PRABHAVAA.COM

ದಾರಿ ತೋರಿಸುವುದು ದೇವರ ಕೆಲಸ, ಗುರಿ ತಲುಪುವುದು ನಮ್ಮ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್

Chamarajanagara:

Font size:

ದಾರಿ ತೋರಿಸುವುದು ದೇವರ ಕೆಲಸ, ಗುರಿ ತಲುಪುವುದು ನಮ್ಮ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್

ಚಾಮರಾಜನಗರ, ಮೇ 21:

“ದೇವರು ಕಷ್ಟ ಕೊಡುತ್ತಾನೆ ಜೊತೆಗೆ ಅದನ್ನು ಎದುರಿಸುವ ಶಕ್ತಿಯನ್ನೂ ನೀಡುತ್ತಾನೆ. ದಾರಿ ತೋರಿಸುವುದು ದೇವರ ಕೆಲಸ, ಗುರಿ ತಲುಪಬೇಕಿರುವುದು ನಮ್ಮ ಕೆಲಸ. ದೇವರು ನೀಡುವ ಅವಕಾಶವನ್ನು ಬಳಸಿಕೊಳ್ಳಬೇಕು. ಅವಕಾಶ ಸಿಕ್ಕಾಗ ಕೈಯಿಂದ ದಾನ ಮಾಡಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕೊಳ್ಳೇಗಾಲ ತಾಲ್ಲೂಕಿನ ಶ್ರೀ ಜಗನ್ಮೋಹನ ರಂಗನಾಥಸ್ವಾಮಿ ದೇವಾಲಯ ಜೀರ್ಣೋದ್ಧಾರ ಪೂರಕ ಅಷ್ಟಬಂಧನ ದಿವ್ಯ ಮಹಾ ಕುಂಭಾಭಿಷೇಕ-ಸಂಪ್ರೋಕ್ಷಣ ಮಹೋತ್ಸವದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

“ಯಾವುದೇ ದೇವರಿಗೆ ಜಾತಿ, ಧರ್ಮ ಎಂಬುದು ಇರುವುದಿಲ್ಲ. ಧರ್ಮ ಯಾವುದಾದರೂ ತತ್ವವೊಂದೇ, ದೈವ ನೂರಾದರೂ ಭಕ್ತಿಯೊಂದೆ, ಕರ್ಮ ಹಲವಾದೂ ನಿಷ್ಠೆಯೊಂದೇ, ದೇವನೊಬ್ಬ ನಾಮ ಹಲವು. ಕಾವೇರಿ ನದಿ ಹಾಗೂ ರಂಗನಾಥನ ಮಧ್ಯೆ ದರ್ಗಾವಿದೆ. ಇದೇ ಈ ನೆಲದ ಸೌಹಾರ್ಧತೆ” ಎಂದರು.

ಚಾಮರಾಜನಗರ ದೇವರ ನಾಡು

“ಚಾಮರಾಜನಗೆ ಹಿಂದುಳಿದ ಜಿಲ್ಲೆಯಲ್ಲ. ಇದು ದೇವರ ನಾಡು. ಚಾಮರಾಜೇಶ್ವರ, ಬಿಳಿಗಿರಿ ರಂಗನಾಥ, ಹಿಮವದ್ ಗೋಪಾಲಸ್ವಾಮಿ, ಮಲೆ ಮಾದೇಶ್ವರ, ಮಧ್ಯರಂಗ ಹೀಗೆ ದೇವಾಲಯಗಳ ಬೀಡಾಗಿದೆ. ಕಾವೇರಿ ನದಿಯ ತಟದಲ್ಲಿ ರಂಗನಾಥಸ್ವಾಮಿ ನೆಲೆಸಿ ಹರಸುತ್ತಿದ್ದಾನೆ. ಮನುಷ್ಯ ಎಷ್ಟೇ ದೊಡ್ಡವನಾದರೂ ಅವನ ಧರ್ಮ, ಆಚರಣೆಗಳನ್ನು ಬಿಡಲು ಆಗುವುದಿಲ್ಲ ಎಂದು ಹಿರಿಯರು ಮಾರ್ಗದರ್ಶನ ಮಾಡಿದ್ದಾರೆ. ದೇವರ ದೇವ ರಂಗನಾಥನ ಪಾದಗಳಿಗೆ ನನ್ನ ಕುಟುಂಬ ಹಾಗೂ ಎಲ್ಲಾ ಭಕ್ತಾಧಿಗಳ ಪರವಾಗಿ ಸಾಷ್ಟಾಂಗ ನಮಸ್ಕಾರ” ಎಂದರು.

“ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯಾ ಪದುಮನಾಭನ ಪಾದ ಭಜನೆ ಪರಮಸುಖವಯ್ಯಾ. ಎಎಂಆರ್ ಗ್ರೂಪಿನ ಮಹೇಶ್ ರೆಡ್ಡಿ ಅವರು ಹಾಗೂ ಕುಟುಂಬ ದೇವಾಲಯದ ಜೀರ್ಣೋದ್ಧಾರ ಮಾಡಿದ್ದಾರೆ. ಲಕ್ಷ್ಮೀ ರಂಗನಾಥಸ್ವಾಮಿಯ ಸೇವೆ ಮಾಡುವ ಭಾಗ್ಯ ಇವರಿಗೆ ಅವಕಾಶ ಸಿಕ್ಕಿದೆ. ಇನ್ನೂ ಹೆಚ್ಚಿನ ಶಕ್ತಿಯನ್ನು ದೇವರು ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರಃ ಅಂದರೆ ಅರ್ಚಕರ ಪ್ರಭಾವದಿಂದ ಶಿಲೆಯ್ಲಲೂ ಶಿವನನ್ನು ಕಾಣಬಹುದು. ದೇವರು, ದೇವಸ್ಥಾನ ಎಲ್ಲರ ಆಸ್ತಿ” ಎಂದು ತಿಳಿಸಿದರು.

Comments

Leave a Comment

Prev Post ರಾಹುಲ್ ಗಾಂಧಿ ಕ್ಷಮೆ ಯಾಚಿಸಲು ವಿಜಯೇಂದ್ರ ಆಗ್ರಹ
Next Post ನೀಟ್ ಅಕ್ರಮದ ವಿರುದ್ಧ ಸಿದ್ದರಾಮಯ್ಯ ತೀವ್ರ ಆಕ್ರೋಶ: ಕೇಂದ್ರ ಸರ್ಕಾರದ ವೈಫಲ್ಯ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News