PRABHAVAA.COM

ನಮ್ಮನ್ನು ಟೀಕೆ ಮಾಡದಿದ್ದರೆ ಕುಮಾರಸ್ವಾಮಿ ರಾಜಕೀಯವಾಗಿ ಬದುಕಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Bengaluru Urban:

Font size:

ನಮ್ಮನ್ನು ಟೀಕೆ ಮಾಡದಿದ್ದರೆ ಕುಮಾರಸ್ವಾಮಿ ರಾಜಕೀಯವಾಗಿ ಬದುಕಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ನಮ್ಮನ್ನು ಟೀಕೆ ಮಾಡದಿದ್ದರೆ ಕುಮಾರಸ್ವಾಮಿ ರಾಜಕೀಯವಾಗಿ ಬದುಕಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಕುಮಾರಸ್ವಾಮಿ ಅವರೇ ಡಿನೋಟಿಪೈ ಮಾಡಬಹುದಿತ್ತಲ್ಲ, ಯಾಕೆ ಮಾಡಲಿಲ್ಲ?

ರೈತರ ಬಳಿ ಹೋಗಿ ನಾನೇ ಮಾತನಾಡುತ್ತೇನೆ

20 ವರ್ಷಗಳ ಬಳಿಕ ಅವರು ನನ್ನ ಕೆಲಸ ಸ್ಮರಿಸಿಕೊಳ್ಳುತ್ತಾರೆ

ಬೆಲೆ ಏರಿಕೆ ಮೋದಿ ಅವರ ಕೊಡುಗೆ

ಬ್ಯಾನರ್ ಹಾಕಿರುವುದು ಸರಿಯಲ್ಲ, ತೆರವಿಗೆ ಸೂಚಿಸಿರುವೆ

ಬೆಂಗಳೂರು, ಮೇ 15:

"ಕುಮಾರಸ್ವಾಮಿ ಅವರು ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಅವರು ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಕುಮಾರಸ್ವಾಮಿ ಅವರು ಬಿಡದಿ ಟೌನ್ ಶಿಪ್ ಯೋಜನೆಯ ಬಗ್ಗೆ ಟೀಕೆ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, "ಅವರು ಮಾಡಿದ ಯೋಜನೆಯನ್ನೇ ನಾವು ಮುಂದುವರೆಸುತ್ತಾ ಇರುವುದು. ನಾನು ರೈತರ ಬಳಿ ಮಾತನಾಡಲು ಸಮಯ, ದಿನಾಂಕ ನಿಗದಿ ಮಾಡಿಕೊಂಡು ಹೋಗುತ್ತೇನೆ. ರೈತರು ನನಗೆ ಎರಡೇಟು ಹೊಡೆಯಬಹುದು, ಅಷ್ಟೇ ತಾನೇ..? ಬಟ್ಟೆ ಹರಿಯಬಹುದು, ಕಲ್ಲೆಸೆಬಹುದು, ಧಿಕ್ಕಾರ ಹಾಕಬಹುದು. ಅದಕ್ಕೆಲ್ಲಾ ಹೆದರಿಕೊಳ್ಳಲು ಆಗುತ್ತದೆಯೇ? ಮುಂದೆ ಅವರ ಭವಿಷ್ಯ, ಮಕ್ಕಳ ಹಾಗೂ ಆಸ್ತಿಗಳ ಭವಿಷ್ಯ ಮುಖ್ಯ. ಇವತ್ತಲ್ಲ ಮುಂದಿನ 20 ವರ್ಷಗಳ ನಂತರ ಬಿಡದಿ, ಬೆಂಗಳೂರು ದಕ್ಷಿಣದ ಜನರು ನನ್ನನ್ನು ನೆನಪಿಸಿಕೊಳ್ಳುತ್ತಾರೆ" ಎಂದರು.

