ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

Bengaluru Urban:

Font size:

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ವಿಧಾನಸೌಧ (ಬೆಂಗಳೂರು): ಬೆಂಗಳೂರಿನಲ್ಲಿರುವ ಆಸ್ಟ್ರೇಲಿಯನ್ ಕೌನ್ಸುಲೇಟ್ ಜನರಲ್‌ ಕಚೇರಿಯ ಕೌನ್ಸುಲ್ ಜನರಲ್ ಹಿಲರಿ ಮ್ಯಾಕ್ ಗೀಚಿ ಮತ್ತು ಉಪ ಕೌನ್ಸುಲ್ ಹ್ಯಾರೀಟ್ ಅವರನ್ನೊಳಗೊಂಡ ನಿಯೋಗ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ‌, ಮಾತುಕತೆ ನಡೆಸಿತು.

ಇದೇ ವೇಳೆ ಸಚಿವರೊಂದಿಗೆ ಉಭಯ ದೇಶಗಳ ನಡುವಿನ ಹಲವು ವಿಚಾರಗಳನ್ನು ಚರ್ಚೆ ನಡೆಸಲಾಯಿತು. ಕರ್ನಾಟಕದಲ್ಲಿ ಮಹಿಳೆಯರಿಗಾಗಿ ಜಾರಿಗೆ ತಂದಿರುವ‌ ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆಗಳ ಬಗ್ಗೆ ಸಚಿವೆ ಲಕ್ಷ್ಮೀ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ಹಂಚಿಕೊಂಡರು.

ಸುಮಾರು 30 ನಿಮಿಷಗಳ ಕಾಲ ಆಸ್ಟ್ರೇಲಿಯಾ ನಿಯೋಗ ಸಚಿವರೊಂದಿಗೆ ಚರ್ಚೆ ನಡೆಸಿತು. ಬೆಂಗಳೂರಿನಲ್ಲಿರುವ ಆಸ್ಟ್ರೇಲಿಯನ್ ಕೌನ್ಸುಲೇಟ್ ಜನರಲ್‌ ಕಚೇರಿಗೆ ಭೇಟಿ ನೀಡುವಂತೆ ನಿಯೋಗದ ಸದಸ್ಯರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಆಹ್ವಾನ ನೀಡಿದರು. ಬಳಿಕ ಆಸ್ಟ್ರೇಲಿಯಾ ನಿಯೋಗದ ಸದಸ್ಯರನ್ನು ಸಚಿವರು ಸನ್ಮಾನಿಸಿದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ‌ಕಾರ್ಯದರ್ಶಿ ಡಾ. ಶಾಮ್ಲಾ ಇಕ್ಬಾಲ್ ಉಪಸ್ಥಿತರಿದ್ದರು

Comments

Leave a Comment

Prev Post ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ
Next Post ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

Read all News