PRABHAVAA.COM

ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು

Mysuru:

Font size:

ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು

ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಮೇ 06: ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು, ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮೆಚ್ಚಿಕೊಂಡಿರುವುದನ್ನು ಸೂಚಿಸುತ್ತದೆ .ವಿಪಕ್ಷಗಳ ಯಾವುದೇ ತಂತ್ರಗಾರಿಕೆ ನಡೆಯುವುದಿಲ್ಲ. ಅವರು ಕೇವಲ ಕುತಂತ್ರಗಳನ್ನಷ್ಟೇ ಮಾಡುತ್ತಾರೆ ಎಂದರು.

ಸಿಎಂ ಬದಲಾವಣೆ-ವರಿಷ್ಠರ ತೀರ್ಮಾನಕ್ಕೆ ಬದ್ಧ

ಮುಖ್ಯಮಂತ್ರಿ ಬದಲಾವಣೆ ವಿಷಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷದ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ. ಸಿಎಂ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ವರಿಷ್ಠರ ಭೇಟಿಗೆ ಕರೆ ಬಂದರೆ ನವದೆಹಲಿಗೆ ತೆರಳುವುದಾಗಿ ತಿಳಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ

ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವ ಬಗ್ಗೆ ಉತ್ತರಿಸಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಧ್ಯದಲ್ಲಿಯೇ ನಡೆಸಲಾಗುವುದು ಎಂದರು.

ಶೃಂಗೇರಿ ಚುನಾವಣಾ ಫಲಿತಾಂಶ-ಬಿಜೆಪಿಯಿಂದ ಕ್ರಿಮಿನಲ್ ಸಂಚು

ಶೃಂಗೇರಿಯ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿ, ಮತಎಣಿಕೆ ವಿಚಾರದಲ್ಲಿ ಬಿಜೆಪಿ ಕ್ರಿಮಿನಲ್ ಸಂಚು ನಡೆಸಿದೆ. ರಾಜೇಗೌಡರಿಗೆ ಬಿದ್ದಿದ್ದ 255 ಅರ್ಹವಾಗಿದ್ದ ಮತಗಳನ್ನು ಅನರ್ಹ ಮಾಡಲಾಗಿದೆ. ಮತ ಎಣಿಕೆಯಾಗುವಾಗ ಬಿಜೆಪಿ ಸರ್ಕಾರವಿತ್ತು. ಬಿಜೆಪಿಯವರು ಮತ್ತು ಸಿಬ್ಬಂದಿ ಮೂಲಕ ಮತಪತ್ರಗಳನ್ನು ತಿದ್ದಲಾಗಿದ್ದು, ಇದು ಕ್ರಿಮಿನಲ್ ಸಂಚು. ಆದ್ದರಿಂದ ಶೃಂಗೇರಿ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದರು.

ರೈಲ್ವೆ ಇಲಾಖೆಯ ಹುದ್ದೆಗಳಿಗೆ ಕನ್ನಡಿಗರನ್ನು ಪರಿಗಣಿಸಲಾಗುತ್ತಿಲ್ಲ, ರಾಜ್ಯಸರ್ಕಾರ ಇದರಲ್ಲಿ ಮಧ್ಯಪ್ರವೇಶಿಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿ, ಈ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ನಡೆಸುತ್ತಿದ್ದು, ಈ ನಡವಳಿಕೆಯು ಕನ್ನಡಿಗರ ಪರ ಅವರ ಧೋರಣೆಯನ್ನು ಬಿಂಬಿಸುತ್ತದೆ ಎಂದರು.

Comments

Leave a Comment

Prev Post 06.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
Next Post ಶಾಸಕರಿಗೆ ಟಿಕೆಟ್ ವಿತರಣೆಗೂ ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News