PRABHAVAA.COM

ರಾಮಲಿಂಗಾ ರೆಡ್ಡಿ ಶುಕ್ರವಾರ ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್

Bengaluru Urban:

Font size:

ರಾಮಲಿಂಗಾ ರೆಡ್ಡಿ ಶುಕ್ರವಾರ ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂನ್ 5: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ರಾಜಕೀಯದಲ್ಲಿ ಮೊದಲ ಬಿರುಕು ಬಿಟ್ಟಿದೆ. ಬೆಂಗಳೂರು ಅಭಿವೃದ್ಧಿ ಖಾತೆ ಸಿಗದಿರುವುದರಿಂದ ಅಸಮಾಧಾನಗೊಂಡ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಶುಕ್ರವಾರ ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದರು. ಕೋರಮಂಗಲದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಜಲಸಂಪನ್ಮೂಲ ಇಲಾಖೆ ನೀಡಿರುವುದರಿಂದ ಬೇಸರವಿಲ್ಲ, ಆದರೆ ಮುಖ್ಯಮಂತ್ರಿಗಳು ಹಿಂದೆ ಬೆಂಗಳೂರಿನ ನಗರಾಭಿವೃದ್ಧಿ ಖಾತೆ ನೀಡುವ ಭರವಸೆ ನೀಡಿದ್ದರು. ಅದನ್ನು ಪಾಲಿಸದಿರುವುದರಿಂದ ಜನರಿಗೆ ಸತ್ಯ ತಿಳಿಯಬೇಕು ಎಂದು ಹೇಳಿದರು.

ಅವರು ಸ್ಪಷ್ಟಪಡಿಸಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಕಾಂಗ್ರೆಸ್ ಶಾಸಕನಾಗಿಯೇ ಮುಂದುವರಿಯುತ್ತೇನೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಯಾರ ಮೇಲೂ ಕೋಪವಿಲ್ಲ, ನಾನು 53 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಪಕ್ಷ ನನಗೆ ಸಾಕಷ್ಟು ಅವಕಾಶಗಳನ್ನು ನೀಡಿದೆ. ನಾನು ಸಚಿವ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ, ಕಾಂಗ್ರೆಸ್ ಪಕ್ಷಕ್ಕೆ ಅಲ್ಲ. ನನ್ನ ಜೀವನದಲ್ಲಿ ಕಾಂಗ್ರೆಸ್‌ಗೆ ಎಂದಿಗೂ ರಾಜೀನಾಮೆ ನೀಡಿಲ್ಲ, ಮುಂದೆಯೂ ನೀಡುವುದಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದರು.

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ ತಮ್ಮ ಪತ್ರದಲ್ಲಿ, “ನನಗೆ ತಮ್ಮ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದ್ದಕ್ಕೆ ತಮಗೂ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಧನ್ಯವಾದಗಳು. ನಾನು ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ಕೋರುತ್ತೇನೆ. ನಾನು ಶಾಸಕನಾಗಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ” ಎಂದು ಉಲ್ಲೇಖಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅವರು ಸ್ಪಷ್ಟಪಡಿಸಿದ್ದು, ತಾವು ಬೆಂಗಳೂರು ಅಭಿವೃದ್ಧಿ ಖಾತೆ ಕೇಳಿರಲಿಲ್ಲ. ಆದರೆ 2023ರಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ತಮ್ಮ ಮನೆಗೆ ಬಂದು, “ಮುಂದೆ ಸಿಎಂ ಆದಾಗ ನಿಮಗೇ ಆ ಖಾತೆ ನೀಡುತ್ತೇವೆ” ಎಂದು ಭರವಸೆ ನೀಡಿದ್ದರು. ಈಗ ಆ ಭರವಸೆ ಈಡೇರದಿರುವುದರಿಂದ ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಳ್ಳಲು ಸಾಧ್ಯವಿಲ್ಲವೆಂದು ಹೇಳಿದ್ದಾರೆ. ಇದೇ ವಿಚಾರವನ್ನು ಅವರು ರಾಜೀನಾಮೆ ಪತ್ರದಲ್ಲೂ ದಾಖಲಿಸಿದ್ದಾರೆ.

ಸಚಿವ ಸ್ಥಾನ ತ್ಯಜಿಸಿದರೂ ತಾವು ಕಾಂಗ್ರೆಸ್ ಪಕ್ಷದ ಶಾಸಕನಾಗಿ ಹಾಗೂ ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರಿಯುವುದಾಗಿ ಪತ್ರದಲ್ಲಿ ಸ್ಪಷ್ಟಪಡಿಸಿರುವುದು, ಹೈಕಮಾಂಡ್‌ಗೆ ತಮ್ಮ ನಿಷ್ಠೆಯನ್ನು ಮತ್ತೊಮ್ಮೆ ಸಾಬೀತುಪಡಿಸುವಂತಾಗಿದೆ.

