06.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದೊಂದಿಗೆ ಸಂಜೆ, ರಾತ್ರಿ ವೇಳೆ ಚಲಿಸುವ ಮೋಡಗಳಿಂದ ಅಲ್ಲಲ್ಲಿ ಸಣ್ಣ ವ್ಯಾಪ್ತಿಯಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೇ 8 ರಂದು ಮಳೆಯ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಒಂದೆರಡು ಕಡೆ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮೇ 7ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮೇ 7ರಂದು ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಮೇ 9ರ ಸುಮಾರಿಗೆ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಇದಕ್ಕೆ ನೇರವಾಗಿ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ಈಗಾಗಲೇ ವಾಯುಭಾರ ಕುಸಿತ ಉಂಟಾಗಿದ್ದು, ಇವೆರಡೂ ಪಶ್ಚಿಮಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ. ಹಾಗೇನಾದರು ಸಂಭವಿಸಿದರೆ ಮುಂಗಾರು ನಿರೀಕ್ಷೆಗಿಂತ ಮೋದಲೆ ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ಕಡಿಮೆಯಾಗಿ ತಡವಾಗಬಹುದು. ಪರಿಸ್ಥಿತಿ ಕಾದು ನೋಡಬೇಕಾಗಿದೆ.
ಈಗಾಗಲೇ ಎಲ್ ನಿನೋ ಕಾರಣದಿಂದ ಮುಂಗಾರು ದುರ್ಬಲವಾಗಿರುವ ವರದಿಗಳಿವೆ







Comments
Leave a Comment