ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ; ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ಭವಿಷ್ಯ ಪಕ್ಷದಲ್ಲಿದೆಯೇ ಹೊರತು ಮಾಧ್ಯಮಗಳ ಮುಂದೆ ಅಲ್ಲ

:

Font size:

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ; ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ಭವಿಷ್ಯ ಪಕ್ಷದಲ್ಲಿದೆಯೇ ಹೊರತು ಮಾಧ್ಯಮಗಳ ಮುಂದೆ ಅಲ್ಲ

ಬೆಂಗಳೂರು, ಏ.13:

"ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು" ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

25 ಜನ ಶಾಸಕರು ದೆಹಲಿಗೆ ತೆರಳಿರುವ ಬಗ್ಗೆ ಕೇಳಿದಾಗ, "ಪಕ್ಷದ ಶಿಸ್ತನ್ನು ಎಲ್ಲಾ ಶಾಸಕರು ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ ಪಕ್ಷದ ಗೌರವವನ್ನು ಹಾಳು ಮಾಡಬಾರದು. ಮುಖ್ಯಮಂತ್ರಿಗಳೂ ಸಹ ಈಗಾಗಲೇ ಈ ವಿಚಾರದ ಬಗ್ಗೆ ಹೇಳಿದ್ದಾರೆ. ಮುಂದಕ್ಕೆ ಎಲ್ಲರ ಭವಿಷ್ಯ ಪಕ್ಷದಲ್ಲಿದೆಯೇ ಹೊರತು ಮಾಧ್ಯಮಗಳಲ್ಲಿ ಇಲ್ಲ" ಎಂದರು.

ಶಾಸಕರು ದೆಹಲಿಗೆ ತೆರಳುವ ಮುಂಚೆ ನಿಮ್ಮ ಬಳಿ ಚರ್ಚೆ ಮಾಡಿದ್ದಾರೆಯೇ ಎಂದು ಕೇಳಿದಾಗ, "ಒಂದಷ್ಟು ಜನ ಮಾಡಿದ್ದಾರೆ. ಹೈಕಮಾಂಡ್ ಬಳಿ ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ. ಮೊದಲ ಹಾಗೂ ಎರಡನೇ ಬಾರಿ ಗೆದ್ದಿರುವವರೂ ಮಂತ್ರಿಗಳಾಗಬಹುದು. ಈ ಹಿಂದೆ ಈ ರೀತಿ ನಡೆದಿದೆ. ಆದರೆ ಇದು ಸಮಯವಲ್ಲ. ಇನ್ನೂ ಚುನಾವಣೆಗಳು ನಡೆಯುತ್ತಿವೆ. ಒಂದಷ್ಟು ಜನ ತಮಿಳುನಾಡಿಗೆ ತೆರಳಿದ್ದಾರೆ. ಮೊದಲು ಚುನಾವಣೆ ಆಗಲಿ, ಆನಂತರ ಇದರ ಬಗ್ಗೆ ಯೋಚಿಸೋಣ" ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಬಗ್ಗೆ ಕೇಳಿದಾಗ, "ಪಕ್ಷದಿಂದ ತಮಿಳುನಾಡಿಗೆ ತೆರಳುವಂತೆ ಸೂಚನೆ ನೀಡಿದ್ದರು. ಅಲ್ಲಿಗೆ ಹೋಗಿ ಬಂದಿದ್ದೇನೆ. ಮತ್ತೆ ತೆರಳಬೇಕಾಗಿದೆ. ಆ ಬಗ್ಗೆ ಎಐಸಿಸಿ ಅಧ್ಯಕ್ಷರಿಗೆ ವರದಿ ನೀಡಬೇಕಿತ್ತು. ಭೇಟಿ ಮಾಡಿ ವರದಿ ಮಾಡಿದ್ದೇನೆ" ಎಂದು ತಿಳಿಸಿದರು.

Comments

Leave a Comment

Prev Post ಕರ್ನಾಟಕ ವಿವಾಹದ ಸ್ವಾತಂತ್ರ್ಯ ಮತ್ತು ಗೌರವ-ಪರಂಪರೆಯ ಹೆಸರಿನಲ್ಲಿ ನಡೆಯುವ ಅಪರಾಧಗಳ ತಡೆ ಕಾಯ್ದೆ ಜಾರಿ;ಗೆಜೆಟ್ ಪ್ರಕಟ
Next Post 2026-27ನೇ ಸಾಲಿನ ವರ್ಗಾವಣೆ ಮಾರ್ಗಸೂಚಿ ಪ್ರಕಟ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News