PRABHAVAA.COM

ನೀಟ್‑ಯುಜಿ 2026 ರದ್ದತಿ — ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೇಂದ್ರದ ಕ್ರೂರ ದ್ರೋಹ: ಸಿಎಂ ಸಿದ್ದರಾಮಯ್ಯ

Bengaluru Urban:

Font size:

ನೀಟ್‑ಯುಜಿ 2026 ರದ್ದತಿ — ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೇಂದ್ರದ ಕ್ರೂರ ದ್ರೋಹ: ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ

ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ 2026’ ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ ಕ್ರೂರ ದ್ರೋಹವಾಗಿದೆ.

ಕರ್ನಾಟಕದ ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸೇರಿದಂತೆ ದೇಶದ 22 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಶ್ರಮಪಟ್ಟು ಈ ಪರೀಕ್ಷೆ ಬರೆದಿದ್ದರು. ಪೋಷಕರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ತರಬೇತಿ, ಪ್ರಯಾಣ ಸೇರಿದಂತೆ ಸಾಕಷ್ಟು ಖರ್ಚುಗಳನ್ನು ಮಾಡಿದ್ದರು. ಆದರೆ ಕೇಂದ್ರದ ಒಂದು ನಿರ್ಧಾರ ಇಡೀ ವಿದ್ಯಾರ್ಥಿ ಸಮುದಾಯವನ್ನು ಅನಿಶ್ಚಿತತೆ ಮತ್ತು ಸಂಕಷ್ಟಕ್ಕೆ ತಳ್ಳಿದೆ.

2024ರಲ್ಲೇ ನಮ್ಮ ಸರ್ಕಾರವು ನೀಟ್ ಪರೀಕ್ಷೆಯು ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತದೆ. ಶಾಲಾ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಮತ್ತು ದಾಖಲಾತಿ ವಿಚಾರದಲ್ಲಿ ರಾಜ್ಯಗಳ ಅಧಿಕಾರವನ್ನು ಕಸಿದುಕೊಳ್ಳುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿ, ಸದನ ನಿರ್ಣಯ ಕೈಗೊಂಡಿದ್ದೆವು. ಅಂದಿನ ನಮ್ಮ ಕಾಳಜಿ ಎಷ್ಟು ಸತ್ಯ ಮತ್ತು ಅನಿವಾರ್ಯವಾಗಿತ್ತು ಎನ್ನುವುದನ್ನು ಇಂದಿನ ಪರೀಕ್ಷಾ ರದ್ದತಿಯು ಸಾಬೀತುಪಡಿಸಿದೆ.

ನೇಮಕಾತಿ ಪರೀಕ್ಷೆಗಳಿಂದ ಹಿಡಿದು ರಾಷ್ಟ್ರೀಯ ಪ್ರವೇಶ ಪರೀಕ್ಷೆಗಳವರೆಗೆ ಪೇಪರ್ ಲೀಕ್ ಪ್ರಕರಣಗಳು ಪ್ರತಿಭಾವಂತ ವಿದ್ಯಾರ್ಥಿಗಳ ಹಿತ ರಕ್ಷಣೆಯಲ್ಲಿ ನರೇಂದ್ರ ಮೋದಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿವೆ. ಹೊಣೆ ಹೊರಬೇಕಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮಾಧ್ಯಮಗಳಿಂದ ದೂರ ಉಳಿದಿದ್ದಾರೆ. ಯುವಜನತೆಯ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲದ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತೇನೆ.

ಈ ಬಗ್ಗೆ ಪಾರದರ್ಶಕ, ಕಾಲಮಿತಿಯ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಹೊಸ ಪರೀಕ್ಷಾ ವೇಳಾಪಟ್ಟಿಯ ಬಗ್ಗೆ ಕೂಡಲೇ ಸ್ಪಷ್ಟನೆ ನೀಡಬೇಕು ಮತ್ತು ಅಂತಹ ಪ್ರವೇಶ ಪರೀಕ್ಷೆಗಳನ್ನು ನಡೆಸುವ ರಾಜ್ಯಗಳ ಅಧಿಕಾರವನ್ನು ಪುನಃಸ್ಥಾಪಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ.

ಪೇಪರ್ ಲೀಕ್‌ನಿಂದ ತೊಂದರೆಗೀಡಾಗಿರುವ ಪ್ರತಿಯೊಬ್ಬ ವಿದ್ಯಾರ್ಥಿ ಮತ್ತು ಪೋಷಕರ ಜೊತೆ ನಾವಿದ್ದೇವೆ. ಅವರ ಪರಿಶ್ರಮಕ್ಕೆ ತಕ್ಕ ಫಲ ಸಿಗುವಂತೆ ಮಾಡುವುದು ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವುದು ನಮ್ಮ ಕರ್ತವ್ಯ.

Comments

Leave a Comment

Prev Post ಬಿಡದಿ ಟೌನ್ ಶಿಪ್ ಯೋಜನೆ ವಿರುದ್ಧ ಮತ್ತೆ ದನಿಯೆತ್ತಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
Next Post ಬಾಗ್ಮನೆ ಸಾಧನೆ ದೇಶವೇ ಹೆಮ್ಮೆಪಡುವಂತದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News