ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳ ತ್ವರಿತ ವಿಲೇವಾರಿ ಕುರಿತಂತೆ ಕಂದಾಯ ಆಯುಕ್ತರ ಹೊಸ ಆದೇಶ — ಜಿಲ್ಲಾಧಿಕಾರಿಗಳಿಗೆ 30 ದಿನಗಳ ಗಡುವು.

Bengaluru Urban:

Font size:

ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳ ತ್ವರಿತ ವಿಲೇವಾರಿ ಕುರಿತಂತೆ ಕಂದಾಯ ಆಯುಕ್ತರ ಹೊಸ ಆದೇಶ — ಜಿಲ್ಲಾಧಿಕಾರಿಗಳಿಗೆ 30 ದಿನಗಳ ಗಡುವು.

ಬೆಂಗಳೂರು, ಏ. 21 - ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕೆಂದು ಸೂಚಿಸಲಾಗಿದೆ.
ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಂದಾಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95 ಹಾಗೂ 1966ರ ನಿಯಮಾವಳಿ ತಿದ್ದುಪಡಿ ನಿಯಮಗಳ ಪ್ರಕಾರ, 23 ಡಿಸೆಂಬರ್ 2025ರಿಂದ ಹೊಸ ನಿಯಮ ಜಾರಿಯಲ್ಲಿದೆ.

ಮಾಸ್ಟರ್ ಪ್ಲಾನ್ ವ್ಯಾಪ್ತಿಯ ಹೊರಗಿನ ಜಮೀನುಗಳಿಗೆ ಸಲ್ಲಿಸಿದ ಅರ್ಜಿಗಳನ್ನು ಜಿಲ್ಲಾಧಿಕಾರಿಗಳು 30 ದಿನಗಳೊಳಗೆ ತೀರ್ಮಾನ ಕೈಗೊಳ್ಳಬೇಕು. 30 ದಿನಗಳಲ್ಲಿ ನಿರ್ಧಾರ ಕೈಗೊಳ್ಳದಿದ್ದರೆ, ಅರ್ಜಿದಾರರು ಶುಲ್ಕ ಪಾವತಿಸಿದ್ದಲ್ಲಿ, ಅರ್ಜಿಯನ್ನು ಪರಿಭಾವಿತ ಭೂಪರಿವರ್ತನೆ (Deemed Conversion) ಎಂದು ಪರಿಗಣಿಸಿ, ತಂತ್ರಾಂಶದ ಮೂಲಕ ಸ್ವಯಂಚಾಲಿತ ಅನುಮೋದನೆ ನೀಡಲಾಗುತ್ತದೆ.

ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗೆ ಸಂಬಂಧಿಸಿದಂತೆ ತಾಲ್ಲೂಕು ತಹಶೀಲ್ದಾರರು, ಅರಣ್ಯ ಇಲಾಖೆ ಮೊದಲಾದ ಸಂಬಂಧಪಟ್ಟ ಇಲಾಖೆಗಳು ಅಭಿಪ್ರಾಯ ನೀಡಲು 15 ದಿನಗಳ ಕಾಲಾವಕಾಶವಿದ್ದು, ಜಿಲ್ಲಾಧಿಕಾರಿಗಳ ಕಛೇರಿ ವಿಷಯ ನಿರ್ವಾಹಕರಿಗೆ 5 ದಿನಗಳು, ಅಪರ ಜಿಲ್ಲಾಧಿಕಾರಿಗಳಿಗೆ 5 ದಿನಗಳು ಹಾಗೂ ಜಿಲ್ಲಾಧಿಕಾರಿಗಳಿಗೆ 5 ದಿನಗಳ ಕಾಲಾವಕಾಶ ಇರುತ್ತದೆ. ಒಟ್ಟು 30 ಕೆಲಸದ ದಿನಗಳಲ್ಲಿ ಜಿಲ್ಲಾಧಿಕಾರಿಗಳು ತೀರ್ಮಾನ ಕೈಗೊಳ್ಳದಿದ್ದರೆ, ಸದರಿ ಭೂಪರಿವರ್ತನಾ ಅರ್ಜಿಗೆ ಅನುಮೋದನೆ ಇದೆ ಎಂದು ಪರಿಗಣಿಸಿ, ಶುಲ್ಕ ಪಾವತಿಗಾಗಿ ಅರ್ಜಿದಾರರ ಲಾಗಿನ್ ಗೆ ವರ್ಗಾವಣೆಯಾಗುತ್ತದೆ.

ಶುಲ್ಕ ಪಾವತಿಯಾದ ನಂತರ ತಂತ್ರಾಂಶದ ಮೂಲಕ ಸ್ವಯಂಚಾಲಿತವಾಗಿ ಭೂಪರಿವರ್ತನೆ ಆದೇಶ ಸೃಜಿಸಲಾಗುತ್ತದೆ ಎಂದು ಕಂದಾಯ ಆಯುಕ್ತೆ ಮೀನಾ ನಾಗರಾಜ್ ಅವರಿಂದ ಡಿಜಿಟಲ್ ಸಹಿ ಮಾಡಲಾದ ಆದೇಶದಲ್ಲಿ ತಿಳಿಸಲಾಗಿದೆ. ಈ ಆದೇಶದ ಪ್ರತಿಯನ್ನು ರಾಜ್ಯದ ಎಲ್ಲಾ ಉಪವಿಭಾಗಾಧಿಕಾರಿಗಳು ಹಾಗೂ ತಾಲ್ಲೂಕು ತಹಶೀಲ್ದಾರರಿಗೆ ಮಾಹಿತಿ ಮತ್ತು ಅಗತ್ಯ ಕ್ರಮಕಾಗಿ ಕಳುಹಿಸಲಾಗಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95 ಹಾಗೂ 1966ರ ನಿಯಮಾವಳಿ ತಿದ್ದುಪಡಿ ನಿಯಮಗಳು 2025ರ ಡಿಸೆಂಬರ್ 23ರಿಂದ ಜಾರಿಯಲ್ಲಿದ್ದು, ಭೂಪರಿವರ್ತನೆ ಪ್ರಕ್ರಿಯೆಯನ್ನು ಸರಳೀಕರಿಸುವುದು, ಪಾರದರ್ಶಕತೆ ಹೆಚ್ಚಿಸುವುದು ಮತ್ತು ತಂತ್ರಜ್ಞಾನ ಆಧಾರಿತ ಅನುಮೋದನೆ ವ್ಯವಸ್ಥೆಯನ್ನು ಅಳವಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

Comments

Leave a Comment

Prev Post ಇಡಿ ದಾಳಿ: ಕೇಂದ್ರ ಸರ್ಕಾರ ಕಾಂಗ್ರೆಸ್ ನವರನ್ನು ಗುರಿಯಾಗಿಸಿದೆ: ಸಿಎಂ ಸಿದ್ದರಾಮಯ್ಯ
Next Post ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ತೆಂಗಿನ ನಾರಿನ ಮ್ಯಾಟ್‌ಗಳು ಮತ್ತು ಇತರೆ ಉತ್ಪನ್ನಗಳನ್ನು ದೆಹಲಿಗೆ ಸರಬರಾಜು ಮಾಡುವ ವಾಹನಕ್ಕೆ ಚಾಲನೆ ನೀಡಿದರು.

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News