"ಕುಮಾರಸ್ವಾಮಿ ಅವರೇ ಈ ಯೋಜನೆಯ ಭೂಮಿಯನ್ನು ಡಿನೊಟಿಫೈ ಮಾಡಬಹುದಿತ್ತಲ್ಲವೇ? ಯಾಕೆ ಮಾಡಲಿಲ್ಲ? ನಾನು ಡಿನೋಟಿಫೈ ಮಾಡಲು ತಯಾರಿಲ್ಲ. ಅವರು ಡಿನೋಟಿಫೈ ಮಾಡಿ ಎಷ್ಟು ಅನುಭವಿಸುತ್ತಿದ್ದಾರೆ ಎಂದು ಅವರಿಗೆ ಗೊತ್ತು‌. ಯಡಿಯೂರಪ್ಪ ಅವರಿಗೆ, ನನಗೂ ಗೊತ್ತಿದೆ" ಎಂದು ತಿರುಗೇಟು ನೀಡಿದರು‌.

ಬೆಲೆ ಏರಿಕೆ ಮೋದಿ ಅವರ ಕೊಡುಗೆ

"ಬೆಲೆ ಏರಿಕೆ ಮೋದಿ ಅವರ ಕೊಡುಗೆ. ಅವರು ಬೇರೆ ರಾಷ್ಟ್ರಗಳ ಜೊತೆ ಉತ್ತಮ ಸಂಬಂಧ ಉಳಿಸಿಕೊಂಡು ಬಂದಿಲ್ಲ. ಅಂತರರಾಷ್ಟ್ರೀಯ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಮೋದಿ ಅವರು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಅದಕ್ಕೆ ಅವರು ವಿದ್ಯುತ್ ಉಳಿಸಿ, ಪೆಟ್ರೋಲ್ ಬಳಸಬೇಡಿ ಎಂದು ಹೇಳುತ್ತಿದ್ದಾರೆ. ಇಂಧನಗಳನ್ನು ಬಳಸದೇ ದಿನನಿತ್ಯ ಜೀವನ ಮಾಡುವುದು ಹೇಗೆ. ಅನೇಕರು ತಮ್ಮ ಬೆಂಗಾವಲು ಪಡೆ ವಾಹನಗಳನ್ನು ಕಡಿತ ಮಾಡಿದ್ದಾರೆ. ಇದು ಆಗಬಹುದು. ಆದರೆ ಜನ ಸಾಮಾನ್ಯ ಓಡಾಟ ಮಾಡದೇ ಇರಲು ಹೇಗೆ ಸಾಧ್ಯ. ಬದುಕಿಗಾಗಿ ಪ್ರಯಾಣ ಮಾಡಬೇಕಲ್ಲವೇ? ಚಿನ್ನ‌ ಖರೀದಿ ಮಾಡಬೇಡಿ ಎಂದಿದ್ದಾರೆ ಇದು ಹೇಗೆ ಸಾಧ್ಯ. ವಿವಾಹಿತ ಮಹಿಳೆಯರಿಗೆ ಮಾಂಗಲ್ಯ ಸರ ಬೇಕು.‌ ಹೀಗಿದ್ದಾಗ ಚಿನ್ನ ಕೊಂಡುಕೊಳ್ಳಬೇಡಿ ಎಂಬುದು ಹೇಗೆ ಸಾಧ್ಯ" ಎಂದರು.

"ದೇಶ ದೊಡ್ಡ ದುರಂತದ ಸ್ಥಿತಿಗೆ ಬಂದಿದೆ. ಅಡುಗೆ ಎಣ್ಣೆ ಬಳಸಬೇಡಿ ಎಂದರೆ ಎಲ್ಲಿ ಕಡಿಮೆ ಮಾಡೋಕೆ ಆಗುತ್ತೆ. ಇದೆಲ್ಲಾ ಮಾಡೋಕೆ ಆಗಲ್ಲ. ಜನ ಸಂಪಾದನೆ ಮಾಡುತ್ತಾರೆ ಬದುಕುತ್ತಾರೆ. ಯಾರನ್ನೂ ನಿಯಂತ್ರಣ ಮಾಡೋಕೆ ಆಗಲ್ಲ" ಎಂದರು.

