PRABHAVAA.COM

ಮತಾಂತರ ನಿಷೇಧ ಕಾಯ್ದೆ ಹಿಂಪಡೆಯಲು ಕ್ರೈಸ್ತ ಮಹಾಸಭೆಯ ಆಗ್ರಹ

Bengaluru Urban:

Font size:

ಮತಾಂತರ ನಿಷೇಧ ಕಾಯ್ದೆ ಹಿಂಪಡೆಯಲು ಕ್ರೈಸ್ತ ಮಹಾಸಭೆಯ ಆಗ್ರಹ

ಮತಾಂತರ ನಿಷೇಧ ಕಾಯ್ದೆ ಹಿಂಪಡೆಯಲು ಕ್ರೈಸ್ತ ಮಹಾಸಭೆಯ ಆಗ್ರಹ

ಬೆಂಗಳೂರು . ಮೇ. 25-ಕರ್ನಾಟಕದಲ್ಲಿ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆಅಖಿಲ ಭಾರತ ಕ್ರೈಸ್ತ ಮಹಾಸಭಾ ಒತ್ತಾಯಿಸಿದೆ.
ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷ ಪ್ರಜ್ವಲ್ ಸ್ವಾಮಿ ಎಸ್. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕಾಯ್ದೆಯನ್ನು ದುರುಪಯೋಗಪಡಿಸಿಕೊಂಡು ಕ್ರೈಸ್ತ ಸಮುದಾಯದ ಪ್ರಾರ್ಥನಾ ಸಭೆಗಳು, ಪಾಸ್ಮರ್‌ಗಳು ಹಾಗೂ ನಿರಪರಾಧ ಜನರ ಮೇಲೆ ದಾಳಿ ಮತ್ತು ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಮನೆ ಪ್ರಾರ್ಥನೆ ಹಾಗೂ ಚರ್ಚ್ ಆರಾಧನೆ ವೇಳೆ ಬಲವಂತ ಮತಾಂತರ ಎಂಬ ಆರೋಪ ಮಾಡಿ ದಾಳಿ ನಡೆದಿರುವ ಪ್ರಕರಣಗಳು ವರದಿಯಾಗಿವೆ. ವೈಯಕ್ತಿಕ ವೈಷಮ್ಯ, ಜಾತಿ ಭೇದಭಾವ ಅಥವಾ ಕುಟುಂಬದ ವಿರೋಧದ ಹಿನ್ನೆಲೆಯಲ್ಲಿ ಸುಳ್ಳು ಆರೋಪಗಳನ್ನು ಬಳಸಲಾಗುತ್ತಿದೆ. ಪಾಸ್ಮರ್‌ಗಳು ಹಾಗೂ ಕ್ರೈಸ್ತ ನಾಯಕರ ವಿರುದ್ಧ FIR, ವಿಚಾರಣೆ, ಸಭೆ ನಿಲ್ಲಿಸುವ ಒತ್ತಡ ಹೆಚ್ಚಾಗಿದೆ. ದಲಿತ ಹಾಗೂ ಆದಿವಾಸಿ ಕ್ರೈಸ್ತರು ಹೆಚ್ಚು ಗುರಿಯಾಗುತ್ತಿದ್ದಾರೆ ಎಂಬ ಅಸಮಾಧಾನ ವ್ಯಕ್ತವಾಗಿದೆ. “ಪ್ರಲೋಭನೆ” ಎಂಬ ಪದದ ಅಸ್ಪಷ್ಟ ಬಳಕೆ ಸಾಮಾನ್ಯ ಸೇವಾ ಕಾರ್ಯಗಳನ್ನೇ ತಪ್ಪಾಗಿ ಅರ್ಥೈಸುವ ಪರಿಸ್ಥಿತಿ ಉಂಟುಮಾಡುತ್ತಿದೆ ಎಂದು ಅವರು ಹೇಳಿದರು.

ಅಧ್ಯಕ್ಷರು ಹೇಳಿದರು: “Article 25 ಪ್ರಕಾರ ಪ್ರತಿಯೊಬ್ಬರಿಗೂ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಇದೆ. ಆದರೆ ಈ ಕಾಯ್ದೆ ಆ ಹಕ್ಕಿಗೆ ಅಡ್ಡಿಯಾಗುತ್ತಿದೆ. ಸರ್ಕಾರ ತನ್ನ ಚುನಾವಣಾ ಭರವಸೆಯನ್ನು ಉಳಿಸಿಕೊಂಡು ತಕ್ಷಣ ಕಾಯ್ದೆಯನ್ನು ಹಿಂಪಡೆಯಬೇಕು.” ಎಂದು ಅವರು ಒತ್ತಾಯಪಡಿಸಿದರು.

ಕ್ರೈಸ್ತ ಅಭಿವೃದ್ಧಿ ನಿಗಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರುಹಿಂದೆ ಪ್ರತಿವರ್ಷ 100 ಕೋಟಿ ರೂ. ಅನುದಾನ ನೀಡಲಾಗುತ್ತಿದ್ದರೆ, ಈಗ ಘೋಷಿಸಲಾದ 250 ಕೋಟಿ ರೂ. ಅನುದಾನವೂ ಕಳೆದ ಎರಡು ವರ್ಷಗಳಿಂದ ಬಿಡುಗಡೆಯಾಗದೇ ಇರುವುದರಿಂದ ಸಮುದಾಯದಲ್ಲಿ ನಿರಾಸೆ ಹೆಚ್ಚಾಗಿದೆ ಎಂದು ಹೇಳಿದರು. ನಿಗಮದ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಚೇರ್ಮನ್ ಹಾಗೂ ಡೈರೆಕ್ಟರ್ ಮಂಡಳಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿವೆ ಎಂದರು.

ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ, ಘೋಷಿಸಲಾದ 250 ಕೋಟಿ ರೂ. ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು, ಬಾಕಿ ಇರುವ ಎಲ್ಲಾ ಯೋಜನೆಗಳನ್ನು ಪಾರದರ್ಶಕವಾಗಿ ಜಾರಿಗೆ ತರಬೇಕು, ನಿಗಮದ ಕಾರ್ಯವೈಖರಿಯನ್ನು ಪರಿಶೀಲಿಸಿ ಹೊಣೆಗಾರಿಕೆಯನ್ನು ನಿಗದಿಪಡಿಸಬೇಕು, ಚರ್ಚ್ ದುರಸ್ತಿಕರಣ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡಬೇಕು ಹಾಗೂ ನಿಗಮವನ್ನು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಅಧ್ಯಕ್ಷರು ಎಚ್ಚರಿಸಿದರು:

Comments

Leave a Comment

Prev Post ಬುದ್ದ ಮತ್ತು ಅಂಬೇಡ್ಕರ್ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು: ಪ್ರೇಮಿಳಾ ನೇಸರ್ಗಿ
Next Post ಕೇಂದ್ರ ಸರ್ಕಾರದಿಂದ ಸತತ ನಾಲ್ಕು ಬಾರಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ಜನಾಕ್ರೋಶಕ್ಕೆ ಬಿಜೆಪಿ ಹೊಣೆ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News