ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ಜಿ. ಸತ್ಯವತಿ ಪ್ರಮಾಣವಚನ ಸ್ವೀಕಾರ
ಲೋಕಭವನದಲ್ಲಿ ಸೋಮವಾರ ನಡೆದ ಸರಳ ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಜಿ. ಸತ್ಯವತಿ ಅವರು ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಆಯುಕ್ತರಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್, ಇಂಧನ ಸಚಿವ ಕೆ.ಜೆ. ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಮಾಹಿತಿ ಆಯೋಗದ ಆಯುಕ್ತರುಗಳು ಉಪಸ್ಥಿತರಿದ್ದರು. ನೂತನ ಮುಖ್ಯ ಆಯುಕ್ತರಿಗೆ ಎಲ್ಲರೂ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು.



Comments
Leave a Comment