ಪೆಟ್ರೋಲ್, ಡೀಸೆಲ್ ಹಾಗೂ LPG ಗ್ಯಾಸ್ ದರ ಏರಿಕೆಯನ್ನು ಖಂಡಿಸಿ ಇಂಡಿಯನ್ ವೆಹಿಕಲ್ಸ್ ಡ್ರೈವರ್ ಟ್ರೇಡ್ ಯೂನಿಯನ್, ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ಹಾಗೂ ಸಂಚಾರಿ ಚಾಲಕರ ಸೇವಾ ಟ್ರಸ್ಟ್ ವತಿಯಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಮೆಲೋಡಿ ಚಾಕಲೇಟ್ ಹಿಡಿದು ವಿನೂತನ ಪ್ರತಿಭಟನೆ ನಡೆಸಲಾಯಿತು.
ಬೆಂಗಳೂರು: ಪೆಟ್ರೋಲ್, ಡೀಸೆಲ್ ಹಾಗೂ LPG ಗ್ಯಾಸ್ ದರ ಏರಿಕೆಯನ್ನು ಖಂಡಿಸಿ ಇಂಡಿಯನ್ ವೆಹಿಕಲ್ಸ್ ಡ್ರೈವರ್ ಟ್ರೇಡ್ ಯೂನಿಯನ್, ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ಹಾಗೂ ಸಂಚಾರಿ ಚಾಲಕರ ಸೇವಾ ಟ್ರಸ್ಟ್ ವತಿಯಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಮೆಲೋಡಿ ಚಾಕಲೇಟ್ ಹಿಡಿದು ವಿನೂತನ ಪ್ರತಿಭಟನೆ ನಡೆಸಲಾಯಿತು.
ಮಧ್ಯ ಪ್ರಾಂತ್ಯದ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮತ್ತು LPG ಗ್ಯಾಸ್ ದರವನ್ನು ದಿನದಿಂದ ದಿನಕ್ಕೆ ಹೆಚ್ಚಿಸುತ್ತಿದ್ದು, ರಾಜ್ಯದ ಆಟೋ ಹಾಗೂ ಕ್ಯಾಬ್ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ವಾಣಿಜ್ಯ ವಾಹನ ಚಾಲಕರು ಪೆಟ್ರೋಲ್ ಮತ್ತು ಡೀಸೆಲ್ ಬಳಕೆಯಿಂದ ದೂರ ಸರಿದು EV ವಾಹನಗಳನ್ನು ಬಳಸುವಂತೆ ಸರ್ಕಾರ ಪ್ರೋತ್ಸಾಹ ನೀಡುತ್ತಿರುವುದು ಸರಿಯಲ್ಲ. ಈಗಾಗಲೇ ಲಕ್ಷಾಂತರ ಆಟೋ ಹಾಗೂ ಕ್ಯಾಬ್ ಚಾಲಕರು ಸಾರ್ವಜನಿಕರಿಗೆ ಸೇವೆ ನೀಡುತ್ತಿದ್ದು, ಇಂಧನ ದರ ಏರಿಕೆಯಿಂದ ಜೀವನ ನಿರ್ವಹಣೆ ಕಷ್ಟಕರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ ಅಗ್ರಿಗೇಟರ್ ಸಂಸ್ಥೆಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ದರ ನಿಗದಿ ಮಾಡಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುತ್ತಿವೆ. ಸರ್ಕಾರ ಘೋಷಿಸಿರುವ “ಒನ್ ಸಿಟಿ – ಒನ್ ರೈಟ್” ಯೋಜನೆಯನ್ನು ತಕ್ಷಣ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಇಂಧನ ದರ ಏರಿಕೆಯಿಂದ ದಿನಸಿ ಸಾಮಗ್ರಿಗಳ ಬೆಲೆಯೂ ಹೆಚ್ಚಳವಾಗಿದ್ದು, ಚಾಲಕರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿವೆ. ಹೀಗಾಗಿ ಪೆಟ್ರೋಲ್, ಡೀಸೆಲ್ ಹಾಗೂ LPG ದರ ಇಳಿಕೆಯಾಗುವವರೆಗೆ ಪ್ರತಿಯೊಬ್ಬ ಚಾಲಕರ ಕುಟುಂಬಕ್ಕೂ ತಿಂಗಳಿಗೆ ₹15,000 ಧನಸಹಾಯ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಗಂಡಸಿ ಸದಾನಂದ, ಸ್ನೇಹಜೀವಿ ಸಂತೋಷ್ ಕುಮಾರ್, ಸ್ವಾಮಿ, ರಾಜು ಕನ್ನಡಿಗ ಹಾಗೂ ಸಂಚಾರಿ ಸತೀಶ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.





Comments
Leave a Comment