PRABHAVAA.COM

ಪ್ರಧಾನಿ ಕರೆ ದೂರದೃಷ್ಟಿಯ ಕ್ರಮ: ಬಿಜೆಪಿ

Dakshina Kannada:

Font size:

ಪ್ರಧಾನಿ ಕರೆ ದೂರದೃಷ್ಟಿಯ ಕ್ರಮ: ಬಿಜೆಪಿ

from : Jayaram Udupi

ಮಂಗಳೂರು,
ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಮಾಡಿರುವ ಮನವಿಗಳು ಭಾರತದ ಆರ್ಥಿಕತೆಯನ್ನು ಮತ್ತಷ್ಟ ಬಲಿಷ್ಠ, ಸ್ವಾವಲಂಬಿ ಹಾಗೂ ಭವಿಷ್ಯೋನ್ಮುಖವಾಗಿಸುವ ದೂರದೃಷ್ಟಿಯ ಕ್ರಮಗಳಾಗಿವೆ ಎಂದು ಭಾರತೀಯ ಜನತಾ ಪಾರ್ಟಿ ಹೇಳಿದೆ.

ಮಂಗಳೂರಿನಲ್ಲಿ ಇಂದು‌ ಸುದ್ದಿಗೋಷ್ಠಿ ನಡೆಸಿದ ಆರ್ಥಿಕ ಪ್ರಕೋಷ್ಠ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಸಿ. ಎ. ಎಸ್. ಎಸ್. ನಾಯಕ್ ಈ ಅಭಿಪ್ರಾಯ‌ ವ್ಯಕ್ತಪಡಿಸಿದರು.

ಪ್ರಧಾನಿ ಘೋಷಣೆಗಳ ಹಿಂದೆ ಇಂಧನ ಉಳಿತಾಯ, ಅನಗತ್ಯ ಆಮದು ಕಡಿತ ಹಾಗೂ ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ ನೀಡುವ ಉದ್ದೇಶವಿದ್ದು, ಇದರಿಂದ ವಿದೇಶಿ ವಿನಿಮಯ ಸಂಗ್ರಹ ಬಲವಾಗುವ ಜೊತೆಗೆ ದೇಶೀಯ ಕೈಗಾರಿಕೆಗಳಿಗೆ ಅವಕಾಶಗಳು ಹೆಚ್ಚಲಿವೆ ಎಂದರು.

ಭಾರತದ ವಿದೇಶಿ ವಿನಿಮಯ ಮೀಸಲು ಸುಮಾರು 700 ಬಿಲಿಯನ್ ಡಾಲರ್ ಮಟ್ಟದಲ್ಲಿದ್ದು, ಇದು 11 ತಿಂಗಳ ಆಮದು ಅಗತ್ಯಗಳನ್ನು ನಿಭಾಯಿಸಲು ಸಾಕಾಗುತ್ತದೆ ಎಂದು ಹೇಳಿದರು.

“ಲೋಕಲ್ ಟು ಗ್ಲೋಬಲ್” ಕರೆ ಆತ್ಮನಿರ್ಭರ ಭಾರತ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡಲಿದ್ದು, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ಮತ್ತು ಉದ್ಯೋಗಾವಕಾಶ ವೃದ್ಧಿಗೆ ಕಾರಣವಾಗಲಿದೆ ಎಂದೂ‌ ನಾಯಕ್ ಅಭಿಪ್ರಾಯಪಟ್ಟರು.

ವರ್ಕ್ ಫ್ರಮ್ ಹೋಮ್ ಹಾಗೂ ಹೈಬ್ರಿಡ್ ವರ್ಕ್ ಮಾದರಿಯಿಂದ ಟ್ರಾಫಿಕ್ ಒತ್ತಡ ಮತ್ತು ಇಂಧನ ಬಳಕೆ ಕಡಿಮೆಯಾಗಲಿದ್ದು, ಪರಿಸರ ಸಂರಕ್ಷಣೆಯ ಜೊತೆಗೆ ಉದ್ಯೋಗಿಗಳ ಜೀವನಮಟ್ಟ ಸುಧಾರಣೆಯಾಗಲಿದೆ ಎಂದು ತಿಳಿಸಿದರು.

ಸೆಮಿಕಂಡಕ್ಟರ್, ವಿದ್ಯುತ್ ವಾಹನ, ನವೀಕರಿಸಬಹುದಾದ ಇಂಧನ, ರಕ್ಷಣಾ ಉತ್ಪಾದನೆ, ಕೃತಕ ಬುದ್ಧಿಮತ್ತೆ ಹಾಗೂ ಡಿಜಿಟಲ್ ಆರ್ಥಿಕತೆ ಕ್ಷೇತ್ರಗಳಲ್ಲಿ ಭಾರತ ವೇಗವಾಗಿ ಬೆಳೆಯುತ್ತಿದ್ದು, ಯುಪಿಐ ಮೂಲಕ ವಿಶ್ವದ ಅತಿದೊಡ್ಡ ಡಿಜಿಟಲ್ ಪಾವತಿ ವ್ಯವಸ್ಥೆಯಾಗಿ ಹೊರಹೊಮ್ಮಿದೆ ಎಂದರು.

ಭಾರತ ಜಾಗತಿಕ ಮಟ್ಟದಲ್ಲಿ “ಭವಿಷ್ಯದ ಬೆಳವಣಿಗೆಯ ಎಂಜಿನ್” ಆಗಿ ಗುರುತಿಸಿಕೊಂಡಿದ್ದು, ಯುವಜನರ ಶಕ್ತಿ ದೇಶವನ್ನು ತಂತ್ರಜ್ಞಾನ ಮತ್ತು ಉತ್ಪಾದನಾ ಕ್ಷೇತ್ರಗಳಲ್ಲಿ ಮುಂಚೂಣಿಗೆ ತರುತ್ತಿದೆ ಎಂದು ಹೇಳಿದರು.

“ಪ್ರಧಾನಿಯವರ ಘೋಷಣೆ ಸಂಕಷ್ಟದ ಸೂಚನೆ ಅಲ್ಲ; ಜವಾಬ್ದಾರಿಯುತ ನಾಯಕತ್ವದ ಸಂಕೇತ” ಎಂದು ಹೇಳಿದ ಅವರು, ಇದು ದೇಶದ ಆರ್ಥಿಕ ಭದ್ರತೆ ಮತ್ತು ದೀರ್ಘಕಾಲೀನ ಅಭಿವೃದ್ಧಿಗೆ ಪೂರಕವಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಇಂಜಿನಿಯರ್ ಜಿ. ಯೋಗೀಶ್ ಪೈ, ರಾಜೇಶ್ ರಾವ್ ಎಂ., ಸಿ. ಎ. ಶ್ರೀಕೃಷ್ಣ ಭಟ್, ವಸಂತ ಶೆಟ್ಟಿ, ರಘುನಾಥ್ ಪೈ ಹಾಗೂ ಡಾ. ಎಸ್. ಎಂ. ಶಿವಪ್ರಕಾಶ್ ಉಪಸ್ಥಿತರಿದ್ದರು.

Comments

Leave a Comment

Prev Post ರಾಜ್ಯ ಸರ್ಕಾರವು ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಿದೆ
Next Post “ಪ್ರಧಾನಿ ಮೋದಿ ಅಧಿಕಾರ ತ್ಯಜಿಸಿದರೆ ಜನರಿಗೆ ಸುಖ ಸಿಗುತ್ತದೆ”;ಮಾಜಿ ಸಚಿವ ಬಿ. ರಮಾನಾಥ ರೈ ವ್ಯಂಗ್ಯ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News