PRABHAVAA.COM

ನಾಗಮೋಹನ್ ದಾಸ್ ಸಮಿತಿ ವರದಿ ಆಧಾರದಲ್ಲಿ ಅಕ್ರಮ ಮತ್ತು ನಿರ್ಲಕ್ಷ್ಯಕ್ಕೆ ಕಾರಣ ಕೇಳುವ ನೋಟಿಸ್, ಬೆಂಗಳೂರು GBA ಇಂಜಿನಿಯರಿಂಗ್ ವಿಭಾಗದ 310 ಅಧಿಕಾರಿಗಳ ವಿರುದ್ಧ ಕ್ರಮ ಆರಂಭ.

Bengaluru Urban:

Font size:

ನಾಗಮೋಹನ್ ದಾಸ್ ಸಮಿತಿ ವರದಿ ಆಧಾರದಲ್ಲಿ ಅಕ್ರಮ ಮತ್ತು ನಿರ್ಲಕ್ಷ್ಯಕ್ಕೆ ಕಾರಣ ಕೇಳುವ ನೋಟಿಸ್, ಬೆಂಗಳೂರು GBA ಇಂಜಿನಿಯರಿಂಗ್ ವಿಭಾಗದ 310 ಅಧಿಕಾರಿಗಳ ವಿರುದ್ಧ ಕ್ರಮ ಆರಂಭ.

ಬೆಂಗಳೂರು, ಮೇ 14: ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಪ್ರಕ್ರಿಯೆ ಮತ್ತೊಮ್ಮೆ ಸಿಕ್ಕಿದ್ದು ಹಳೆಯ ಆದೇಶಕ್ಕೆ ಸಂಬಂಧಿಸಿದಂತೆ ಉತ್ತರ ನೀಡದ ಅಧಿಕಾರಿಗಳ ವಿರುದ್ಧ ಹೊಸ ಆದೇಶ ಹೊರಡಿಸಿ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.

ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳ ವಿರುದ್ಧ ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಲು ಆರಂಭಿಸಿದೆ. ಹಳೆಯ ಆದೇಶ ಸಂಖ್ಯೆ 400 MNU2024 (8.7.2025) ಆಧಾರದ ಮೇಲೆ ಕಾರಣ ಕೇಳುವ ನೋಟಿಸ್ ನೀಡಲಾಗಿದ್ದರೂ, ಅಧಿಕಾರಿಗಳು ಇದುವರೆಗೆ ಯಾವುದೇ ಉತ್ತರ ನೀಡದ ಕಾರಣ ಇದೀಗ ಹೊಸ ಆದೇಶ ಸಂಖ್ಯೆ B12(6)/213/19‑20/2026‑27 ಮೂಲಕ ಕ್ರಮ ಕೈಗೊಳ್ಳಲಾಗಿದೆ.

ಈ ಕ್ರಮದಲ್ಲಿ ಗಾಂಧಿನಗರ ವಿಭಾಗದ 133 ಅಧಿಕಾರಿಗಳು, ಮಲ್ಲೇಶ್ವರಂ ವಿಭಾಗದ 94 ಅಧಿಕಾರಿಗಳು ಹಾಗೂ ರಾಜರಾಜೇಶ್ವರಿ ವಿಭಾಗದ 83 ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ನಾಗಮೋಹನ್ ದಾಸ್ ಸಮಿತಿಯ ವರದಿ ಆಧಾರದ ಮೇಲೆ ಈ ನೋಟಿಸ್‌ಗಳು ಹೊರಡಿಸಲ್ಪಟ್ಟಿದ್ದು, ವರದಿಯಲ್ಲಿ ಉಲ್ಲೇಖಿಸಿರುವ ಅಕ್ರಮ, ನಿರ್ಲಕ್ಷ್ಯ ಹಾಗೂ ಆಡಳಿತಾತ್ಮಕ ದೋಷಗಳ ಬಗ್ಗೆ ಸ್ಪಷ್ಟನೆ ನೀಡಲು ಸೂಚಿಸಲಾಗಿದೆ. ಅಧಿಕಾರಿಗಳು ನಿಗದಿತ ಅವಧಿಯೊಳಗೆ ಉತ್ತರ ನೀಡದಿದ್ದರೆ, ಮುಂದಿನ ಹಂತದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ಈ ಕ್ರಮವು ನಗರ ಆಡಳಿತದಲ್ಲಿ ಪಾರದರ್ಶಕತೆ ತರಲು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವನ್ನು ತಡೆಯಲು ಸರ್ಕಾರ ಕೈಗೊಂಡಿರುವ ಗಂಭೀರ ಹೆಜ್ಜೆಯಾಗಿದೆ. ಅಧಿಕಾರಿಗಳ ವಿರುದ್ಧದ ಕ್ರಮಗಳು ಮುಂದಿನ ದಿನಗಳಲ್ಲಿ ಸಸ್ಪೆನ್ಷನ್, ವರ್ಗಾವಣೆ ಅಥವಾ ಸೇವೆಯಿಂದ ವಜಾ ರೂಪದಲ್ಲಿ ಜಾರಿಯಾಗುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ.

ಹಳೆಯ ಆದೇಶ ಸಂಖ್ಯೆ 400 MNU2024 ದಿನಾಂಕ 8.7.2025 ಮೂಲಕ ಕೆಲವು ಅಧಿಕಾರಿಗಳ ವಿರುದ್ಧ ಕಾರಣ ಕೇಳುವ ನೋಟಿಸ್ ನೀಡಲಾಗಿತ್ತು. ಈ ಆದೇಶದಲ್ಲಿ, ನಾಗಮೋಹನ್ ದಾಸ್ ಸಮಿತಿಯ ವರದಿ ಆಧಾರದ ಮೇಲೆ ಇಂಜಿನಿಯರಿಂಗ್ ವಿಭಾಗದಲ್ಲಿ ನಡೆದ ಅಕ್ರಮ, ನಿರ್ಲಕ್ಷ್ಯ ಹಾಗೂ ಆಡಳಿತಾತ್ಮಕ ದೋಷಗಳ ಬಗ್ಗೆ ಅಧಿಕಾರಿಗಳಿಂದ ಸ್ಪಷ್ಟನೆ ಪಡೆಯಲು ಸೂಚಿಸಲಾಗಿತ್ತು. ಆದರೆ ಅಧಿಕಾರಿಗಳು ನಿಗದಿತ ಅವಧಿಯೊಳಗೆ ಯಾವುದೇ ಉತ್ತರ ನೀಡದ ಕಾರಣ, ಹೊಸ ಆದೇಶ ಸಂಖ್ಯೆ B12(6)/213/19‑20/2026‑27 ಹೊರಡಿಸಲಾಗಿದೆ.

Comments

Leave a Comment

Prev Post 400 ಪಾಯಿಂಟ್ ರೋಸ್ಟರ್ ಮೀಸಲಾತಿ ವ್ಯವಸ್ಥೆ ಜಾರಿಗೆ, ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಬಲ;ಕರ್ನಾಟಕ ಸರ್ಕಾರದ ಹೊಸ ಆದೇಶ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News