PRABHAVAA.COM

ಡಿ.ಕೆ. ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ:13 ಮಂದಿ ಸಚಿವರೊಂದಿಗೆ ಹೊಸ ಸಂಪುಟ ರಚನೆ

:

Font size:

ಡಿ.ಕೆ. ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ:13 ಮಂದಿ ಸಚಿವರೊಂದಿಗೆ ಹೊಸ ಸಂಪುಟ ರಚನೆ

ಬೆಂಗಳೂರು,ಜೂ. 3-ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಂಡರು. ನೊಣವಿನಕೆರೆ ಅಜ್ಜಯ್ಯನ ಹೆಸರಿನಲ್ಲಿ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದ್ದು, ಕೈಯಲ್ಲಿ ಸಂವಿಧಾನದ ಪುಸ್ತಕದ ಪ್ರತಿಯನ್ನು ಹಿಡಿದಿರುವುದು ಗಮನ ಸೆಳೆಯಿತು. ರೇಷ್ಮೆ ಶಲ್ಯ ಮತ್ತು ಪಂಚೆಯ ಧಿರಿಸಿನೊಂದಿಗೆ ಅವರು ವೇದಿಕೆಗೆ ಆಗಮಿಸಿ ಪ್ರಮಾಣವಚನ ಸ್ವೀಕರಿಸಿದರು. ವೀರ ಗಂಗಾಧರಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಅವರು, ಸಮಾರಂಭಕ್ಕೂ ಮುನ್ನ ಅಜ್ಜಯ್ಯನ ಫೋಟೋಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ 13 ಮಂದಿ ಶಾಸಕರು, ಒಬ್ಬ ಎಂಎಲ್‌ಸಿ ಸೇರಿ, ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಉಪಮುಖ್ಯಮಂತ್ರಿಯಾಗಿ ಡಾ.ಜಿ. ಪರಮೇಶ್ವರ ಪ್ರಮಾಣವಚನ ಸ್ವೀಕರಿಸಿದ್ದು ವಿಶೇಷ. ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರತಿಜ್ಞೆ ಸ್ವೀಕರಿಸಿದರು. ಸಂಪುಟದಲ್ಲಿ ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಶರಣಪ್ರಕಾಶ್ ಪಾಟೀಲ್ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ಎಂ.ಬಿ. ಪಾಟೀಲ್ ಬಸವಣ್ಣ, ಬಸವಾದಿ ಶರಣರು ಮತ್ತು ಸಿದ್ದೇಶ್ವರ ಮಹಾಸ್ವಾಮಿಗಳ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಉಳಿದಂತೆ ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್ ಮತ್ತು ಶರಣಪ್ರಕಾಶ್ ಪಾಟೀಲ್ ಶ್ರದ್ಧಾ ಪೂರ್ವಕವಾಗಿ ಪ್ರಮಾಣವಚನ ಸ್ವೀಕರಿಸಿದರು.

ಸಮಾರಂಭಕ್ಕೆ ಸರ್ವಧರ್ಮಗುರುಗಳು ಹಾಗೂ ಸ್ವಾಮೀಜಿಗಳು ಆಗಮಿಸಿ ಡಿ.ಕೆ. ಶಿವಕುಮಾರ್ ಅವರಿಗೆ ಆಶೀರ್ವಾದ ನೀಡಿದರು. ಉದ್ಯಮಿ ನಾರಾಯಣ ಮೂರ್ತಿ ಮತ್ತು ಸುಧಾಮೂರ್ತಿ ಅವರ ಕಾಲು ಮುಟ್ಟಿ ಅವರು ಆಶೀರ್ವಾದ ಪಡೆದರು. ವೇದಿಕೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕೇರಳ ಸಿಎಂ ಸತೀಶನ್, ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ಉಪಸ್ಥಿತರಿದ್ದರು. ಎಲ್ಲರಿಗೂ ಹೂಗುಚ್ಛ ನೀಡಿ ಗೌರವಿಸಲಾಯಿತು.

