PRABHAVAA.COM

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ:ಈಶ್ವರ ಖಂಡ್ರೆ

Bengaluru Urban:

Font size:

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ:ಈಶ್ವರ ಖಂಡ್ರೆ

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ:ಈಶ್ವರ ಖಂಡ್ರೆ
ಬೆಂಗಳೂರು, ಮೇ 27: ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್ 4ರಿಂದ ಸಾರ್ವಜನಿಕ ವೀಕ್ಷಣೆಗೆ ಲಭ್ಯವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಈ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಾದ ಕುಮಾರ್ ಪುಷ್ಕರ್ ಅವರೊಂದಿಗೆ ಸಭೆ ನಡೆಸಿದ ಸಚಿವರು, ಚೀತಾಗಳಿಗಾಗಿಯೇ ಬನ್ನೇರುಘಟ್ಟ ಮೃಗಾಲಯದಲ್ಲಿ ಪ್ರತ್ಯೇಕವಾಗಿ ಸಿದ್ಧಪಡಿಸಿರುವ ಆವರಣದಲ್ಲಿ ಈ ಚಿತಾಗಳನ್ನು ಬಿಡಲಾಗುವುದು ಎಂದರು.
ವನ್ಯಜೀವಿ ವಿನಿಮಯ ಕಾರ್ಯಕ್ರಮದ ಭಾಗವಾಗಿ ಏ.18ರ ಮಧ್ಯರಾತ್ರಿ ದ.ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಈ ಹೊಸ ಅತಿಥಿಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಬರಮಾಡಿಕೊಂಡಿದ್ದರು.
ಈ ಚೀತಾಗಳು ಬನ್ನೇರುಘಟ್ಟ ಪರಿಸರ, ವಾತಾವರಣ, ಹವಾಮಾನಕ್ಕೆ ಹೊಂದಿಕೊಳ್ಳಲು ಪ್ರತ್ಯೇಕವಾಗಿ ಇಡಲಾಗಿತ್ತು. ಮತ್ತು ಇವುಗಳ ಆರೋಗ್ಯದ ಬಗ್ಗೆ ಸತತ ನಿಗಾ ಇಡಲಾಗಿತ್ತು. ಪ್ರಸ್ತುತ ಚಿತಾಗಳು ಸಂಪೂರ್ಣ ಆರೋಗ್ಯವಾಗಿದೆ ಎಂಬ ಮಾಹಿತಿ ಪಡೆದ ಸಚಿವರು, ಜೂನ್ ಮೊದಲ ವಾರದಲ್ಲಿ ಪ್ರವಾಸಿಗರಿಗೆ ಚೀತಾ ನೋಡಲು ಅವಕಾಶ ಕಲ್ಪಿಸುವಂತೆ ನಿರ್ದೇಶಿಸಿದರು.

Comments

Leave a Comment

Prev Post ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು: ಸಿಎಂ ಸಿದ್ದರಾಮಯ್ಯ

21.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

21.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

25.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

25.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಪಶ್ಚಿಮಘಟ್ಟಗಳನ್ನು ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು:ಈಶ್ವರ ಖಂಡ್ರೆ

ಎಫ್.ಕೆ.ಸಿಸಿಐ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಶೃಂಗದ ಪೂರ್ವಭಾವಿ ಸಮಾರಂಭದಲ್ಲಿ ಭಾಗಿ ಪರಿಸರ ಸಂರಕ್ಷಣೆಯಲ್ಲಿ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದು:ಈಶ್ವರ ಖಂಡ್ರೆ

20.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

20.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

22.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

22.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Read all News