ಅಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ‘ಚಾಲಕರ ಸೇವಾರತ್ನ’ ಗೌರವ

Bengaluru Urban:

Font size:

ಅಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ‘ಚಾಲಕರ ಸೇವಾರತ್ನ’ ಗೌರವ

ಅಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ‘ಚಾಲಕರ ಸೇವಾರತ್ನ’ ಗೌರವ
ಬೆಂಗಳೂರು: ಮಧ್ಯ ಪ್ರಾಂಚ್ಯ ಪ್ರದೇಶದಲ್ಲಿ ಉಂಟಾದ ಸಂಘರ್ಷದ ಪರಿಣಾಮವಾಗಿ ರಾಜ್ಯದಲ್ಲಿ ಆಟೋಗಳಿಗೆ LPG ಗ್ಯಾಸ್ ಕೊರತೆ ಉಂಟಾಗಿ, ದೊರಕಿದರೂ ದುಪ್ಪಟ್ಟು ಬೆಲೆ ಕೇಳಲಾಗುತ್ತಿದ್ದ ಹಿನ್ನೆಲೆಯಲ್ಲಿ ಆಟೋ ಚಾಲಕರು ತೀವ್ರ ಸಂಕಷ್ಟವನ್ನು ಎದುರಿಸುತ್ತಿದ್ದರು.
ಈ ಸಂಕಷ್ಟದ ಸಮಯದಲ್ಲಿ ಕನ್ನಡದ ಖ್ಯಾತ ಚಲನಚಿತ್ರ ನಟ ಅಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಮಾನವೀಯತೆ ತೋರಿಸಿ, ಸುಮಾರು 25 ಲಕ್ಷ ರೂಪಾಯಿಗಳ ನೆರವು ನೀಡುವ ಮೂಲಕ ರಾಜ್ಯದ ಎಲ್ಲಾ ಜಿಲ್ಲೆಗಳ ಆಟೋ ಚಾಲಕರಿಗೆ ಉಚಿತ LPG ಗ್ಯಾಸ್ ವಿತರಣೆ ಮಾಡಲು ಮುಂದಾದರು. ಅವರ ಈ ಸಾಮಾಜಿಕ ಸೇವೆಗೆ ಚಾಲಕರ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ.
ಈ ಸೇವೆಯನ್ನು ಗುರುತಿಸಿ, ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ವತಿಯಿಂದ ಧ್ರುವ ಸರ್ಜಾ ಅವರಿಗೆ ಕಂಚಿನ ಆಟೋ ಪ್ರತಿಮೆ ನೀಡಿ, ‘ಚಾಲಕರ ಸೇವಾರತ್ನ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಟ್ರೇಡ್ ಯೂನಿಯನ್ ಗೌರವಾಧ್ಯಕ್ಷರಾದ ಗಂಡಸಿ ಸದಾನಂದಸ್ವಾಮಿ, ರಾಜ್ಯಾಧ್ಯಕ್ಷರಾದ ಸ್ನೇಹಜೀವಿ ಸಂತೋಷ್ ಕುಮಾರ್ ಸೇರಿದಂತೆ ರಾಜು ಕನ್ನಡಿಗ, ಶಿವಕುಮಾರ್, ಉಸ್ಮಾನ್ ಪಾಶ, ಶ್ರೀನಿವಾಸ್ ಬಾಬು, ಸ್ನೇಹಜೀವಿ ಸುಮಾ, ಶಿವು, ಮಂಜುನಾಥ್, ಕಡೆಶ್, ದಂಡಪ್ಪ ಮತ್ತು ನೂರಾರು ಚಾಲಕರು ಉಪಸ್ಥಿತರಿದ್ದರು.
ಈ ಸಂದರ್ಭ ಮಾತನಾಡಿದ ಸಂಘಟನೆಯ ಪದಾಧಿಕಾರಿಗಳು, ಸಂಕಷ್ಟದ ಸಮಯದಲ್ಲಿ ಚಾಲಕರಿಗೆ ಬೆಂಬಲವಾಗಿ ನಿಂತ ಧ್ರುವ ಸರ್ಜಾ ಅವರ ಸೇವೆಯನ್ನು ಸದಾ ಸ್ಮರಿಸಲಾಗುವುದು ಎಂದು ಹೇಳಿದರು.

Comments

Leave a Comment

Prev Post “KSPSTA ಚುನಾವಣೆ ಪ್ರಕ್ರಿಯೆಗೆ ನ್ಯಾಯಾಲಯ ತಾತ್ಕಾಲಿಕ ಬ್ರೇಕ್: ಮುಂದಿನ ಆದೇಶದವರೆಗೆ ಎಲ್ಲಾ ಚಟುವಟಿಕೆ ಸ್ಥಗಿತ”

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News