Post ಸರ್ಕಾರಿ ಆಸ್ಪತ್ರೆಗಳಿಗೆ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಕಾರ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಸರ್ಕಾರದ ಮಹತ್ವದ ಹೆಜ್ಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News