ಸಮಾರಂಭದ ಆರಂಭದಲ್ಲಿ ವಂದೇ ಮಾತರಂ ಹಾಡನ್ನು ಪೂರ್ಣವಾಗಿ ಹಾಡಲಾಯಿತು. ನಂತರ ರಾಷ್ಟ್ರಗೀತೆ ಹಾಗೂ ಕೊನೆಯಲ್ಲಿ ನಾಡಗೀತೆ ನುಡಿಸಲಾಯಿತು. ಆದರೆ ಸಿಬ್ಬಂದಿಯಿಂದ ಎಡವಟ್ಟು ಸಂಭವಿಸಿ ನಾಡಗೀತೆ ಅರ್ಧಕ್ಕೆ ಮೊಟಕುಗೊಂಡು ವಂದೇ ಮಾತರಂ ಹಾಡಿಸಲಾಯಿತು. ಬಳಿಕ ರಾಷ್ಟ್ರಗೀತೆ ಹಾಗೂ ನಾಡಗೀತೆ ಪೂರ್ಣಗೊಳಿಸಲಾಯಿತು.

ಸಚಿವ ಎಂ.ಬಿ. ಪಾಟೀಲ್ ಪ್ರಮಾಣವಚನದ ವೇಳೆ ಬಸವಣ್ಣ ಹಾಗೂ ಸಿದ್ದೇಶ್ವರ ಮಹಾಸ್ವಾಮಿಗಳ ಹೆಸರಿನಲ್ಲಿ ಪ್ರತಿಜ್ಞೆ ಸ್ವೀಕರಿಸಿದಾಗ ರಾಜ್ಯಪಾಲರು ಪ್ರಮಾಣ ಪತ್ರದಲ್ಲಿರುವ ವಾಖ್ಯಗಳನ್ನು ಮಾತ್ರ ಓದಬೇಕೆಂದು ತಾಕೀತು ಮಾಡಿದರು. ಈ ವೇಳೆ ಮುಖ್ಯ ಕಾರ್ಯದರ್ಶಿ ಮಧ್ಯ ಪ್ರವೇಶಿಸಿ ಎಲ್ಲರೂ ಪತ್ರದಲ್ಲಿರುವುದನ್ನು ಮಾತ್ರ ಓದುವಂತೆ ಮನವಿ ಮಾಡಿದರು. ನಂತರ ಸಿಎಂ ಡಿ.ಕೆ. ಶಿವಕುಮಾರ್ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ಸಮಾಧಾನಗೊಳಿಸಿದರು.

