PRABHAVAA.COM

ಸಿದ್ದರಾಮಯ್ಯನವರ ಕ್ಯಾಬಿನೆಟ್ ಎಂಬುದು ಎಂಥವರಿಗೂ ಗೊತ್ತಾಗುತ್ತದೆ ಸರಿದೂಗಿಸಿಕೊಂಡು ಹೋಗುವ ಸವಾಲು- ವಿಜಯೇಂದ್ರ

Bengaluru Urban:

Font size:

ಸಿದ್ದರಾಮಯ್ಯನವರ ಕ್ಯಾಬಿನೆಟ್ ಎಂಬುದು ಎಂಥವರಿಗೂ ಗೊತ್ತಾಗುತ್ತದೆ ಸರಿದೂಗಿಸಿಕೊಂಡು ಹೋಗುವ ಸವಾಲು- ವಿಜಯೇಂದ್ರ

ಸಿದ್ದರಾಮಯ್ಯನವರ ಕ್ಯಾಬಿನೆಟ್ ಎಂಬುದು ಎಂಥವರಿಗೂ ಗೊತ್ತಾಗುತ್ತದೆ
ಸರಿದೂಗಿಸಿಕೊಂಡು ಹೋಗುವ ಸವಾಲು- ವಿಜಯೇಂದ್ರ

ಬೆಂಗಳೂರು: ಎಲ್ಲರನ್ನೂ ಸಂಭಾಳಿಸಿಕೊಂಡು ಸರಿದೂಗಿಸಿಕೊಂಡು ಹೋಗುವ ಸವಾಲಿನಲ್ಲೇ ಡಿ.ಕೆ.ಶಿವಕುಮಾರ್ ಅವರು ಎರಡು ವರ್ಷಗಳನ್ನು ಕಳೆಯುವ ಕೆಲಸ ಆಗಲಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.
ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳಾಗಿ ನಿನ್ನೆ ಪ್ರಮಾಣವಚನ ತೆಗೆದುಕೊಂಡಿದ್ದು ತಮ್ಮ ಜೀವನದ ಆಶೆಯನ್ನು ಪೂರೈಸಿಕೊಂಡಿದ್ದಾರೆ. ಅವರ ಸಚಿವಸಂಪುಟದ ಸದಸ್ಯರ ಪಟ್ಟಿಯನ್ನು ನೋಡಿದಾಗ ಅದು ಡಿ.ಕೆ. ಶಿವಕುಮಾರ್ ಅವರ ಕ್ಯಾಬಿನೆಟ್ ಅಲ್ಲ; ಸಿದ್ದರಾಮಯ್ಯನವರ ಕ್ಯಾಬಿನೆಟ್ ಎಂಬುದು ಎಂಥವರಿಗೂ ಗೊತ್ತಾಗುತ್ತದೆ ಎಂದು ನುಡಿದರು.
ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಎಂ ಕುರ್ಚಿಯಿಂದ ಇಳಿಯುವ ಮೊದಲೇ ಒಂದು ಗೂಗ್ಲಿಯನ್ನೂ ಹಾಕಿ ಹೋಗಿದ್ದಾರೆ. ಹಿಂದುಳಿದ ವರ್ಗಗಳ ವರದಿಯನ್ನು ಸ್ವೀಕರಿಸಿ ಇಂದಿನ ಮುಖ್ಯಮಂತ್ರಿಗಳು ಏನು ಮಾಡುತ್ತಾರೆಂಬ ಸವಾಲನ್ನು ಡಿ.ಕೆ.ಶಿವಕುಮಾರ್ ಅವರ ಮುಂದೆ ಬಿಟ್ಟಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ಸಿನ 3 ವರ್ಷಗಳ ಆಡಳಿತದಲ್ಲಿ ರಾಜ್ಯದಲ್ಲಿ ಯಾವುದೇ ಒಂದು ಅಭಿವೃದ್ಧಿಯನ್ನು ಮಾಡಲು ಸಾಧ್ಯವಾಗಿಲ್ಲ. ಅಲ್ಪಸಂಖ್ಯಾತರ ಓಲೈಕೆ ಮಾಡುತ್ತ ಬಂದಿದ್ದು, ಇದನ್ನು ಮುಂದುವರೆÉಸುವ ಕೆಲಸ ಡಿ.ಕೆ.ಶಿವಕುಮಾರ್ ಅವರಿಂದ ಆಗಲಿದೆಯೇ ವಿನಾ ಈ ಗ್ಯಾರಂಟಿಗಳು, ರಾಜ್ಯದ ಆರ್ಥಿಕ ಪರಿಸ್ಥಿತಿ- ಇವೆಲ್ಲ ನೋಡಿದಾಗ ರಾಜ್ಯದಲ್ಲಿ ಮುಂದಿನ 2 ವರ್ಷದಲ್ಲಿ ಅಭಿವೃದ್ಧಿ ಕಾಣಲು ಸಾಧ್ಯ ಆಗಲಿದೆಯೇ ಎಂಬ ಪ್ರಶ್ನೆ ನನ್ನ ಮುಂದಿದೆ ಎಂದು ಹೇಳಿದರು.
ರಾಜ್ಯದ ಮುಖ್ಯಮಂತ್ರಿ ಮುಂದೆ ದೊಡ್ಡ ಸವಾಲುಗಳಿವೆ. ಸವಾಲುಗಳ ನಡುವೆ ಅಭಿವೃದ್ಧಿಯನ್ನು ಮಾಡಬೇಕಾದ ಅನಿವಾರ್ಯತೆಯೂ ಇದೆ. ಆಡಳಿತ ಪಕ್ಷದ ಸಚಿವರು, ಶಾಸಕರನ್ನು ಸರಿದೂಗಿಸಿಕೊಂಡು ಹೋಗುವ ಸವಾಲು ಕೂಡ ಡಿ.ಕೆ.ಶಿವಕುಮಾರ್ ಅವರ ಮುಂದಿದೆ. ಇದೆಲ್ಲದರ ನಡುವೆ ಹೇಗೆ ಸರಕಾರ ತೆಗೆದುಕೊಂಡು ಹೋಗುತ್ತಾರೆಂದು ನಾವು ಕೂಡ ನೋಡುತ್ತೇವೆ ಎಂದು ತಿಳಿಸಿದರು.

