ಸಮಾಜಿಕ ಶಕ್ತಿ ಆರ್ಥಿಕ ಶಕ್ತಿ ಎಲ್ಲರಿಗೂ ದೊರಕಿದಾಗ ಮಾತ್ರ ಸ್ವಾವಲಂಬನೆ ಸಾಧ್ಯ : ಮುಖ್ಯಮಂತ್ರಿ ‌ಸಿದ್ದರಾಮಯ್ಯ

Bengaluru Urban:

Font size:

ಸಮಾಜಿಕ ಶಕ್ತಿ ಆರ್ಥಿಕ ಶಕ್ತಿ ಎಲ್ಲರಿಗೂ ದೊರಕಿದಾಗ ಮಾತ್ರ ಸ್ವಾವಲಂಬನೆ ಸಾಧ್ಯ : ಮುಖ್ಯಮಂತ್ರಿ ‌ಸಿದ್ದರಾಮಯ್ಯ

ಬೆಂಗಳೂರು, ಏ. 4 -

ಸಮಾಜಿಕ ಶಕ್ತಿ ಆರ್ಥಿಕ ಶಕ್ತಿ ಎಲ್ಲರಿಗೂ ದೊರಕಿದಾಗ ಮಾತ್ರ ಸ್ವಾವಲಂಬನೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಹಾಗೂ ಡಾ. ಬಿ ಆರ್ ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಾ, ಅಂಬೇಡ್ಕರ್ ಅವರು ಹೇಳಿರುವಂತೆ ಎಲ್ಲ ಸಂಕೋಲೆಗಳಿಂದ ವಿಮುಕ್ತರಾಗಲು ಶಿಕ್ಷಣ ಒಂದೇ ಪ್ರಬಲ ಅಸ್ತ್ರ ಎಂದು ತಿಳಿಸಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಹೇಳಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು, "ಜಾತಿ ವ್ಯವಸ್ಥೆ ಇರುವವರೆಗೂ ಅಸ್ಪೃಶ್ಯತೆ ಇರುತ್ತದೆ , ಸಮಾಜಿಕ , ಆರ್ಥಿಕ ಅಸಮಾನತೆ ಇರುವವರೆಗೆ ಜಾತೀಯತೆ ಇರಲಿದೆ" ಎಂದು ಸ್ಪಷ್ಟವಾಗಿ ಹೇಳಿದ್ದರು. ಅವರು, ಎಲ್ಲಾ ದಮನಿತರ, ಪರಿಶಿಷ್ಟ ವರ್ಗಗಳ, ಶೋಷಿತರ, ಅವಕಾಶ ವಂಚಿತ ಜನರ ಪರವಾಗಿ ಹೋರಾಟವನ್ನು ತಮ್ಮ ಜೀವನದುದ್ದಕ್ಕೂ ಮಾಡಿದ್ದರು. ಕೇವಲ ದಲಿತರ ನಾಯಕರಾಗಿರದೆ ಅವಕಾಶ ವಂಚಿತರ, ದೌರ್ಜನ್ಯಕ್ಕೆ ಒಳಗಾದ ಎಲ್ಲರ ಪರವಾಗಿ ಹೋರಾಟ ಮಾಡಿದ್ದರು ಎಂದರು.

ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನದ ಮೂಲಕ ಎಲ್ಲಾ ಭಾರತೀಯರಿಗೆ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಆದ್ದರಿಂದಲೇ ದೇಶದ ಸಂವಿಧಾನವನ್ನು ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ ಎಂದರು.

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗದೆ ಇರುವುದು ನೋವಿನ ಸಂಗತಿ ಎಂದ ಮುಖ್ಯಮಂತ್ರಿಗಳು, ಈ ಸಮಾಜವು ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಯಿಂದ ಕೂಡಿದ್ದು, ಇವುಗಳನ್ನು ಹೋಗಲಾಡಿಸದಿದ್ದರೆ ದೇಶಕ್ಕೆ ಸ್ವಾತಂತ್ರ ಬಂದಿರುವುದು ಯಶಸ್ವಿಯಾಗಲಾರದು ಎಂದರು.

ಅಂಬೇಡ್ಕರ್ ವಿದ್ವಾಂಸರಾಗಿದ್ದರೂ ದಮನಿತರ ಪರವಾಗಿ ಹೋರಾಡಿದರಲ್ಲದೆ, ಹಿಂದೂ ಧರ್ಮದ ಸುಧಾರಣೆಗಾಗಿ ಬಹಳ ಪ್ರಯತ್ನ ಮಾಡಿದರು. ಆದರೆ ಕಡೆಗೆ ಅದು ಕೈಗೂಡದೆ ಹಿಂದೂ ಧರ್ಮವನ್ನು ತ್ಯಜಿಸಿದರು. ಅಸಮಾನತೆಗೆ ಕಾರಣವಾದ ಮನುವಾದವನ್ನು ತಿರಸ್ಕರಿಸಿದ್ದರು ಎಂದರು.

