ಸಂತೋಷ್ ಲಾಡ್‌ಗೆ ಉಪ ಮುಖ್ಯಮಂತ್ರಿ ಸ್ಥಾನ, ಶ್ರೀನಿವಾಸ ಮಾನೆಗೆ ಕ್ಯಾಬಿನೆಟ್ ಸ್ಥಾನ ನೀಡಲು ಮನವಿ
ಸಂತೋಷ್ ಲಾಡ್‌ಗೆ ಉಪ ಮುಖ್ಯಮಂತ್ರಿ ಸ್ಥಾನ, ಶ್ರೀನಿವಾಸ ಮಾನೆಗೆ ಕ್ಯಾಬಿನೆಟ್ ಸ್ಥಾನ ನೀಡಲು ಮನವಿ
ಬೆಂಗಳೂರು . ಜೂ. 3- ಮುಖ್ಯಮಂತ್ರಿ ಅವರಿಗೆ ಅಭಿನಂದನೆ ಸಲ್ಲಿಸುವುದರ ಜೊತೆಗೆ, ಮರಾಠ ಸಮುದಾಯದ ನಾಯಕರಿಗೆ ನೂತನ ಸಚಿವ ಸಂಪುಟದಲ್ಲಿ ಅವಕಾಶ ನೀಡುವಂತೆ ಮನವಿ ಮಾಡಿ ಕೊಂಡಿದೆ.
ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಸಕಲ ಮರಾಠ ಸಮಾಜವು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಪ್ರಕಟಣೆಯಲ್ಲಿ, ಸಮಾಜವು ಮುಖ್ಯಮಂತ್ರಿ ಅವರಿಗೆ ಅಭಿನಂದನೆ ಸಲ್ಲಿಸುವುದರ ಜೊತೆಗೆ, ಮರಾಠ ಸಮುದಾಯದ ನಾಯಕರಿಗೆ ನೂತನ ಸಚಿವ ಸಂಪುಟದಲ್ಲಿ ಅವಕಾಶ ನೀಡುವಂತೆ ಮನವಿ ಮಾಡಿ ಕೊಂಡಿದೆ.
ರಾಜ್ಯಾದ್ಯಂತ ಸುಮಾರು 40 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಮರಾಠ ಸಮುದಾಯವು, ತನ್ನ ಪ್ರಮುಖ ನಾಯಕರಾದ ಸಂತೋಷ್ ಲಾಡ್ ಮತ್ತು ಶ್ರೀನಿವಾಸ ಮಾನೆಯವರನ್ನು ನೂತನ ಸರ್ಕಾರದಲ್ಲಿ ಪ್ರಾಮುಖ್ಯ ಸ್ಥಾನಗಳಿಗೆ ನೇಮಿಸಬೇಕೆಂದು ಒತ್ತಾಯಿಸಿದೆ.
ಸಂತೋಷ್ ಲಾಡ್ ಅವರು ಈ ಹಿಂದೆ ಕಾರ್ಮಿಕ ಸಚಿವರಾಗಿ ಸೇವೆ ಸಲ್ಲಿಸಿ, ಕಾರ್ಮಿಕರ ಕ್ಷೇಮಾಭಿವೃದ್ಧಿ ಹಾಗೂ ಅಂಗವಿಕಲರ ನೆರವಿಗೆ ಅನೇಕ ಸಮಾಜಮುಖಿ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಕಾರ್ಯಕ್ಷಮತೆ ಹಾಗೂ ಜನಪ್ರಿಯತೆಯನ್ನು ಪರಿಗಣಿಸಿ, ಸಮಾಜವು ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿದೆ.
ಇದೇ ವೇಳೆ, ಹಾನಗಲ್ ಕ್ಷೇತ್ರದ ಶಾಸಕರಾದ ಶ್ರೀನಿವಾಸ ಮಾನೆಯವರು ಜಿಲ್ಲೆಯ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದ್ದು, ಜನಪ್ರಿಯ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಇವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡಿದಲ್ಲಿ, ರಾಜ್ಯಕ್ಕೆ ಇನ್ನಷ್ಟು ಸೇವೆ ಸಲ್ಲಿಸಲು ಅವಕಾಶವಾಗುತ್ತದೆ ಎಂದು ಸಮಾಜ ಅಭಿಪ್ರಾಯ ವ್ಯಕ್ತಪಡಿಸಿದೆ.”






Comments
Leave a Comment