ಈ ಸರಕಾರ ಎಷ್ಟು ದಿನ ಇರಲಿದೆ ಎಂಬ ದೊಡ್ಡ ಪ್ರಶ್ನೆ..
ಡಿ.ಕೆ.ಶಿವಕುಮಾರ್ ಅವರಿಗೆ ಹನಿಮೂನ್ ಅವಧಿ ಇಲ್ಲ ಎಂಬುದೂ ಸತ್ಯ ಎಂದರು. ಯಾರು ಎಷ್ಟೇ ಬಲಶಾಲಿಯಾದರೂ ನಾವು ವಿಪಕ್ಷವಾಗಿ ಈ ಸರಕಾರದ ವೈಫಲ್ಯಗಳನ್ನು ಜನರ ಮುಂದೆ ಬಿಚ್ಚಿಡುವ ಕೆಲಸವನ್ನು ಇನ್ನೂ ಹೆಚ್ಚು ಸಮರ್ಥವಾಗಿ ಮಾಡುತ್ತೇವೆ ಎಂದು ಹೇಳಿದರು. ಸವಾಲನ್ನು ಮೆಟ್ಟಿ ನಿಲುವ ಶಕ್ತಿ ಬಿಜೆಪಿ ಕಾರ್ಯಕರ್ತರಿಗೆ ಇದೆ. ಈ ಸರಕಾರ ಎಷ್ಟು ದಿನ ಇರಲಿದೆ ಎಂಬ ದೊಡ್ಡ ಪ್ರಶ್ನೆ ಎಲ್ಲರಲ್ಲೂ ಇದೆ. ಮುಂದೆ ಯಾವಾಗಲೇ ವಿಧಾನಸಭೆ ಚುನಾವಣೆ ನಡೆದರೂ ರಾಜ್ಯದಲ್ಲಿ ನಮ್ಮ ಸರಕಾರ ತರುವ ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖರಾಗುತ್ತೇವೆ. ಸಂಘಟನೆ ಬಲಪಡಿಸುತ್ತೇವೆ ಎಂದು ತಿಳಿಸಿದರು.

