“KSPSTA ಚುನಾವಣೆ ಪ್ರಕ್ರಿಯೆಗೆ ನ್ಯಾಯಾಲಯ ತಾತ್ಕಾಲಿಕ ಬ್ರೇಕ್: ಮುಂದಿನ ಆದೇಶದವರೆಗೆ ಎಲ್ಲಾ ಚಟುವಟಿಕೆ ಸ್ಥಗಿತ”

Bengaluru Urban:

Font size:

“KSPSTA ಚುನಾವಣೆ ಪ್ರಕ್ರಿಯೆಗೆ ನ್ಯಾಯಾಲಯ ತಾತ್ಕಾಲಿಕ ಬ್ರೇಕ್: ಮುಂದಿನ ಆದೇಶದವರೆಗೆ ಎಲ್ಲಾ ಚಟುವಟಿಕೆ ಸ್ಥಗಿತ”

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ (KSPSTA) 2026–2031 ಅವಧಿಯ ಚುನಾವಣೆ ಪ್ರಕ್ರಿಯೆಗೆ ನ್ಯಾಯಾಲಯ ತಾತ್ಕಾಲಿಕ ಬ್ರೇಕ್ ಹಾಕಿದೆ. 01 ಏಪ್ರಿಲ್ 2026ರಂದು ಪ್ರಕಟಿಸಿದ್ದ ಚುನಾವಣಾ ವೇಳಾಪಟ್ಟಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ, ನ್ಯಾಯಾಲಯ ಮಧ್ಯಂತರ ಆದೇಶ ನೀಡಿದ್ದು, ಮುಂದಿನ ವಿಚಾರಣೆಯ ದಿನಾಂಕದವರೆಗೆ ಚುನಾವಣಾ ಪ್ರಕ್ರಿಯೆ ಮುಂದುವರಿಯಬಾರದು ಎಂದು ಸ್ಪಷ್ಟ ಸೂಚನೆ ನೀಡಿದೆ.

ನ್ಯಾಯಾಲಯದ ಆದೇಶದ ಪ್ರಕಾರ, ಏಪ್ರಿಲ್ 19ರಂದು ನಡೆಯಬೇಕಿದ್ದ ತಾಳೆಕ, ವಿಶೇಷ ಮತ್ತು ಯೋಜನಾ ಘಟಕಗಳ ಚುನಾವಣೆಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲಾಗಿದೆ. ಈಗಾಗಲೇ ಮುದ್ರಣ ಹಂತದಲ್ಲಿದ್ದ ಮತಪತ್ರಗಳು, ಅಭ್ಯರ್ಥಿಗಳ ಪಟ್ಟಿಗಳು ಮತ್ತು ಚುನಾವಣಾ ದಾಖಲೆಗಳನ್ನು ಸೀಲ್‌ಡ್ ಕವರ್‌ನಲ್ಲಿ ಭದ್ರಪಡಿಸುವಂತೆ ಚುನಾವಣಾಧಿಕಾರಿಗಳಿಗೆ ಸೂಚಿಸಲಾಗಿದೆ. Proof-reading ಹಂತದಲ್ಲಿದ್ದ ಮುದ್ರಣ ಕಾರ್ಯಗಳನ್ನೂ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಏಪ್ರಿಲ್ 11ರಿಂದ 18ರವರೆಗೆ ನಡೆದಿದ್ದ ಚುನಾವಣಾ ಚಟುವಟಿಕೆಗಳನ್ನೂ ನ್ಯಾಯಾಲಯದ ಆದೇಶದಂತೆ ಸ್ಥಗಿತಗೊಳಿಸಲಾಗಿದ್ದು, ಏಪ್ರಿಲ್ 22ರಂದು ನಡೆಯಬೇಕಿದ್ದ ರಾಜ್ಯ ಮಟ್ಟದ ಚುನಾವಣಾ ಪ್ರಕ್ರಿಯೆಯನ್ನೂ ಮುಂದೂಡಲಾಗಿದೆ. ಜಿಲ್ಲಾ ಮತ್ತು ರಾಜ್ಯ ಚುನಾವಣಾಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಲಾಗಿದೆ.

ಚುನಾವಣಾ ವೇಳಾಪಟ್ಟಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಆಕ್ಷೇಪಣೆಗಳ ಹಿನ್ನೆಲೆಯಲ್ಲಿ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದ್ದು, ಮುಂದಿನ ವಿಚಾರಣೆಯ ದಿನಾಂಕದಲ್ಲಿ ಚುನಾವಣೆಯ ಭವಿಷ್ಯ ನಿರ್ಧಾರವಾಗಲಿದೆ. ಆತನಕ ಯಾವುದೇ ಚುನಾವಣಾ ಚಟುವಟಿಕೆ ನಡೆಸಬಾರದು ಎಂದು ಸ್ಪಷ್ಟ ಆದೇಶ ಹೊರಡಿಸಲಾಗಿದೆ.

Comments

Leave a Comment

Prev Post ಮಹಿಳೆಯರಿಗೆ ಕಾಂಗ್ರೆಸ್‍ನಿಂದ ದ್ರೋಹ: ಆರ್.ಅಶೋಕ್
Next Post ಅಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ‘ಚಾಲಕರ ಸೇವಾರತ್ನ’ ಗೌರವ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News