ಕೇರಳ ನೂತನ ಸಿಎಂಗೆ ಶುಭಕೋರುತ್ತೇನೆ

ಕೇರಳಕ್ಕೆ ನೂತನ ಸಿಎಂ ಆಯ್ಕೆಯಾಗಿರುವ ಬಗ್ಗೆ ಕೇಳಿದಾಗ, "ನಾನು ಅವರಿಗೆ ಶುಭಾಶಯ ಕೋರುತ್ತೇನೆ. ಪಕ್ಷದಲ್ಲಿ ಅರ್ಹತೆ ಇರುವ ಅನೇಕ ಹಿರಿಯ ನಾಯಕರು ಇದ್ದಾರೆ‌. ಪಕ್ಷದ ಹೈಕಮಾಂಡ್ ಸತೀಶನ್ ಅವರಿಗೆ ಅವಕಾಶ ನೀಡಿದೆ. ಅವರಿಗೆ ನಾನು ಮನಃಪೂರ್ವಕವಾಗಿ ಶುಭ ಕೋರುತ್ತೇನೆ. ಎಲ್ಲಾ ಮೈತ್ರಿ ಪಕ್ಷಗಳಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ. ಜನರ ಆಶೋತ್ತರಗಳಿಗೆ ಅನುಗುಣವಾಗಿ ಕೆಲಸ ಮಾಡುತ್ತೇವೆ" ಎಂದರು.

ಎಸ್ ಐ ಆರ್ ಕರ್ನಾಟಕಕ್ಕೆ ಕಾಲಿಡುತ್ತಿರುವ ಬಗ್ಗೆ ಕೇಳಿದಾಗ, "ನಮಗೂ ಇದರ ಬಗ್ಗೆ ಅರಿವಿದೆ. ಪಕ್ಷದ ನಾಯಕರಿಗೆ ಇದರ ಬಗ್ಗೆ ತಿಳುವಳಿಕೆ ಮೂಡಿಸಲಾಗಿದೆ. ಎಲ್ಲಾ ಪಕ್ಷಗಳು ಈ ಕೆಲಸ ಮಾಡುತ್ತಿವೆ. ಬಿಜೆಪಿ, ಜನತಾದಳ ಎಲ್ಲರೂ ಅವರವರ ಮತಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ.

ತಮಿಳುನಾಡು ಸಿಎಂ ವಿಜಯ್ ಅವರಿಗೆ ಶುಭಾಶಯ ತಿಳಿಸಿದ ಬಗ್ಗೆ ಕೇಳಿದಾಗ, "ಹೌದು ನೆನ್ನೆ ಅವರಿಗೆ ಶುಭಕೋರಿದೆ.

ಬೆಂಗಳೂರಿನ ಜನರಿಗೆ ಭೂಮಿ ಗ್ಯಾರಂಟಿ

"ಜನಸಾಮಾನ್ಯರು ಸಂಪಾದಿಸಿದ ಆಸ್ತಿಗಳಿಗೆ ಸರಿಯಾದ ರೀತಿಯಲ್ಲಿ ದಾಖಲೆಗಳನ್ನು ಒದಗಿಸಿಕೊಡಬೇಕು ಎಂದು ನಾವು ಆರನೇ ಗ್ಯಾರಂಟಿಯಾಗಿ "ಭೂಮಿ ಗ್ಯಾರಂಟಿ"ಯನ್ನು ಜಾರಿಗೆ ತಂದಿದ್ದೇವೆ. ಜನರ ಮನೆ ಬಾಗಿಲಿಗೆ ಇ ಖಾತೆಗಳನ್ನು ತಲುಪಿಸುವ ವ್ಯವಸ್ಥೆ ಮಾಡಿದ್ದೇವೆ‌. ಬಿ ಯಿಂದ ಎ ಖಾತೆ ಬದಲಾವಣೆ ಮಾಡಿಕೊಡುತ್ತಿದ್ದೇವೆ" ಎಂದರು.

