ನಮ್ಮದು ಜನಪರ ಸರಕಾರ ಎನ್ನುವುದಕ್ಕೆ ಫಲಿತಾಂಶ ಸಾಕ್ಷಿ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Belagavi:

Font size:

ನಮ್ಮದು ಜನಪರ ಸರಕಾರ ಎನ್ನುವುದಕ್ಕೆ ಫಲಿತಾಂಶ ಸಾಕ್ಷಿ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನಮ್ಮದು ಜನಪರ ಸರಕಾರ ಎನ್ನುವುದಕ್ಕೆ ಫಲಿತಾಂಶ ಸಾಕ್ಷಿ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ:
ಕರ್ನಾಟಕದಲ್ಲಿ ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಕೇವಲ ಘೋಷಣೆಗಳಲ್ಲ, ಜನರ ದಿನನಿತ್ಯದ ಬದುಕಿಗೆ ನಿಜವಾದ ಬೆಂಬಲವಾಗಿ ಪರಿಣಮಿಸಿವೆ. ಜನರ ಕಷ್ಟ, ನೋವು, ಅಗತ್ಯಗಳಿಗೆ ಸ್ಪಂದಿಸಿದ ನಮ್ಮ ಸರ್ಕಾರಕ್ಕೆ ಜನರು ಇದೀಗ ಉಪಚುನಾವಣೆ ಫಲಿತಾಂಶಗಳ ಮೂಲಕ ಸ್ಪಷ್ಟವಾದ ಮನ್ನಣೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು,
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಜನರು ನಮ್ಮ ಜನಪರ ಆಡಳಿತವನ್ನು ಸ್ವೀಕರಿಸಿರುವುದಕ್ಕೆ ಸ್ಪಷ್ಟ ಉದಾಹರಣೆ. ಇದು ಕೇವಲ ರಾಜಕೀಯ ಗೆಲುವಲ್ಲ, ಜನ ವಿಶ್ವಾಸದ ಗೆಲುವಾಗಿದೆ ಎಂದಿದ್ದಾರೆ.

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮನೆಮನೆಗೂ ತಲುಪಿ, ಮಹಿಳೆಯರು, ಯುವಕರು, ಬಡವರು, ರೈತರು ಸೇರಿದಂತೆ ಪ್ರತಿಯೊಂದು ವರ್ಗದ ಜನರಿಗೆ ಸಹಾಯವಾಗಿವೆ. ಇದೇ ಕಾರಣಕ್ಕೆ ಜನರು ಕಾಂಗ್ರೆಸ್ ಪಕ್ಷದ ಪರವಾಗಿ ನಿಂತಿದ್ದಾರೆ.
ಬಿಜೆಪಿಯ ವಿರುದ್ಧ ಜನರು ಸ್ಪಷ್ಟ ಸಂದೇಶ ನೀಡಿದ್ದಾರೆ. ಸುಳ್ಳು ಪ್ರಚಾರ ಮತ್ತು ಜನವಿರೋಧಿ ನೀತಿಗಳಿಗೆ ಕರ್ನಾಟಕದ ಜನರು ತಕ್ಕ ಉತ್ತರ ನೀಡಿದ್ದಾರೆ ಎಂದು ಹೆಬ್ಬಾಳಕರ್ ಹೇಳಿದ್ದಾರೆ.

ಇದು ನಮ್ಮ ಸರ್ಕಾರದ ಕೆಲಸಕ್ಕೆ ಸಿಕ್ಕಿರುವ ಜನರ ಸರ್ಟಿಫಿಕೇಟ್. ಮುಂದೆಯೂ ಇದೇ ರೀತಿಯಾಗಿ ಜನಪರ ಯೋಜನೆಗಳನ್ನು ಇನ್ನಷ್ಟು ಬಲಪಡಿಸಿ, ಜನರ ವಿಶ್ವಾಸವನ್ನು ಉಳಿಸಿಕೊಂಡು ಸಾಗುವುದು ನಮ್ಮ ಬದ್ಧತೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

Comments

Leave a Comment

Prev Post ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ಜಿ. ಸತ್ಯವತಿ ಪ್ರಮಾಣವಚನ ಸ್ವೀಕಾರ
Next Post ಪಶ್ಚಿಮ ಬಂಗಾಲ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಗೆಲುವು ಒಂದು ಕಡೆ ನರೇಂದ್ರ ಮೋದಿಜೀ ಅವರ ನಾಯಕತ್ವಕ್ಕೆ ದೊಡ್ಡ ಶಕ್ತಿ;ಬಿ.ವೈ.ವಿಜಯೇಂದ್ರ ವಿಶ್ಲೇಷಣೆ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News