ಹಿಂದುಳಿದ ಶಾಲೆಗಳು ಹಾಗೂ ಪ್ರೌಢಶಾಲೆಗಳಲ್ಲಿ 8ನೇ ತರಗತಿಗೂ ಆಂಗ್ಲ ಮಾಧ್ಯಮ
ಬೆಂಗಳೂರು, ಮೇ 3-
ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿದೆ. 2019ರಲ್ಲಿ ಪ್ರಾಥಮಿಕ ಹಂತದಿಂದಲೇ ಆಂಗ್ಲ ಮಾಧ್ಯಮ ವಿಭಾಗಗಳನ್ನು ಹಂತ ಹಂತವಾಗಿ ಜಾರಿಗೆ ತರುವ ಪ್ರಯತ್ನ ಆರಂಭಿಸಿದ ಕರ್ನಾಟಕ ಸರ್ಕಾರ, ಈಗ 2026-27ನೇ ಸಾಲಿನಿಂದ ಹಿಂದುಳಿದ ಶಾಲೆಗಳು ಹಾಗೂ ಪ್ರೌಢಶಾಲೆಗಳಲ್ಲಿ 8ನೇ ತರಗತಿಗೂ ಆಂಗ್ಲ ಮಾಧ್ಯಮವನ್ನು ವಿಸ್ತರಿಸಲು ಮುಂದಾಗಿದೆ.
ಸಮಗ್ರ ಶಿಕ್ಷಣ ನಿರ್ದೇಶಕರು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಎಲ್ಲಾ ಉಪ ನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳ ವಿವರಗಳನ್ನು ಮೇ 8ರೊಳಗೆ ಸಲ್ಲಿಸಬೇಕಾಗಿದೆ. ಶಾಲೆಗಳು ವಿಭಾಗಗಳನ್ನು ಪ್ರಾರಂಭಿಸುವಾಗ ಶಿಕ್ಷಕರ ವ್ಯವಸ್ಥೆ, ವಿದ್ಯಾರ್ಥಿಗಳ ದಾಖಲಾತಿ ಹಾಗೂ ಆಡಳಿತಾತ್ಮಕ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಲಾಗಿದೆ.
ಶಾಲೆಗಳು ಆಂಗ್ಲ ಮಾಧ್ಯಮ ವಿಭಾಗಗಳನ್ನು ಪ್ರಾರಂಭಿಸುವಾಗ ಶಿಕ್ಷಕರ ವ್ಯವಸ್ಥೆ, ವಿದ್ಯಾರ್ಥಿಗಳ ದಾಖಲಾತಿ ಹಾಗೂ ಆಡಳಿತಾತ್ಮಕ ಕ್ರಮಗಳನ್ನು ಅನುಸರಿಸಬೇಕಾಗಿದೆ. ಈ ಸಂಬಂಧ ಸಮಗ್ರ ಶಿಕ್ಷಣ ನಿರ್ದೇಶಕರು ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಿದ್ದು, ಎಲ್ಲಾ ಶಾಲೆಗಳು ನಿಯಮಾನುಸಾರ ಕ್ರಮ ಕೈಗೊಳ್ಳಬೇಕಾಗಿದೆ.
ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಆಂಗ್ಲ ಭಾಷಾ ಶಿಕ್ಷಣದ ಅವಕಾಶ ವಿಸ್ತರಿಸುವುದರಿಂದ ಅವರ ಭವಿಷ್ಯದಲ್ಲಿ ಸ್ಪರ್ಧಾತ್ಮಕತೆ ಹೆಚ್ಚುವ ನಿರೀಕ್ಷೆ ವ್ಯಕ್ತವಾಗಿದೆ.
ಈ ನಿರ್ಧಾರದಿಂದ ಹಿಂದುಳಿದ ಶಾಲೆಗಳ ವಿದ್ಯಾರ್ಥಿಗಳಿಗೆ ಆಂಗ್ಲ ಭಾಷಾ ಶಿಕ್ಷಣದ ಅವಕಾಶ ವಿಸ್ತರಿಸಲಿದ್ದು, ಭವಿಷ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಉನ್ನತ ಶಿಕ್ಷಣದಲ್ಲಿ ಅವರಿಗೆ ಹೆಚ್ಚಿನ ನೆರವು ದೊರೆಯಲಿದೆ ಎಂಬ ನಿರೀಕ್ಷಿಸಲಾಗಿದೆ.ಕರ್ನಾಟಕ ಸರ್ಕಾರವು 2026-27ನೇ ಸಾಲಿನಿಂದ ಹಿಂದುಳಿದ ಶಾಲೆಗಳು ಹಾಗೂ ಪ್ರೌಢಶಾಲೆಗಳಲ್ಲಿ 8ನೇ ತರಗತಿಗೆ ಆಂಗ್ಲ ಭಾಷಾ ಮಾಧ್ಯಮ ವಿಭಾಗಗಳನ್ನು ಪ್ರಾರಂಭಿಸಲು ನಿರ್ಧರಿಸಿರುವುದು ರಾಜ್ಯದ ಶಿಕ್ಷಣ ನೀತಿಯಲ್ಲಿ ಮಹತ್ವದ ತಿರುವಾಗಿ ಪರಿಣಮಿಸಲಿದೆ.





Comments
Leave a Comment