ನಾನೇ ಅನೇಕ ಬ್ಯಾನರ್ ಗಳನ್ನು ಹೇಳಿ ತೆಗಿಸಿದ್ದೇನೆ

"ನಾನೇ ಬ್ಯಾನರ್ ಹಾಕಬೇಡಿ ಕೇಸ್ ಹಾಕಲಾಗುವುದು ಅಂತ ಹೇಳಿದ್ದೆ. ಆದರೂ ಅಭಿಮಾನದಿಂದ ಹಾಕಿಸಿದ್ದಾರೆ. ನಾನೇ ಹಲವರಿಗೆ ಹೇಳಿ ಬ್ಯಾನರ್ ಗಳನ್ನು ತೆಗಿಸಿದ್ದೇನೆ. 50 ರಷ್ಟು ಬ್ಯಾನರ್ ಗಳು ತೆರವುಗೊಳಿಸಲಾಗಿದೆ. ಹಾಕಿರೋದು ತಪ್ಪು. ಕಾರ್ಪೋರೇಷನ್ ಅವರಿಗೂ ಕೂಡಲೇ ತೆಗೆಯಬೇಕು ಎಂದು ಸೂಚಿಸಿದ್ದೇನೆ. ಬಿಜೆಪಿ ಲೀಡರ್ ಗಳು ಸಹ ಅವರ ನಾಯಕರುಗಳು ಬರುವುದನ್ನು ಬ್ಯಾನರ್ ಹಾಕಿದ್ದಾರೆ ಅವನ್ನು ಸಹ ತೆಗೆಯಲಾಗುವುದು" ಎಂದು ಹೇಳಿದರು.

"ಎಷ್ಟೇ ಕಠಿಣ ನಿಯಮ ತಂದರೂ ಇದನ್ನು ತಡೆಯಲು ಆಗುತ್ತಿಲ್ಲ. ಇದು ಸರಿಯಲ್ಲ. ದಯವಿಟ್ಟು ಬೆಂಗಳೂರು ನಗರವನ್ನು ಸ್ವಚ್ಛವಾಗಿಡಬೇಕು.‌ ನಗರ ವ್ಯಾಪ್ತಿ ಬಿಟ್ಟು ಹಳ್ಳಿ ಭಾಗದಲ್ಲಿ ಹಾಕಿಕೊಂಡರೆ ಬೇಡ ಎನ್ನಲ್ಲ. ಆದರೆ ನಗರ ಭಾಗದಲ್ಲಿ ಬೇಡ. ನಾನು ಹುಟ್ಟುಹಬ್ಬದ ಸಂಭ್ರಮಾಚರಣೆ ಬೇಡ ಎಂದಿದ್ದೆ. ಕಳೆದ ರಾತ್ರಿ ಅಭಿಮಾನಿಗಳು, ಕಾರ್ಯಕರ್ತರು, ನಾಯಕರು ಹಾಗೂ ಸಚಿವರು ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಲು ಕಾಯುತ್ತಿದ್ದರು. ಅವರ ಪ್ರೀತಿ ವಿಶ್ವಾಸ, ಆಶೀರ್ವಾದ ಬೇಡ ಎನ್ನಲು ಆಗುವುದಿಲ್ಲ" ಎಂದರು.

Comments

Leave a Comment

Prev Post ಬಾಗ್ಮನೆ ಸಾಧನೆ ದೇಶವೇ ಹೆಮ್ಮೆಪಡುವಂತದ್ದು: ಡಿಸಿಎಂ ಡಿ.ಕೆ. ಶಿವಕುಮಾರ್
Next Post 17.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News