ಕರ್ನಾಟಕದಲ್ಲಿ ಏಪ್ರಿಲ್ 25ರಿಂದ ಮಲೆನಾಡು, 26ರಿಂದ ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ
ಕರಾವಳಿ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಧಿಕ ತಾಪಮಾನದಿಂದ ಕೂಡಿದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. (ಮುನ್ಸೂಚನೆಯಂತೆ ಮಳೆಯ ಸಾಧ್ಯತೆ ಕಡಿಮೆ). ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 26ರಿಂದ ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು, ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಧಿಕ ತಾಪಮಾನದ ಕಾರಣದಿಂದ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. (ಮುನ್ಸೂಚನೆಯಂತೆ ಮಳೆಯ ಸಾಧ್ಯತೆ ಕಡಿಮೆ)
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಎಪ್ರಿಲ್ 25ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ವಿಜಯಪುರ, ಕಲಬುರ್ಗಿ, ಬೀದರ್, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿದ್ದು ಎಪ್ರಿಲ್ 27 ಅಥವಾ 28ರಿಂದ ಮಳೆಯ ಪ್ರಮಾಣವು ಹೆಚ್ಚಾಗುವ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡದ ಪ್ರಮಾಣ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿದ್ದು, ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಕಡೆ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಎಪ್ರಿಲ್ 26ರಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಸೂಚನೆಗಳಿವೆ.
ಉತ್ತರ ಆಂದ್ರಾ ಹಾಗೂ ತೆಲಂಗಾಣ ರಾಜ್ಯಗಳ ಅತ್ಯಧಿಕ ತಾಪಮಾನ ಏರಿಕೆಯ ಕಾರಣದಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಆಂದ್ರಾ ಹಾಗೂ ತಮಿಳುನಾಡು ರಾಜ್ಯಗಳಲ್ಲೂ ತಾಪಮಾನ ಏರಿಕೆಯಾಗುತ್ತಿದ್ದು, ಇದರ ಪ್ರಭಾವದಿಂದ ಎಪ್ರಿಲ್ 26ರಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.






Comments
Leave a Comment