ಧವಳಗಿರಿ ನಿವಾಸದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷರಿಂದ ಉಪಹಾರ ಸೇವನೆ
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಇಂದು ಬೆಳಿಗ್ಗೆ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿ ಉಪಾಹಾರ ಸೇವಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಉಸ್ತುವಾರಿ ಡಾ. ರಾಧಾಮೋಹನ್ ದಾಸ್ ಅಗ್ರವಾಲ್, ಸಹ-ಉಸ್ತುವಾರಿ ಸುಧಾಕರ್ ರೆಡ್ಡಿ, ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಜಗದೀಶ್ ಶೆಟ್ಟರ್, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಮುರುಗೇಶ್ ನಿರಾಣಿ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ, ಸಂಸದ ಬಿ.ವೈ. ರಾಘವೇಂದ್ರ, ವಿಧಾನಸಭೆಯ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಶಾಸಕ ಎಸ್.ಆರ್. ವಿಶ್ವನಾಥ್, ಭೈರತಿ ಬಸವರಾಜ್, ಸುರೇಶ್ ಗೌಡ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಕೇರಿ, ಹೆಚ್.ಸಿ. ತಮ್ಮೇಶ್ ಗೌಡ, ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ್ ಅವರು ಉಪಸ್ಥಿತರಿದ್ದರು.







Comments
Leave a Comment