ಸ್ಪೀಕರ್ ಯು.ಟಿ. ಖಾದರ್‌ಗೆ ಮುತ್ತಿಗೆ ಆರೋಪ: 11 ಮಂದಿ ವಿರುದ್ಧ ಪ್ರಕರಣ
From Jayaram Udupi
ಸ್ಪೀಕರ್ ಯು.ಟಿ. ಖಾದರ್‌ಗೆ ಮುತ್ತಿಗೆ ಆರೋಪ: 11 ಮಂದಿ ವಿರುದ್ಧ ಪ್ರಕರಣ
ಮಂಗಳೂರು, ಮೇ 13: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಆರೋಪದಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 11 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಕೆಲ ದಿನಗಳ ಹಿಂದೆ ಉಳ್ಳಾಲ ತಾಲೂಕಿನ ಕುತ್ತಾರ್ ಪ್ರದೇಶಕ್ಕೆ ಭೇಟಿ ನೀಡಿದ್ದ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಸ್ಥಳೀಯರು ವೃತ್ತ ನಿರ್ಮಾಣ ಹಾಗೂ ಇತರ ಸಮಸ್ಯೆಗಳ ಕುರಿತು ಪ್ರಶ್ನಿಸಿ ತಡೆದ ಘಟನೆ ನಡೆದಿತ್ತು.
ಸ್ಪೀಕರ್ ಅವರ ವಾಹನವನ್ನು ತಡೆದು ಅಸಭ್ಯವಾಗಿ ವರ್ತಿಸಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯ ವೇಳೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಈ ಸಂಬಂಧ ಸ್ಪೀಕರ್ ಅವರ ಅಂಗರಕ್ಷಕ ಮೊಹಮ್ಮದ್ ಯಾಸಿನ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಒಬ್ಬರನ್ನು ಮುಖ್ಯ ಆರೋಪಿಯನ್ನಾಗಿ ಗುರುತಿಸಲಾಗಿದ್ದು, ಅವರೊಂದಿಗೆ ಇದ್ದರೆನ್ನಲಾದ ಇನ್ನೂ 10 ಮಂದಿಯ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ಜನಪ್ರತಿನಿಧಿಯ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಹಾಗೂ ನಿಯಮ ಉಲ್ಲಂಘಿಸಿ ಗುಂಪುಗೂಡಿದ ಆರೋಪಗಳಡಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.





Comments
Leave a Comment