PRABHAVAA.COM

ಮೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಜಂಟಿ ಕ್ರಿಯಾ ಸಮಿತಿ ಕರೆ

Bengaluru Urban:

Font size:

ಮೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಜಂಟಿ ಕ್ರಿಯಾ ಸಮಿತಿ ಕರೆ

ಬೆಂಗಳೂರು, ಮೇ 13 -ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಏಪ್ರಿಲ್ 29ರಂದು ಸಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೌಕರರ ಪ್ರಮುಖ ಬೇಡಿಕೆಗಳಾದ 38 ತಿಂಗಳ ಅರಿಯರ್ಸ್ ಹಣದಲ್ಲಿ 26 ತಿಂಗಳ ಬಾಕಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿದ್ದರೂ ಉಳಿದ 12 ತಿಂಗಳ ಬಾಕಿ ಹಣ ಪಾವತಿಸಬೇಕೆಂದು ಒತ್ತಾಯಿಸಲಾಗಿತ್ತು. ಜೊತೆಗೆ 2024ರ ಜನವರಿ 1ರಿಂದ ನಾಲ್ಕು ವರ್ಷಗಳ ಅವಧಿಗೆ ಮೂಲ ವೇತನದ ಶೇ.25ರಷ್ಟು ಹೆಚ್ಚಳ ಮಾಡಬೇಕೆಂದು ಬೇಡಿಕೆ ಇಟ್ಟಿದ್ದರು. ಆದರೆ ಸರ್ಕಾರವು ಮೇ 12ರಂದು ಏಕಪಕ್ಷೀಯವಾಗಿ ಮೂಲ ವೇತನದ ಶೇ.12.5ರಷ್ಟು ಹೆಚ್ಚಳವನ್ನು 2025ರ ಏಪ್ರಿಲ್ 1ರಿಂದ ಜಾರಿಗೊಳಿಸುವ ಆದೇಶ ಹೊರಡಿಸಿದ್ದು, ಇದನ್ನು ಜಂಟಿ ಕ್ರಿಯಾ ಸಮಿತಿ ತೀವ್ರವಾಗಿ ಖಂಡಿಸಿದೆ.

ಸಮಿತಿಯು ಸರ್ಕಾರದ ಕ್ರಮವು ಸಾರಿಗೆ ನೌಕರರಿಗೆ ತೀವ್ರ ಆರ್ಥಿಕ ನಷ್ಟ ಉಂಟುಮಾಡುವುದರ ಜೊತೆಗೆ ಸಂವಿಧಾನಬದ್ಧ ಹಕ್ಕುಗಳಿಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿದೆ. ಸರ್ಕಾರಿ ನೌಕರರಿಗೆ 27.5% ವೇತನ ಹೆಚ್ಚಳ ನೀಡಿದರೂ ಸಾರಿಗೆ ನೌಕರರ ವಿಷಯದಲ್ಲಿ ತಾರತಮ್ಯ ತೋರಿರುವುದು ಖಂಡನೀಯ ಎಂದು ಸಂಘಟನೆಗಳು ಹೇಳಿವೆ. ಬೇಡಿಕೆಗಳಲ್ಲಿ 2024ರ ಜನವರಿ 1ರಿಂದ ಶೇ.25ರಷ್ಟು ವೇತನ ಹೆಚ್ಚಳ ಜಾರಿಗೊಳಿಸುವುದು, 2022ರ ಜುಲೈ 1ರ ತುಟ್ಟಿ ಭತ್ಯೆಯನ್ನು ಮೂಲ ವೇತನದಲ್ಲಿ ವಿಲೀನಗೊಳಿಸುವುದು, ಬಾಟಾ ಹಾಗೂ ಇತರ ಭತ್ಯೆಗಳನ್ನು ಹೆಚ್ಚಿಸುವುದು, 2020ರ ಜನವರಿ 1ರಿಂದ ಡಿಸೆಂಬರ್ 31ರವರೆಗಿನ ಬಾಕಿ ಹಣ ಪಾವತಿಸುವುದು, 26 ತಿಂಗಳ ಬಾಕಿ ಹಣ 1272 ಕೋಟಿ ರೂಪಾಯಿಗಳನ್ನು ಒಂದೇ ಕಂತಿನಲ್ಲಿ ಪಾವತಿಸುವುದು ಹಾಗೂ ಫಾರಂ-4 ಸೇರಿದಂತೆ ಇತರ ಬೇಡಿಕೆಗಳನ್ನು ಒಂದು ತಿಂಗಳೊಳಗೆ ಬಗೆಹರಿಸುವುದು ಸೇರಿವೆ.

ಸರ್ಕಾರವು ಹಠಮಾರಿ ಧೋರಣೆಯನ್ನು ಕೈಬಿಟ್ಟು ಆದೇಶಗಳನ್ನು ಹಿಂಪಡೆದು, ಜಂಟಿ ಕ್ರಿಯಾ ಸಮಿತಿಯೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸದಿದ್ದರೆ ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ ಎಂದು ಸಂಘಟನೆಗಳು ಎಚ್ಚರಿಸಿವೆ.

ಕ.ರಾ.ರ.ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ

ಕೆ.ಎಸ್.ಆರ್.ಟಿ.ಸಿ.ಸ್ಟಾಫ್ ಅಂಡ್ ವರ್ಕಸ್್ರ ಫೆಡರೇಷನ್, (ಎ.ಐ.ಟಿ.ಯು.ಸಿ)

ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್ (ಸಿ.ಐ.ಟಿ.ಯು)

ಕೆ.ಎಸ್.ಆರ್.ಟಿ.ಸಿ.ಪ.ಜಾ ಮತ್ತು ಪ.ಪಂ.ನೌಕರರ ಸಂಘ (40/78)

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ.ಜಾ/ಪ.ಪಂ.ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ) (671/2001)

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ (ರಿ)

ವಿಶ್ವಕಾರ್ಮಿಕರ ಕೂಟ (ನೋಂ) ಸಾರಿಗೆ ನಿಗಮಗಳ ನೌಕರರ ವಲಯ

Comments

Leave a Comment

Prev Post “ಪ್ರಧಾನಿ ಮೋದಿ ಅಧಿಕಾರ ತ್ಯಜಿಸಿದರೆ ಜನರಿಗೆ ಸುಖ ಸಿಗುತ್ತದೆ”;ಮಾಜಿ ಸಚಿವ ಬಿ. ರಮಾನಾಥ ರೈ ವ್ಯಂಗ್ಯ
Next Post ಸ್ಪೀಕರ್ ಯು.ಟಿ. ಖಾದರ್‌ಗೆ ಮುತ್ತಿಗೆ ಆರೋಪ: 11 ಮಂದಿ ವಿರುದ್ಧ ಪ್ರಕರಣ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News