ಇದರ ಬೆನ್ನಲ್ಲೇ ದೇವನಹಳ್ಳಿಯಲ್ಲಿ ಮತ್ತೊಂದು ಆಘಾತ ಎದುರಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಹಂಚಿಕೆ ಬಗ್ಗೆ ಅಸಮಾಧಾನಗೊಂಡಿರುವ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ, “ನಾನು ಆಹಾರ ಇಲಾಖೆಯ ಸಚಿವನಾಗಿ ಅಧಿಕಾರ ಸ್ವೀಕರಿಸುವುದಿಲ್ಲ” ಎಂದು ಘೋಷಿಸಿದರು. ಅವರು, ಯುಪಿಎ ಸರ್ಕಾರದಲ್ಲೂ ಸಚಿವನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ, ಯಾರನ್ನೂ ಟೀಕಿಸುವುದಿಲ್ಲ. ಆದರೆ ಖಾತೆ ಹಂಚಿಕೆಯಲ್ಲಿ ಆಗಿರುವ ಲೋಪವನ್ನು ಹೈಕಮಾಂಡ್ ನಾಯಕರೇ ಸರಿಪಡಿಸಬೇಕು ಎಂದು ಸಂದೇಶ ರವಾನಿಸಿದರು.

ರಾಮಲಿಂಗಾ ರೆಡ್ಡಿ ರಾಜೀನಾಮೆಯ ನಂತರ ಮುನಿಯಪ್ಪ ಅವರ ಈ ನಿರ್ಧಾರದಿಂದ ಡಿ.ಕೆ. ಶಿವಕುಮಾರ್ ಸಂಪುಟ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಮಾತನಾಡಿದ ಅವರು, ‘ನಾನು ಯುಪಿಎ ಕೇಂದ್ರ ಸರ್ಕಾರದಲ್ಲೂ ಸಚಿವನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ನಾನು ಯಾರ ಬಗ್ಗೆಯೂ ಟೀಕೆ ಮಾಡುವುದಿಲ್ಲ. ಆದರೆ ಖಾತೆ ಹಂಚಿಕೆಯಲ್ಲಿ ಆಗಿರುವ ಲೋಪವನ್ನು ಹೈಕಮಾಂಡ್ ನಾಯಕರೇ ಸರಿಪಡಿಸುವ ಕೆಲಸ ಮಾಡಬೇಕು’ ಎಂದು ಖಡಕ್ ಸಂದೇಶ ರವಾನಿಸಿದ್ದಾರೆ. ರಾಮಲಿಂಗಾ ರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅವರ ಈ ಹಠಾತ್ ನಿರ್ಧಾರ ಡಿಕೆಶಿ ಸಂಪುಟವನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ.

ರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್

ರಾಮಲಿಂಗಾ ರೆಡ್ಡಿ ಅವರು ಪ್ರಮುಖ ನಾಯಕರು ಹಾಗೂ ನನಗೆ ಬಹಳ ಆತ್ಮೀಯರಾಗಿದ್ದು, ಅವರೊಂದಿಗೆ ನಾನು ಮಾತನಾಡುತ್ತೇನೆ" ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ರಾಮಲಿಂಗಾ ರೆಡ್ಡಿ ಅವರು ರಾಜಿನಾಮೆ ನೀಡಿರುವ ಬಗ್ಗೆ ಕೇಳಿದಾಗ, "ರಾಮಲಿಂಗಾ ರೆಡ್ಡಿ ಅವರು ಗ್ರಾಮೀಣ ಭಾಗದಿಂದ ಬಂದವರಲ್ಲ. ಅವರಿಗೆ ಜಲಸಂಪನ್ಮೂಲ ಸಚಿವಾಲಯ ಸಿಕ್ಕಿದ್ದು, ಅವರು ನಗರ ಪ್ರದೇಶದಲ್ಲಿ ಕೆಲಸ ಮಾಡಲು ಬಯಸಿದ್ದಾರೆ" ಎಂದು ತಿಳಿಸಿದರು.

ಕೆಲವು ಕಾರ್ಯಕರ್ತರು ರಾಜಿನಾಮೆ ನೀಡುತ್ತಿರುವ ಬಗ್ಗೆ ಕೇಳಿದಾಗ, "ಏನೇ ಇದ್ದರು ಶಿಸ್ತು ಬಹಳ ಮುಖ್ಯ" ಎಂದು ತಿಳಿಸಿದರು.

ಅಣ್ಮಮ್ಮ ದೇವಿ ಆಶೀರ್ವಾದ:

ಬೆಂಗಳೂರು ನಗರ ದೇವತೆ ಅಣ್ಣಮ್ಮ ದೇವಿ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಅಣ್ಣಮ್ಮ ದೇವಿ ಬೆಂಗಳೂರಿನ ಗ್ರಾಮ ದೇವತೆ. ನಾಡಿನ ದೇವತೆ ಚಾಮುಂಡಿ ತಾಯಿ. ತಾಯಿ ದರ್ಶನ ಮಾಡಿ ಆಶೀರ್ವಾದ ಪಡೆದು, ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ, ಸಮೃದ್ಧಿ, ನೆಮ್ಮದಿ, ಶಾಂತಿ ಸಿಗಲಿ ಎಂದು ಪ್ರಾರ್ಥಿಸಿ, ಕೆಲಸ ಪ್ರಾರಂಭಿಸಿದ್ದೇನೆ” ಎಂದು ತಿಳಿಸಿದರು.

Comments

Leave a Comment

Prev Post ಸಚಿವರುಗಳಿಗೆ ಖಾತೆಗಳ ಹಂಚಿಕೆ
Next Post ಡಿಜಿಟಲ್ ಪಾರದರ್ಶಕತೆಗೆ ಹೆಜ್ಜೆ – ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಾಜನೀಶ್ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹಾಜರಾತಿ ವ್ಯವಸ್ಥೆ ಕ್ರಾಂತಿ”

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News