PRABHAVAA.COM

ತುಮಕೂರಿನ ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕೆ: ವಿಜಯೇಂದ್ರ

Bengaluru Urban:

Font size:

ತುಮಕೂರಿನ ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕೆ: ವಿಜಯೇಂದ್ರ

ಬೆಂಗಳೂರು: ತುಮಕೂರಿನಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ಆಯೋಜಿಸಿರುವುದು ಯಾವ ಪುರುಷಾರ್ಥಕ್ಕೆ. ಈ ಮೂರು ವರ್ಷದಲ್ಲಿ ಸರ್ಕಾರ ಕಡಿದು ಕಟ್ಟೆ ಹಾಕಿದ್ದು ಏನು ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಅವರು ಪ್ರಶ್ನಿಸಿದ್ದಾರೆ.
ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯ ಯೋಜನೆಗಳನ್ನು ತಮ್ಮ ಸರ್ಕಾರದ ಯೋಜನೆಗಳು ಎಂಬಂತೆ ಈಗಿನ ಕಾಂಗ್ರೆಸ್ ಸರ್ಕಾರ ಬಿಂಬಿಸಿಕೊಳ್ಳುತ್ತಿದೆ. ಹುಬ್ಬಳ್ಳಿಯಲ್ಲಿ ಭಾರಿ ಸಂಖ್ಯೆಯಲ್ಲಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಈ ಸರ್ಕಾರ ಆಯೋಜಿಸಿತ್ತು. ಅದೂ ಕೂಡ ಬಿಜೆಪಿ ಸರ್ಕಾರದ ನಿರ್ಧಾರ. ಹಳೆ ಸರ್ಕಾರದ ಕೆಲಸಗಳನ್ನು ತಮ್ಮ ಕೆಲಸ ಎಂದು ಜನರಿಗೆ ತೋರಿಸುತ್ತಿದ್ದಾರೆ ಎಂದು ದೂರಿದರು. ತುಮಕೂರು ಸಮಾವೇಶ ನಗೆಪಾಟಲಿಗೆ ಈಡಾಗಿದೆ. ಇದರ ಬಗ್ಗೆ ಜನರೇ ನಗುತ್ತಿದ್ದಾರೆ. ಬಿಜೆಪಿ ಈ ಸಮಾವೇಶಕ್ಕೆ ಕೌಂಟರ್ ಆಗಿ ಏನೂ ಮಾಡುವುದಿಲ್ಲ. ಎಂದರು.
ಇವರು ಏನಾದರೂ ಸಾಧನೆ ಮಾಡಿದ್ದರೆ ಬಾಗಲಕೋಟೆ ಮತ್ತು ದಾವಣಗೆರೆ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿಗಳು ಹಲವು ದಿನ ಬೀಡು ಬಿಡಬೇಕಾದ ಸ್ಥಿತಿ ಇರುತ್ತಿರಲಿಲ್ಲ. ಮತದಾನಕ್ಕೂ ಮೂರು ದಿನ ಮೊದಲು ಗೃಹಲಕ್ಷ್ಮಿ ಹಣ ನೀಡಿದ್ದಾರೆ. ಜಾಹೀರಾತು ಮೂಲಕ ಆರ್ಥಿಕ ಮತ್ತು ಕಾನೂನು ಸ್ಥಿತಿ ಚೆನ್ನಾಗಿದೆ ಎಂದು ಜನರಿಗೆ ತೋರಿಸುತ್ತಿದ್ದಾರೆ. ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸವನ್ನು ಸಮಾವೇಶದ ಮೂಲಕ ಮಾಡುತ್ತಿದ್ದಾರೆ ಎಂದು ಪ್ರಶ್ನೆಗೆ ಉತ್ತರಿಸಿದರು.
ಪರಿಣಾಮಕಾರಿಯಾದ ವಿರೋಧ ಪಕ್ಷವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ನಾವು ಹೋರಾಟ ಮಾಡದೇ ಹೋಗಿದ್ದೇ ಇದ್ದರೆ ವಾಲ್ಮೀಕಿ ಹಗರಣದಲ್ಲಿ ಸಚಿವರು ರಾಜೀನಾಮೆ ನೀಡುತ್ತಿರಲಿಲ್ಲ. ಈ ಸರ್ಕಾರಕ್ಕೆ ಭಂಡತನವಿದೆ. ಏನೇ ನಾವು ಹೋರಾಟ ಮಾಡಿದರೆ ತಾಗುವುದಿಲ್ಲ. ಈ ಭಂಡತನವನ್ನು ರಾಜ್ಯದ ಜನ ನೋಡುತ್ತಿದ್ದಾರೆ. ನಾವು ಸಮಯಕ್ಕೆ ಸರಿಯಾಗಿ ಹೋರಾಟ ಮಾಡುತ್ತಿದ್ದೇವೆ. ಈ ಆಟ ಬಹಳ ದಿನ ನಡೆಯುವುದಿಲ್ಲ ಎಂದರು.

ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಮಾವೇಶ..
ಮುಖ್ಯಮಂತ್ರಿ ಕುರ್ಚಿಗೆ ಕಾಳಗ ನಡೆಯುತ್ತಿರುವುದರಿಂದ ನೂರಾರು ಕೋಟಿ ಹಣ ಪೋಲು ಮಾಡಿ ತುಮಕೂರು ಸಮಾವೇಶ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಕುರ್ಚಿಯನ್ನು ಉಳಿಸಿಕೊಳ್ಳಲು ಸಮಾವೇಶ ಮಾಡುತ್ತಿದ್ದಾರೆ. ಇವರ ಸಾಧನೆ ಏನೂ ಇಲ್ಲ. ಕುರ್ಚಿ ಪೈಪೆÇೀಟಿಯಿಂದಾಗಿ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದುಹೋಗಿದೆ ಎಂದು ಹೇಳಿದರು.
ಮುಗ್ಧ ಮತದಾರರನ್ನು ಶೋಷಣೆ ಮಾಡುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ. ಮತದಾನಕ್ಕೆ ಎರಡು ಮೂರು ದಿನ ಇರುವಾಗ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡ್ತಾರೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಗೆಲ್ಲಿಸದೇ ಹೋದರೆ ಗ್ಯಾರಂಟಿ ನಿಲ್ಲಿಸುವ ಹೇಳಿಕೆಗಳನ್ನೂ ನೀಡಿದ್ದರು. ಮತದಾರರ ಬಡತನವನ್ನು ಬಳಸಿಕೊಳ್ಳಲು ನೋಡ್ತಾ ಇದ್ದಾರೆ ಎಂದರು. ನಮ್ಮಲ್ಲಿ ಗೊಂದಲ ಇಲ್ಲ. ಬಡವರು ಕಾಂಗ್ರೆಸ್‍ನ ಹೇಳಿಕೆ ನಂಬಿ ಹಳ್ಳಕ್ಕೆ ಬೀಳುತ್ತಿದ್ದಾರೆ. ಇದೂ ಸಹ ಬಹಳ ದಿನ ನಡೆಯುವುದಿಲ್ಲ ಎಂದು ನುಡಿದರು.
ಮಳೆ ಹಾನಿ ಪರಿಶೀಲನೆಗೆ ಕೊಪ್ಪಳ ಮತ್ತು ಬೇರೆ ಬೇರೆ ಜಿಲ್ಲೆಗೆ ನಮ್ಮ ಪಕ್ಷದ ಮುಖಂಡರು ಭೇಟಿ ನೀಡುತ್ತಿದ್ದಾರೆ. ಆದರೆ ಜಿಲ್ಲಾ ಮಂತ್ರಿಗಳು ತಲೆ ಎತ್ತಿಕೊಂಡು ಓಡಾಡುವ ಸ್ಥಿತಿಯಲ್ಲಿ ಇಲ್ಲ. ಹಿಂದೆಯೂ ಅವರು ಪ್ರವಾಸ ಮಾಡಿಲ್ಲ. ಮುಂದೆಯೂ ಹೋಗುವುದಿಲ್ಲ ಎಂದ ಅವರು, ದೇವೇಗೌಡರು ಎನ್‍ಡಿಗೆ ಬೆಂಬಲ ನೀಡಿದ್ದು ಬಹಿರಂಗ ಸತ್ಯ. ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಕೇಂದ್ರದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಅವರ ತೀರ್ಮಾನಕ್ಕೆ ನಾವು ಬದ್ಧರು. ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಯಾವ ಕಾರಣಕ್ಕೆ ಭೇಟಿ ಮಾಡಿದ್ದಾರೆ ಎಂಬುದು ತಿಳಿದಿಲ್ಲ. ರಾಜ್ಯಸಭೆ ಬಗ್ಗೆ, ವಿಧಾನಸಭೆಗೆ ಯಾರನ್ನು ಆಯ್ಕೆ ಮಾಡಬೇಕು ಎಂಬುದು ಇನ್ನೂ ಚರ್ಚೆ ಆರಂಭವಾಗಿಲ್ಲ. ದೆಹಲಿಯಿಂದ ನಿರ್ದೇಶನ ಬಂದಿಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.
ಪ್ರಧಾನಿಯವರನ್ನು ವಿರೋಧ ಮಾಡಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್‍ನವರು ವಿರೋಧ ಮಾಡ್ತಾರೆ. ತ್ರಿಭಾμÁ ವಿರೋಧ ಮಾಡುವ ಕಾಂಗ್ರೆಸ್ ನಾಯಕರು ಮಕ್ಕಳು ಸಿಬಿಎಸ್‍ಇ ಶಾಲೆಯಲ್ಲಿ ತ್ರಿಭಾμÉ ಕಲಿಯುತ್ತಿದ್ದಾರೆ. ಇವರ ಬಳಿ ಬೇರೆ ಬಂಡವಾಳ ಏನೂ ಇಲ್ಲ. ಎಲ್ಲಾ ಕ್ಷೇತ್ರಗಳಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಜನರ ಹಣವನ್ನು ಪೋಲು ಮಾಡ್ತಾ ಇದ್ದಾರೆ ಎಂದರು.
ಶಾಲಾ ಸಮವಸ್ತ್ರ ಎಂದರೆ ಏನು ಎಂದೇ ಕಾಂಗ್ರೆಸ್‍ಗೆ ಗೊತ್ತಿಲ್ಲ. ಮದರಸಾದಲ್ಲಿ ಹಿಜಾಬ್ ಧರಿಸಲಿ. ಶಾಲೆಗಳಲ್ಲಿ ಹಿಜಾಬ್‍ಗೆ ಅವಕಾಶ ನೀಡಿ ರಾಜ್ಯ ಸರ್ಕಾರವೇ ಮಕ್ಕಳ ಮನಸ್ಸನ್ನು ಕಲಕುವ ಕೆಲಸ ಮಾಡ್ತಿದೆ. ಅಲ್ಪಸಂಖ್ಯಾತರನ್ನು ಓಲೈಸಲು ಇಂತಹ ತೀರ್ಮಾನ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಕರ್ನಾಟಕಕ್ಕೆ ಬರಲಿದ್ದಾರೆ. 24 ರಂದು ಪ್ರಶಿಕ್ಷಣ ವರ್ಗದಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

Comments

Leave a Comment

Prev Post ರಾಜ್ಯ ಸಾರಿಗೆ ನೌಕರರಿಗೆ 4 ದಿನಗಳ ಸಾಂಕೇತಿಕ ಪ್ರತಿಭಟನೆ ಘೋಷಣೆ – ಸಿಐಟಿಯು ಬೆಂಬಲ
Next Post ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕೆ? ಸಾರಿಗೆ ಇಲಾಖೆ ದಿವಾಳಿ, ಬೆಂಗಳೂರು ಗಾರ್ಬೇಜ್ ಸಿಟಿ ಆಗಿದೆ;ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News