ಮಹಿಳಾ ಮೀಸಲಾತಿ ಹೆಸರಿನಲ್ಲಿ ಕಾಂಗ್ರೆಸ್ ಮೊಸಳೆ ಕಣ್ಣೀರು: ರಮಾನಾಥ ರೈ ಆರೋಪ.

Dakshina Kannada:

Font size:

ಮಹಿಳಾ ಮೀಸಲಾತಿ ಹೆಸರಿನಲ್ಲಿ ಕಾಂಗ್ರೆಸ್ ಮೊಸಳೆ ಕಣ್ಣೀರು: ರಮಾನಾಥ ರೈ ಆರೋಪ.

From ; Jayaram Udupi

ಮಂಗಳೂರು:

ಮಹಿಳಾ ಮೀಸಲಾತಿ ಹೆಸರಿನಲ್ಲಿ ಕೇಂದ್ರ ಸರ್ಕಾರ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವೇ ಈ ದೇಶಕ್ಕೆ ಮೊದಲ ಮಹಿಳಾ ಪ್ರಧಾನಿ ಹಾಗೂ ಮುಖ್ಯಮಂತ್ರಿಗಳನ್ನು ನೀಡಿದ ಪಕ್ಷವಾಗಿದ್ದು, ಆರಂಭದಿಂದಲೂ ಮಹಿಳೆಯರ ಶ್ರೇಯೋಭಿವೃದ್ಧಿಗೆ ನಿರಂತರವಾಗಿ ಪ್ರಯತ್ನಿಸಿದೆ ಎಂದು ಹೇಳಿದರು.

ಇದೀಗ ಬಿಜೆಪಿ ಸರ್ಕಾರ ಕಾಂಗ್ರೆಸ್ ಮಹಿಳೆಯರ ವಿರೋಧಿ ಎಂಬ ಭಾವನೆ ಮೂಡಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮೊದಲಿಗೆ ವಿರೋಧ ವ್ಯಕ್ತಪಡಿಸಿತ್ತು. ಬಳಿಕ ಪಿ.ವಿ. ನರಸಿಂಹ ರಾವ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆ ಯೋಜನೆ ಜಾರಿಗೆ ಬಂದಿತು ಎಂದು ವಿವರಿಸಿದರು.

ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಆದರೆ ಬಿಜೆಪಿ ಸರ್ಕಾರಕ್ಕೆ ಮಹಿಳೆಯರ ಅಭಿವೃದ್ಧಿಯ ಮೇಲಿನ ನಿಜವಾದ ಆಸಕ್ತಿ ಕಾಣುವುದಿಲ್ಲ ಎಂದು ಅವರು ಟೀಕಿಸಿದರು.

ದೇಶದಲ್ಲಿ ಮೊದಲ ಬಾರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಸ್ಥಾಪಿಸಿ, ಶಿಶು ಮರಣ ಪ್ರಮಾಣ ಕಡಿಮೆ ಮಾಡಲು ಅಂಗನವಾಡಿ ಕೇಂದ್ರಗಳನ್ನು ಆರಂಭಿಸಿದವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಎಂದು ಅವರು ಸ್ಮರಿಸಿದರು.

ಕ್ಷೇತ್ರ ಮರುವಿಂಗಡಣೆಯ ವಿಧೇಯಕವನ್ನು ಬಹುಮತ ಸಿಗದು ಎಂಬುದು ತಿಳಿದಿದ್ದರೂ ಬಿಜೆಪಿ ಮುಂದಿಟ್ಟಿದ್ದು, ಅಂತಿಮವಾಗಿ ಅದು ವಿಫಲವಾಗಿದೆ ಎಂದು ಹೇಳಿದರು.

ಮಹಿಳಾ ಮೀಸಲಾತಿ ವಿಧೇಯಕಕ್ಕೆ ಕಾಂಗ್ರೆಸ್ ಯಾವುದೇ ವಿರೋಧವಿಲ್ಲ, ಆದರೆ ಈ ವಿಚಾರದಲ್ಲಿ ಬಿಜೆಪಿ ಹಿಂದಿನ ನಿಲುವನ್ನು ಮರೆಯಬಾರದು ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗೇರು ನಿಗಮದ ಅಧ್ಯಕ್ಷರಾದ ಮಮತಾ ಗಟ್ಟಿ , ಕಾಂಗ್ರೆಸ್ ಮುಖಂಡರಾದ ಶುಭೋದಯ ಆಳ್ವ ಅಪ್ಪಿ , ಮೀನಾ ಟೆಲ್ಲಿಸ್ , ವೀಣಾ ಬೆನೆಡಿಕ್ಟ್ , ಮತ್ತಿತರರು ಉಪಸ್ಥಿತರಿದ್ದರು.

Comments

Leave a Comment

Prev Post ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮತ
Next Post ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News