PRABHAVAA.COM

2026-27ನೇ ಸಾಲಿಗೆ 51,000 ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರದ ಆದೇಶ

Bengaluru Urban:

Font size:

2026-27ನೇ ಸಾಲಿಗೆ 51,000 ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರದ ಆದೇಶ

ಬೆಂಗಳೂರು, ಮೇ 22, -
ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ತಾಜಾ ಬೆಳವಣಿಗೆ. 2026-27ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡುವ ಕುರಿತು ಸರ್ಕಾರದಿಂದ ಇಂದು(22.5.2026) ಆದೇಶ ಹೊರಬಂದಿದೆ.

ಸರ್ಕಾರದ ಆದೇಶ ಸಂಖ್ಯೆ ಇಪಿ 160 ಎಸ್‌ಇಎಸ್ 2026 ಪ್ರಕಾರ, ಪ್ರಾಥಮಿಕ ಶಾಲೆಗಳಿಗೆ 40,000 ಹಾಗೂ ಪ್ರೌಢಶಾಲೆಗಳಿಗೆ 11,000 ಅತಿಥಿ ಶಿಕ್ಷಕರನ್ನು ಒಟ್ಟು 51,000 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಈ ನೇಮಕಾತಿ ಖಾಯಂ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಮಾತ್ರ ಮಾನ್ಯವಾಗಲಿದೆ.

ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ಇದೇ ರೀತಿಯ ಕ್ರಮ ಕೈಗೊಳ್ಳಲಾಗಿದ್ದು, ಈ ಬಾರಿ ಕೂಡಾ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ತುರ್ತು ಪ್ರಸ್ತಾವನೆ ಸಲ್ಲಿಸಿದ್ದರು. ಮೇ ತಿಂಗಳಲ್ಲಿಯೇ ಶಾಲೆಗಳು ಪ್ರಾರಂಭವಾಗುತ್ತಿರುವುದರಿಂದ, ಬೋಧಕ ಹುದ್ದೆಗಳ ಕೊರತೆಯಿಂದ ವಿದ್ಯಾರ್ಥಿಗಳ ಕಲಿಕೆ ಪ್ರಕ್ರಿಯೆ ಅಸ್ತವ್ಯಸ್ತವಾಗದಂತೆ ತಕ್ಷಣವೇ ಅತಿಥಿ ಶಿಕ್ಷಕರನ್ನು ಲಭ್ಯಪಡಿಸುವ ಅಗತ್ಯವಿದೆ ಎಂದು ವರದಿ ಮಾಡಲಾಗಿತ್ತು.

ಸರ್ಕಾರವು ಈ ಪ್ರಸ್ತಾವನೆಯನ್ನು ಪರಿಶೀಲಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕ ನೇಮಕಾತಿಗೆ ಅನುಮತಿ ನೀಡಿದೆ. ನೇಮಕಾತಿ ಮಾಡಿಕೊಳ್ಳಲಿರುವ ಅತಿಥಿ ಶಿಕ್ಷಕರ ಗೌರವಧನ ಪಾವತಿಗಾಗಿ ಅಗತ್ಯವಿರುವ ಅನುದಾನದ ವಿವರ ಹಾಗೂ ಜಿಲ್ಲಾ/ತಾಲ್ಲೂಕುವಾರು ಹಂಚಿಕೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ ಆಇ 371 ವೆಚ್ಚ-8/2026, ದಿನಾಂಕ 20.05.2026ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಲಾಗಿದೆ.

Comments

Leave a Comment

Prev Post "ನಾನು ಕನ್ನಡಿಗ ಅನ್ನೋದೆ ನನ್ನ ಸ್ಟೇಟಸ್" - ಡಿ.ಕೆ. ಶಿವಕುಮಾರ್‌ಗೆ ನಿಖಿಲ್ ಕುಮಾರಸ್ವಾಮಿ ಕೌಂಟರ್
Next Post ಕಲಬುರಗಿಯಲ್ಲಿ ಪಿಎಂ ಮಿತ್ರ ಜವಳಿ ಪಾರ್ಕ್ ಯೋಜನೆ

ದೇಶ ಹಾಗೂ ರಾಜ್ಯದ ಬೆಳವಣಿಗೆಗೆ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಎಲ್ಲರೂ ಜ್ಞಾನ ಹಂಚಿಕೊಂಡು ಬಾಳಬೇಕು ಬೆಂಗಳೂರಿನ ಹೆಮ್ಮೆ ಜ್ಯೋತಿ ನಿವಾಸ್ ಕಾಲೇಜು

ಮಂಗಳೂರು ವಿಶ್ವವಿದ್ಯಾನಿಲಯ ಘಟಿಕೋತ್ಸವ ; ಗೌರವ ಡಾಕ್ಟರೇಟ್ ಪ್ರದಾನ.

ಮಂಗಳೂರು ವಿಶ್ವವಿದ್ಯಾನಿಲಯ ಘಟಿಕೋತ್ಸವ ; ಗೌರವ ಡಾಕ್ಟರೇಟ್ ಪ್ರದಾನ.

ಕರ್ನಾಟಕ ಸರ್ಕಾರದ ಮಹತ್ವದ ಆದೇಶ: ಹದಿಹರೆಯದವರ ಆರೋಗ್ಯಕ್ಕಾಗಿ ‘ಸ್ನೇಹ ಕೇಂದ್ರ’ಗಳ ವಿಸ್ತರಣೆ, ಸಮಗ್ರ ಸಮಾಲೋಚನಾ ಕೇಂದ್ರಗಳ ಸ್ಥಾಪನೆ

ಕರ್ನಾಟಕ ಸರ್ಕಾರದ ಮಹತ್ವದ ಆದೇಶ: ಹದಿಹರೆಯದವರ ಆರೋಗ್ಯಕ್ಕಾಗಿ ‘ಸ್ನೇಹ ಕೇಂದ್ರ’ಗಳ ವಿಸ್ತರಣೆ, ಸಮಗ್ರ ಸಮಾಲೋಚನಾ ಕೇಂದ್ರಗಳ ಸ್ಥಾಪನೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಅಮೂಲಾಗ್ರ ಬದಲಾವಣೆ ಗೆಜೆಟ್ ಪ್ರಕಟಣೆ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಅಮೂಲಾಗ್ರ ಬದಲಾವಣೆ ಗೆಜೆಟ್ ಪ್ರಕಟಣೆ

ಸಹಾಯಧನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ

ಸಹಾಯಧನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ

Read all News