ಪ್ರಮಾಣವಚನದ ಬಳಿಕ ಡಿ.ಕೆ. ಶಿವಕುಮಾರ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ “ಜನರಿಂದ, ಜನರಿಗಾಗಿ, ಜನರಿಗೋಸ್ಕರ... ನನ್ನ ಬದುಕಿನ ಪ್ರತಿಯೊಂದು ಏಳುಬೀಳುಗಳಲ್ಲಿ ಧೈರ್ಯ ತುಂಬಿ, ನನ್ನನ್ನು ಹೆಗಲ ಮೇಲೆ ಹೊತ್ತು ಮುನ್ನಡೆಸಿದ ಕೋಟ್ಯಂತರ ಜನತೆ ಹಾಗೂ ಕಾರ್ಯಕರ್ತರ ಆಶೀರ್ವಾದದಿಂದ ನಾನು ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೇನೆ. ಈ ಕ್ಷಣದಲ್ಲಿ ನಿಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸಕ್ಕೆ ತಲೆಬಾಗುತ್ತೇನೆ” ಎಂದು ಬರೆದಿದ್ದಾರೆ. ಅವರು ಮುಖ್ಯಮಂತ್ರಿಯ ಸ್ಥಾನವನ್ನು ಕೇವಲ ಜವಾಬ್ದಾರಿಯಲ್ಲ, ಕೋಟ್ಯಂತರ ಕನ್ನಡಿಗರ ಕನಸುಗಳನ್ನು ನನಸು ಮಾಡುವ ಪವಿತ್ರ ಕರ್ತವ್ಯವೆಂದು ವಿವರಿಸಿದರು. ತಂತ್ರಜ್ಞಾನದ ಯುಗದಲ್ಲಿ ಹೊಸ ಆಲೋಚನೆಗಳೊಂದಿಗೆ ಕರ್ನಾಟಕವನ್ನು ಅಭಿವೃದ್ಧಿಯ ಶಿಖರಕ್ಕೆ ಕೊಂಡೊಯ್ಯುವ ಸಂಕಲ್ಪವನ್ನು ವ್ಯಕ್ತಪಡಿಸಿದರು. ರೈತರು, ಶ್ರಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು ಹಾಗೂ ಪ್ರತಿಯೊಬ್ಬ ನಾಗರಿಕರ ಸಹಭಾಗಿತ್ವವೇ ಪ್ರಗತಿಯ ದಾರಿ ಎಂದು ಅವರು ಹೇಳಿದರು. “ಯಾವುದೇ ಒಬ್ಬ ವ್ಯಕ್ತಿಯಿಂದ ಬದಲಾವಣೆ ಸಾಧ್ಯವಿಲ್ಲ, ಆದರೆ ನಾವೆಲ್ಲರೂ ಕೈಜೋಡಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಬನ್ನಿ, ನಮ್ಮ ಭವಿಷ್ಯದ ಪೀಳಿಗೆ ಹೆಮ್ಮೆ ಪಡುವಂತಹ ಸುಂದರ, ಸಮೃದ್ಧ ಮತ್ತು ಪ್ರಗತಿಪರ ಕರ್ನಾಟಕವನ್ನು ಕಟ್ಟೋಣ. ಜೈ ಹಿಂದ್! ಜೈ ಕರ್ನಾಟಕ!” ಎಂದು ಅವರು ಪೋಸ್ಟ್‌ನಲ್ಲಿ ಬರೆದಿದ್ದಾರೆ.

ವಿಧಾನಸೌಧ ಪ್ರವೇಶಕ್ಕೂ ಮುನ್ನ ಅವರು ನಾಡಪ್ರಭು ಕೆಂಪೇಗೌಡ, ಬಸವಣ್ಣ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಜವಹಾರಲಾಲ್ ನೆಹರೂ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು. ಬಳಿಕ ಮಹಾತ್ಮಾ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ ವಿಧಾನಸೌಧದ ಉತ್ತರ ದ್ವಾರದಿಂದ ಸಂಪುಟ ಸಭೆಗೆ ಪ್ರವೇಶಿಸಿದರು. ಮೆಟ್ಟಿಲುಗಳಿಗೆ ನಮಸ್ಕರಿಸಿ ಅವರು ವಿಧಾನಸೌಧ ಪ್ರವೇಶಿಸಿದರು. ಗೀತೆಯ ಶ್ಲೋಕ “ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ | ಮಾ ಕರ್ಮಫಲಹೇತುರ್ಭೂರ್ ಮಾ ತೇ ಸಂಗೋಸ್ತ್ವ ಕರ್ಮಣಿ ||” ಅನ್ನು ಉಲ್ಲೇಖಿಸಿ ತಮ್ಮ ಖಾತೆಯಲ್ಲಿ ಹಂಚಿಕೊಂಡರು.

ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕೊಠಡಿಗೆ ಹೂವಿನ ಅಲಂಕಾರ ಮಾಡಲಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯರ ನಾಮಫಲಕವನ್ನು ತೆರವುಗೊಳಿಸಿ ನೂತನ ಸಿಎಂ ಡಿ.ಕೆ. ಶಿವಕುಮಾರ್ ಅವರ ನಾಮಫಲಕ ಅಳವಡಿಸಲಾಯಿತು. ವಿಧಾನಸೌಧದ ನಾಲ್ಕು ಧ್ವಾರಗಳಿಗೆ ಪುಷ್ಪಾರ್ಚನೆ ಮಾಡಿ ಅಲಂಕಾರ ಮಾಡಲಾಯಿತು. ನೊಣವಿನಕೆರೆ ಶ್ರೀ ಸ್ವಾಮೀಜಿ ವಿಧಾನಸೌಧಕ್ಕೆ ಆಗಮಿಸಿ ಮೆಟ್ಟಿಲುಗಳಿಗೆ ನೀರು ಪ್ರೋಕ್ಷಿಸಿ ಸಿಎಂ ಕೊಠಡಿಯಲ್ಲಿ ಪೂಜೆ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿ “ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ” ಎಂದು ಶುಭಾಶಯ ತಿಳಿಸಿದರು.

ಸ್ವಕ್ಷೇತ್ರ ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಐಜೂರು ವೃತ್ತ ಹಾಗೂ ಚನ್ನಪಟ್ಟಣ ಬಸ್ ನಿಲ್ದಾಣದ ಮುಂಭಾಗದಲ್ಲಿ ನೂರಾರು ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಇದರ ಜೊತೆಗೆ ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ್, ಪಿ.ವಿ. ಮೋಹನ್ ಹಾಗೂ ಶಿವಣ್ಣ ಮಳವಳ್ಳಿ ಅವರ ಹೆಸರನ್ನು ಅನುಮೋದಿಸಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಸಮತೋಲನವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಈ ನಾಲ್ವರ ಹೆಸರನ್ನು ಅಂತಿಮಗೊಳಿಸಲಾಗಿದೆ.

ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವು ಬಲವಾದ ಬಹುಮತವನ್ನು ಹೊಂದಿರುವುದರಿಂದ ಈ ನಾಲ್ವರೂ ಸುಲಭವಾಗಿ ಜಯಗಳಿಸುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ಪಕ್ಷಕ್ಕಾಗಿ ದುಡಿದ ನಿಷ್ಠಾವಂತರಿಗೆ ಹಾಗೂ ವಿವಿಧ ಸಮುದಾಯಗಳ ನಾಯಕರಿಗೆ ಆದ್ಯತೆ ನೀಡುವ ಮೂಲಕ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಬಲಪಡಿಸಲು ಈ ಆಯ್ಕೆಗಳು ಪೂರಕವಾಗಲಿವೆ ಎಂದು ಪಕ್ಷದ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

ಸಿಎಂ ಡಿ.ಕೆ. ಶಿವಕುಮಾರ್ ಅವರ ಮೊದಲ ಹಂತದ ಸಂಪುಟದಲ್ಲಿ ಸಮುದಾಯ ಸಮತೋಲನವನ್ನು ಸಾಧಿಸುವ ಪ್ರಯತ್ನ ಸ್ಪಷ್ಟವಾಗಿದೆ. 3 ದಲಿತ, 3 ಲಿಂಗಾಯತ, 2 ಕುರುಬ, 2 ಒಕ್ಕಲಿಗ, 2 ಅಲ್ಪಸಂಖ್ಯಾತ ಹಾಗೂ 1 ಎಸ್‌ಟಿ ಸಮುದಾಯದ ಪ್ರತಿನಿಧಿಗಳನ್ನು ಸೇರಿಸಿಕೊಂಡು ಒಟ್ಟು 13 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

Comments

Leave a Comment

Prev Post ಸಂತೋಷ್ ಲಾಡ್‌ಗೆ ಉಪ ಮುಖ್ಯಮಂತ್ರಿ ಸ್ಥಾನ, ಶ್ರೀನಿವಾಸ ಮಾನೆಗೆ ಕ್ಯಾಬಿನೆಟ್ ಸ್ಥಾನ ನೀಡಲು ಮನವಿ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News