.ಕೆ.ಸಿ ರೆಡ್ಡಿಯವರು ಒಬ್ಬ ಸಮರ್ಥ, ಪ್ರಾಮಾಣಿಕ ಆಡಳಿತಗಾರರಾಗಿದ್ದರು:ಮುಖ್ಯಮಂತ್ರಿ ಸಿದ್ದರಾಮಯ್ಯ

Bengaluru Urban:

Font size:

.ಕೆ.ಸಿ ರೆಡ್ಡಿಯವರು ಒಬ್ಬ ಸಮರ್ಥ, ಪ್ರಾಮಾಣಿಕ ಆಡಳಿತಗಾರರಾಗಿದ್ದರು:ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಮೇ -04
ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು ಒಬ್ಬ ಸಮರ್ಥ, ಪ್ರಾಮಾಣಿಕ ಆಡಳಿತಗಾರಾಗಿದ್ದು ಸಾರ್ವಜನಿಕ ಜೀವನದಲ್ಲಿ ಅತ್ಯಂತ ಪ್ರಾಮಾಣಿಕತೆಯಿಂದ ನಡೆದುಕೊಂಡವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.

ಅವರು ಇಂದು
ಮಾಜಿ ಮುಖ್ಯಮಂತ್ರಿ ಶ್ರೀ ದಿವಂಗತ ಕೆ.ಸಿ. ರೆಡ್ಡಿ ಯವರ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೆ.ಸಿ.ರೆಡ್ಡಿಯವರು ಸ್ವಾತಂತ್ರ್ಯದ ನಂತರ ಮೊದಲ ಮುಖ್ಯಮಂತ್ರಿಯಾದವರು. ಸ್ವಾತಂತ್ರ್ಯ ಹೋರಾಟದಲ್ಲಿಯೂ ಭಾಗಿಯಾಗಿದ್ದರು ಎಂದರು.

ಕೋಲಾರ ಮೂಲದವರಾದ ಅವರು ಮೈಸೂರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿದವರು. ಕಾಂಗ್ರೆಸ್ ಪಕ್ಷ ಸದೃಢವಾಗಿರಲು ಅವರು ಕಾರಣಕರ್ತರು ಎಂದರು.

ಕೆ.ಸಿ.ರೆಡ್ಡಿಯವರ ಆಡಳಿತದ ಹೆಜ್ಜೆಗಳು ನಮಗೆ ದಾರಿದೀಪ

ಐಟಿಐ, ಎಚ್.ಎಂ.ಟಿ, ಇಸ್ರೋ ಮುಂತಾದ ಸಂಸ್ಥೆಗಳು ರಾಜ್ಯದಲ್ಲಿ ಸ್ಥಾಪನೆಯಾಗಿದ್ದರೆ ಅದಕ್ಕೆ ಅವರು ಮೂಲ ಕಾರಣ ಎಂದರು. ಕೆ.ಸಿ.ರೆಡ್ಡಿಯವರ ಆಡಳಿತದ ಹೆಜ್ಜೆಗಳು ನಮಗೆ ದಾರಿದೀಪ ಎಂದು ಮುಖ್ಯಮಂತ್ರಿಗಳು ಹೇಳಿದರು.

ಎರಡೂ ಕ್ಷೇತ್ರಗಳಲ್ಲಿ ಗೆಲುವು: ಸಿಎಂ ವಿಶ್ವಾಸ*

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ದಾವಣಗೆರೆಯಲ್ಲಿ ನಾನಾ ಕಾರಣದಿಂದ ಗೆಲುವಿನ ಅಂತರ ಕಡಿಮೆಯಾಗಬಹುದು ಆದರೆ ಗೆಲ್ಲುತ್ತೇವೆ ಎಂದರು.

ಕೇರಳದಲ್ಲಿ ನಿರೀಕ್ಷೆಗಿಂತಲೂ ಹೆಚ್ಚು ಸ್ಥಾನ ಗಳಿಸಿದ್ದೇವೆ*

ಪಂಚ ರಾಜ್ಯ ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅಸ್ಸಾಂನಲ್ಲಿ ನಿರೀಕ್ಷಿತ ಫಲಿತಾಂಶ ಬಂದಿದ್ದು, ಅದನ್ನು ಒಪ್ಪಿಕೊಳ್ಳುತ್ತೇವೆ. ಕೇರಳದಲ್ಲಿ ನಮ್ಮ ನಿರೀಕ್ಷೆಗಿಂತಲೂ ಹೆಚ್ಚು ಸ್ಥಾನಗಳನ್ನು ಗಳಿಸಿದ್ದೇವೆ. ಸುಮಾರು 76 ರಿಂದ 80 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದೆವು, ಆದರೆ 95 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದೇವೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ ಇರಬಹುದು ಎಂದು ಭಾವಿಸಿದ್ದೇನೆ ಎಂದರು.

ತಮಿಳುನಾಡಿನಲ್ಲಿ ಟಿವಿಕೆ ಪಕ್ಷ ಮುನ್ನಡೆ ಸಾಧಿಸಿರುವ ಬಗ್ಗೆ ಮಾತನಾಡಿ ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

Comments

Leave a Comment

Prev Post ಕೆ.ಸಿ.ರೆಡ್ಡಿ – ಕರ್ನಾಟಕದ ಮೊದಲ ಮುಖ್ಯಮಂತ್ರಿ, ಪ್ರಜಾಪ್ರಭುತ್ವದ ಬುನಾದಿ ಹಾಕಿದ ನಾಯಕ, ಅವರ ಜನ್ಮದಿನದ ನೆನಪು
Next Post ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಗೆಲವು

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News