ವಿಪಕ್ಷದಲ್ಲಿದ್ದಾಗ ಪಾದಯಾತ್ರೆ ಮಾಡುವುದು ಸುಲಭ..
ಮುಂದೆ ಬರುವ ಸ್ಥಳೀಯ ಸಂಸ್ಥೆ ಚುನಾವಣೆಯ ಸವಾಲಿದೆ. ಅದು ನಮ್ಮ ಕಾರ್ಯಕರ್ತರ ಚುನಾವಣೆ. ಆ ನಿಟ್ಟಿನಲ್ಲಿ ನಮ್ಮ ಕಾರ್ಯಕರ್ತರಿಗೆ ಶಕ್ತಿ ತುಂಬಲಿದ್ದೇವೆ ಎಂದರು. ಮೇಕೆದಾಟು ಯೋಜನೆ ಕುರಿತ ಪ್ರಶ್ನೆಗೆ ಉತ್ತರ ಕೊಟ್ಟ ಅವರು, ವಿಪಕ್ಷದಲ್ಲಿದ್ದಾಗ ಪಾದಯಾತ್ರೆ ಮಾಡುವುದು ಸುಲಭ. ಇವರ ಸರಕಾರ ಬಂದು 3 ವರ್ಷಗಳಾಗಿದೆ. ಇವರ ಮಿತ್ರ ಪಕ್ಷ ಡಿಎಂಕೆ ಆಡಳಿತದಲ್ಲಿತ್ತು. ಆಗಲೇ ಸಮಸ್ಯೆ ಪರಿಹರಿಸಲು ಸಾಧ್ಯ ಆಗಿಲ್ಲ. ಮುಂದೇನಾಗುತ್ತದೆ ಕಾದು ನೋಡೋಣ ಎಂದು ಹೇಳಿದರು.
ಕಮಿಷನ್ ಕುರಿತಂತೆ ಕಾಲವೇ ಉತ್ತರ ಕೊಡಲಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ಡಿ.ಕೆ.ಶಿವಕುಮಾರ್ ಅವರು ಏನೆಂದು ಬೆಂಗಳೂರಿನಲ್ಲಿ ಜನರು ಮಾತನಾಡುತ್ತಾರೆ. ಆ ಕುರಿತು ಪ್ರಸ್ತಾಪಕ್ಕೆ ಹೋಗುವುದಿಲ್ಲ. ಅವರಿಗೆ ಅವಕಾಶ ಸಿಕ್ಕಿದೆ. ಒಳ್ಳೆಯ ಆಡಳಿತ ನೀಡಲಿ ಎಂದು ಹಾರೈಸಿದರು.
ಕೆಲವರಿಗೆ ವಿಜಯೇಂದ್ರ ಹೆಸರು ಹೇಳದಿದ್ದರೆ ತಿಂದಿದ್ದು ಅರಗುವುದಿಲ್ಲ. ಕೆಲವರಿಗೆ ವಿಜಯೇಂದ್ರ ಹೆಸರು ಹೇಳದಿದ್ದರೆ ಮೀಡಿಯದಲ್ಲಿ ಪ್ರಚಾರ ಸಿಗುವುದಿಲ್ಲ. ಕೆಲವರಿಗೆ ವಿಜಯೇಂದ್ರ ಹೆಸರು ತೆಗೆದುಕೊಳ್ಳದೇ ಹೋದರೆ ರಾಜಕೀಯವಾಗಿ ಕಳೆದುಹೋಗುತ್ತಾರೆ. ಬೇರೆ ಬೇರೆ ಮುಖಂಡರು ನನ್ನ ಹೆಸರು ಪ್ರಸ್ತಾಪಿಸುತ್ತಾರೆ. ನಾನು ಅದರ ಬಗ್ಗೆ ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ ಎಂದು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು.
ರಾಜ್ಯದ ಅಧ್ಯಕ್ಷನಾಗಿ ಸಂಘಟನೆ ಬಲಪಡಿಸುವೆ. ಮುಂದೆ ಬಿಜೆಪಿ ಸರಕಾರವನ್ನು ತರುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುತ್ತೇನೆ ಎಂದು ಪ್ರಶ್ನೆಗೆ ಉತ್ತರ ನೀಡಿದರು. ರಾಜ್ಯಸಭೆಯಲ್ಲಿ ನಮಗಿರುವುದು ಒಂದೇ ಸ್ಥಾನ; ನಮ್ಮ ರಾಜ್ಯದ ದೃಷ್ಟಿಯಿಂದ ರಾಜ್ಯಸಭೆಗೆ ಯಾರನ್ನು ಕಳುಹಿಸಿದರೆ ಲಾಭ ಆಗುತ್ತದೆ ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು ಹೇಳಿದರು.

Comments

Leave a Comment

Prev Post ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್
Next Post ಸಚಿವರುಗಳಿಗೆ ಖಾತೆಗಳ ಹಂಚಿಕೆ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News