ಅಂಬೇಡ್ಕರ್ ಅವರು ವಿದ್ಯಾವಂತರಾಗದೆ ಹೋಗಿದ್ದರೆ, ಅವರಲ್ಲಿ ಹೋರಾಟದ ಮನೋಭಾವ ಇರದೇ ಹೋಗಿದ್ದರೆ ಇಂಥ ಸಂವಿಧಾನ ಸಿಗಲು ನಮಗೆ ಸಾಧ್ಯವಿರಲಿಲ್ಲ. ಅದಕ್ಕಾಗಿಯೇ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಅಂಬೇಡ್ಕರ್, ರಾಮ್ ಮನೋಹರ್ ಲೋಹಿಯಾ, ಜವಾಹರ್ ಲಾಲ್ ನೆಹರೂ ಅವರು ಪಡೆದಂತಹ ಶಿಕ್ಷಣ ಪಡೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ, ಮಾನವೀಯತೆಯಿಂದ ಕೂಡಿರುವ ಶಿಕ್ಷಣ ನಮಗೆ ಸಿಗಬೇಕು. ಸಾಮಜಿಕ ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡಿದ್ದರಿಂದಲೇ ಇಂಥ ಸಂವಿಧಾನ ನೀಡಲು ಅಂಬೇಡ್ಕರ್ ಅವರಿಗೆ ಸಾಧ್ಯವಾಯಿತು ಎಂದು ಮುಖ್ಯಮಂತ್ರಿಗಳು ಹೇಳಿದರು.

ವೈಜ್ಞಾನಿಕ ಶಿಕ್ಷಣ ದೊರೆಯದಿದ್ದರೆ ಸಮ ಸಮಾಜದ ನಿರ್ಮಾಣ ಅಸಾಧ್ಯ. ಸರ್ಕಾರದ ಗ್ಯಾರಂಟಿ ಯೋಜನೆಗಳು ಸಾಮಾಜಿಕ, ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದು, ಸಮ ಸಮಾಜದ ನಿರ್ಮಾಣಕ್ಕೆ ಸರ್ಕಾರ ಮಾಡುತ್ತಿರುವ ಪ್ರಾಮಾಣಿಕ ಪ್ರಯತ್ನವಾಗಿದೆ ಎಂದರು.

ಮನುವಾದಿಗಳು ಸಂವಿಧಾನ ವಿರೋಧಿಗಳಾಗಿದ್ದು, ಸುಳ್ಳು ಹೇಳಿ ಸಮಾಜದ ದಾರಿ ತಪ್ಪಿಸುತ್ತಾರೆ. ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿದರು, ದೆಹಲಿಯಲ್ಲಿ ಅಂಬೇಡ್ಕರ್ ಅವರ ಶವ ಸಂಸ್ಕಾರ ಮಾಡಲು ಅವಕಾಶ ನೀಡಲಿಲ್ಲ ಎಂದೂ ಅಪಪ್ರಚಾರ ಮಾಡುತ್ತಾರೆ ಜನ ಇಂಥ ಸುಳ್ಳುಗಳನ್ನು ನಂಬಬಾರದು ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇಲ್ಲದೇ ಹೋಗಿದ್ದರೆ ದೇಶದಲ್ಲಿ ಏನು ಆಗುತ್ತಿತ್ತು ಎಂದು ಊಹಿಸುವುದೇ ಅಸಾಧ್ಯ ಎಂದ ಮುಖ್ಯಮಂತ್ರಿಗಳು ಅಂಬೇಡ್ಕರ್ ಅವರ ಬದುಕನ್ನು, ಉದ್ದೇಶವನ್ನು ಮನನ ಮಾಡಿಕೊಳ್ಳಬೇಕು. ಅಂಬೇಡ್ಕರ್ ಅವರು ಎಲ್ಲಾ ಕಾಲಕ್ಕೂ ಸಲ್ಲುತಾರೆ ಎಂದರು.

ಸರ್ಕಾರ ನಡೆಸುವ ವಸತಿಶಾಲೆಗಳಲ್ಲಿ ಶೇ. 97.22% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಪಿಯುಸಿ ಪರೀಕ್ಷೆಯಲ್ಲಿಯೂ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾಗಿರುವುದು ಇದು ಸರ್ಕಾರದ ಹೆಗ್ಗಳಿಕೆ ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಡಾ. ಹೆಚ್. ಸಿ ಮಹದೇವಪ್ಪ, ಕೆ. ಹೆಚ್.ಮುನಿಯಪ್ಪ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ರಿಜ್ವಾನ್ ಅರ್ಷದ್, ಮೇಲ್ಮನೆ ಸದಸ್ಯರಾದ ಭೋಜೇಗೌಡ, ಗೋವಿಂದರಾಜು, ಮಾಜಿ ಸಂಸದ ಚಂದ್ರಪ್ಪ, ಮಾಜಿ ಸಚಿವ ಆಂಜನೇಯ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮೊದಲಾದವರು ಉಪಸ್ಥಿತರಿದ್ದರು.

Comments

Leave a Comment

Prev Post ಪರಿಶಿಷ್ಟರಿಗೆ "ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ" ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News